ಬೆಂಗಳೂರು: 4 ವರ್ಷದ ಮಗಳನ್ನು ತಾಯಿ ನಾಲ್ಕನೇ ಮಹಡಿಯಿಂದ ಎಸೆದು ಕೊಲೆಗೈದ ಘಟನೆ ಬೆಂಗಳೂರಿನ ಸಂಪಂಗಿರಾಮನಗರ ನಡೆದಿದೆ.
BREAKING NEWS: ಇಂದು, ನಾಳೆ ರಾಜ್ಯಾದ್ಯಂತ ಗುಡುಗು ಸಹಿತ ಭಾರಿ ಮಳೆ; ಹವಾಮಾನ ಇಲಾಖೆ ಮುನ್ಸೂಚನೆ
ಅದಿತ್ವ ಅಪಾರ್ಟ್ ಮೆಂಟ್ ನಲ್ಲಿ ಈ ಘಟನೆ ನಡೆದಿದೆ. ಮಗುವನ್ನು ಜೀತಿ ಎಂದು ಗುರುತಿಸಲಾಗಿದೆ. ತಾಯಿ ತನ್ನ ಮಗಳನ್ನು ಎಸೆಯುತ್ತಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ತಾಯಿಯ ಈ ಅಮಾನವೀಯ ಕೃತ್ಯಕ್ಕೆ ಜನ ರೊಚ್ಚಿಗೆದ್ದಿದ್ದಾರೆ.
ಕೊಲೆಯ ಹಿನ್ನೆಲೆ?
ಪಾಪಿ ತಾಯಿ ಸುಷ್ಮಾ ಇತ್ತೀಚೆಗಷ್ಟೇ ಗಂಡನನ್ನು ಕಳೆದುಕೊಂಡಿದ್ದಳು. ಅನಾರೋಗ್ಯದಿಂದ ಪತಿ ತೀರಿಕೊಂಡಿದ್ದರು ಎಂದು ಹೇಳಲಾಗಿತ್ತು. ಇತ್ತ ಮಗಳು ಬುದ್ಧಿಮಾಂದ್ಯತೆಯಿಂದ ಬಳಲುತ್ತಿದ್ದಾಳೆ ಎಂದು ಈ ಕೃತ್ಯವೆಸಗಿದ್ದಾಳೆ.
ಮಗುವನ್ನು ಮೇಲಿಂದ ಬಿಸಾಕಿದ ಬಳಿಕ ಸುಷ್ಮಾ ತಾನೂ ಆತ್ಮಹತ್ಯೆ ಮಡಿಕೊಳ್ಳಲು ಯತ್ನಿಸಿದ್ದಾಳೆ. ಈ ವೇಳೆ ಅಕ್ಕಪಕ್ಕದ ಮನೆಯವರು ಬಂದು ಆಕೆಯನು ರಕ್ಷಣೆ ಮಾಡಿರುವುದನ್ನು ಸಿಸಿಟಿವಿ ದೃಶ್ಯದಲ್ಲಿ ಕಾಣಬಹುದಾಗಿದೆ.