ರಾಮನಗರ: ಕೆರೆಯಲ್ಲಿ ಮುಳುಗಿ ಸಂಸದ ಬಿ. ವೈ ರಾಘವೇಂದ್ರ ಅವರ ಫೋಟೋಗ್ರಾಫರ್ ಪ್ರಸನ್ನ ಭಟ್ ಸಾವನ್ನಪ್ಪಿದ ಘಟನೆ ನಡೆದಿದೆ. ಅವರ ಅಗಲಿಕೆಗೆ ಸಂಸದರು ಸಂತಾಪ ಸೂಚಿಸಿದ್ದಾರೆ.
ಈ ಸಂಬಂಧ ಟ್ವೀಟ್ ಮಾಡಿರುವ ಸಂಸದರು, ಪಕ್ಷದ ಕಾರ್ಯಕ್ರಮಗಳಲ್ಲಿ ಸಕ್ರೀಯರಾಗಿ ಪಾಲ್ಗೊಳ್ಳುತ್ತಿದ್ದ ಸ್ನೇಹಜೀವಿ ಹಾಗೂ ನನ್ನ ಫೋಟೋಗ್ರಾಫರ್ ಆಗಿದ್ದ ಪ್ರಸನ್ನ ಭಟ್ ಅವರ ಅಕಾಲಿಕ ನಿಧನದ ಸುದ್ದಿಯಿಂದ ದುಃಖಿತನಾಗಿದ್ದೇನೆ. ದೇವರು ಅವರ ಆತ್ಮಕ್ಕೆ ಸದ್ಗತಿಯನ್ನು ಕರುಣಿಸಲಿ ಹಾಗೂ ಕುಟುಂಬಕ್ಕೆ ಈ ದುಃಖವನ್ನು ಭರಿಸುವ ಶಕ್ತಿಯನ್ನು ನೀಡಲಿ ಎಂದು ಪ್ರಾರ್ಥಿಸುತ್ತೇನೆ. ಓಂ ಶಾಂತಿ ಎಂದು ಬರೆದುಕೊಂಡಿದ್ದಾರೆ.
ಶಿವಮೊಗ್ಗ ಜಿಲ್ಲೆ ಹೊಸನಗರ ನಿವಾಸಿಯಾಗಿರುವ ಪ್ರಸನ್ನ ಭಟ್ ಕನಕಪುರ ತಾಲೂಕಿನ ಮಾವತ್ತೂರು ಕೆರೆಯಲ್ಲಿ ಸಂಜೆ ಈಜಲು ಹೋಗಿದ್ದ ಸಂದರ್ಭದಲ್ಲಿ ಕೆರೆಯಲ್ಲಿ ಮುಳುಗಿ ಮೃತಪಟ್ಟಿದ್ದಾರೆ. ಪ್ರಸನ್ನ ಭಟ್ ಆರು ಜನರ ತಂಡ ಕನಕಪುರದ ಸ್ನೇಹಿತನ ಮನೆಗೆ ಬಂದಿದ್ದರು. ಅಂತೆಯೇ ಸಂಜೆ ಈಜಾಡಲು ಎಂದು ಮಾವತ್ತೂರು ಕೆರೆ ತೆರಳಿದ್ದರು. ಈಜಾಡುವ ವೇಳೆ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ.
ಪಕ್ಷದ ಕಾರ್ಯಕ್ರಮಗಳಲ್ಲಿ ಸಕ್ರೀಯರಾಗಿ ಪಾಲ್ಗೊಳ್ಳುತ್ತಿದ್ದ ಸ್ನೇಹಜೀವಿ ಹಾಗೂ ನನ್ನ ಫೋಟೋಗ್ರಾಫರ್ ಆಗಿದ್ದ ಶ್ರೀ ಪ್ರಸನ್ನ ಭಟ್ ಅವರ ಅಕಾಲಿಕ ನಿಧನದ ಸುದ್ದಿಯಿಂದ ದುಃಖಿತನಾಗಿದ್ದೇನೆ.
ದೇವರು ಅವರ ಆತ್ಮಕ್ಕೆ ಸದ್ಗತಿಯನ್ನು ಕರುಣಿಸಲಿ ಹಾಗೂ ಕುಟುಂಬಕ್ಕೆ ಈ ದುಃಖವನ್ನು ಭರಿಸುವ ಶಕ್ತಿಯನ್ನು ನೀಡಲಿ ಎಂದು ಪ್ರಾರ್ಥಿಸುತ್ತೇನೆ. ಓಂ ಶಾಂತಿ. pic.twitter.com/IUiisohpxQ
— B Y Raghavendra (@BYRBJP) January 2, 2023