ಬೆಂಗಳೂರು: ವಾಹನ ಚಲಾಯಿಸುವಾಗ ಟ್ರಾಫಿಕ್‌ ರೂಲ್ಸ್‌ಗಳನ್ನು ಗಮನದಲ್ಲಿಟ್ಟುಕೊಳ್ಳಬೇಕು. ಕಾನೂನಿನ ಪ್ರಕಾರ ಮದ್ಯಪಾನ ಮಾಡಿ ವಾಹನ ಚಾಲನೆ ಮಾಡುವುದು ಅಪರಾಧವಾಗಿದೆ.

ಡ್ರಿಂಕ್‌ ಆಂಡ್‌ ಡ್ರೈವ್‌ ಮಾಡಿದರೆ ₹2,000 ದಿಂದ ₹10,000ದವರೆಗೆ ದಂಡ ವಿಧಿಸಲಾಗುತ್ತದೆ. ವಾಹನ ಚಾಲನೆ ಮಾಡುವಾಗ ಸೀಟ್‌ ಬೆಲ್ಟ್‌ ಧರಿಸುವುದು ಕಡ್ಡಾಯ. ಅಪಘಾತದ ಸಾಧ್ಯತೆಯನ್ನು ತಪ್ಪಿಸಲು ಹಿಂಬದಿಯ ಪ್ರಯಾಣಿಕರು ಸೀಟ್‌ಬೆಲ್ಟ್‌ಗಳನ್ನು ಧರಿಸಬೇಕು. ಪಾದಚಾರಿಗಳಿಗೆ ತೊಂದರೆಯಾಗುವಂತೆ ವಾಹನಗಳನ್ನು ಓಡಿಸಬಾರದು. ವಾಹನ ಚಲಾಯಿಸುವಾಗ ಟ್ರಾಫಿಕ್‌ ಸಿಗ್ನಲ್‌ಗಳನ್ನು ಅನುಸರಿಸಿ. ಇದರಿಂದ ಅಪಘಾತದ ಪ್ರಮಾಣ ಕಡಿಮೆಯಾಗುತ್ತದೆ.

Share.
Exit mobile version