ಬೆಂಗಳೂರು: ವಾಹನ ಚಲಾಯಿಸುವಾಗ ಟ್ರಾಫಿಕ್ ರೂಲ್ಸ್‌ಗಳನ್ನು ಗಮನದಲ್ಲಿಟ್ಟುಕೊಳ್ಳಬೇಕು. ಕಾನೂನಿನ ಪ್ರಕಾರ ಮದ್ಯಪಾನ ಮಾಡಿ ವಾಹನ ಚಾಲನೆ ಮಾಡುವುದು ಅಪರಾಧವಾಗಿದೆ.
ಡ್ರಿಂಕ್ ಆಂಡ್ ಡ್ರೈವ್ ಮಾಡಿದರೆ ₹2,000 ದಿಂದ ₹10,000ದವರೆಗೆ ದಂಡ ವಿಧಿಸಲಾಗುತ್ತದೆ. ವಾಹನ ಚಾಲನೆ ಮಾಡುವಾಗ ಸೀಟ್ ಬೆಲ್ಟ್ ಧರಿಸುವುದು ಕಡ್ಡಾಯ. ಅಪಘಾತದ ಸಾಧ್ಯತೆಯನ್ನು ತಪ್ಪಿಸಲು ಹಿಂಬದಿಯ ಪ್ರಯಾಣಿಕರು ಸೀಟ್‌ಬೆಲ್ಟ್‌ಗಳನ್ನು ಧರಿಸಬೇಕು. ಪಾದಚಾರಿಗಳಿಗೆ ತೊಂದರೆಯಾಗುವಂತೆ ವಾಹನಗಳನ್ನು ಓಡಿಸಬಾರದು. ವಾಹನ ಚಲಾಯಿಸುವಾಗ ಟ್ರಾಫಿಕ್ ಸಿಗ್ನಲ್‌ಗಳನ್ನು ಅನುಸರಿಸಿ. ಇದರಿಂದ ಅಪಘಾತದ ಪ್ರಮಾಣ ಕಡಿಮೆಯಾಗುತ್ತದೆ.