ಚಿಕ್ಕಬಳ್ಳಾಪುರ : ಲೋಕಸಭಾ ಚುನಾವಣೆಗೆ ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿ ಮಾಡಿಕೊಂಡಿದ್ದು ಈಗಾಗಲೇ ಕಾಂಗ್ರೆಸ್ ಹಲವು ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದ್ದು ಶೀಘ್ರದಲ್ಲಿ ಬಿಜೆಪಿಯ ಜೆಡಿಎಸ್ ಕೂಡ ತಮ್ಮ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಲಿದೆ ಆದರೆ ಚಿಕ್ಕಬಳ್ಳಾಪುರ ಕ್ಷೇತ್ರ ಬಿಜೆಪಿಗೆ ತಲೆನೋವು ಆಗಿ ಪರಿಣಿಸಿದ್ದು ಮಾಜಿ ಸಚಿವ ಡಾಕ್ಟರ್ ಕೆ ಸುಧಾಕರ್ ಹಾಗೂ ಶಾಸಕ ಎಸ್ ಆರ್ ವಿಶ್ವನಾಥ್ ನಡುವೆ ಈಗ ತಿಕ್ಕಾಟ ಶುರುವಾಗಿದೆ.
ಹೌದು ಮಾಜಿ ಸಚಿವ ಡಾಕ್ಟರ್ ಕೆ ಸುಧಾಕರ್ ಜೆಡಿಎಸ್ ವರಿಷ್ಠ ದೇವೇಗೌಡರಿಂದ ನನಗೆ ಗ್ರೀನ್ ಸಿಗ್ನಲ್ ಸಿಕ್ಕಿದ್ದು ನಾನು ಲೋಕಸಭೆ ಚುನಾವಣೆಗೆ ತಯಾರಿ ನಡೆಸುತ್ತಿದ್ದೇನೆ ಎಂದು ನಿನ್ನೆ ಅವರು ತಿಳಿಸಿದರು ಆದರೆ ಸರ್ ವಿಶ್ವನಾಥ್ ಅವರು ತಮ್ಮ ಮಗನಿಗೆ ಲೋಕಸಭಾ ಚುನಾವಣೆ ಟಿಕೆಟ್ ಕೊಡಿಸಲು ಸತತ ಪ್ರಯತ್ನ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ ಇದೀಗ ಇವರಿಬ್ಬರ ಒಂದು ಈ ತಿಕ್ಕಾಟಕ್ಕೆ ಬಿಜೆಪಿಗೆ ಈ ಒಂದು ಕ್ಷೇತ್ರ ತಲೆ ನೋವಾಗಿ ಪರಿಣಮಿಸಿದೆ ಎಂದು ಹೇಳಲಾಗುತ್ತಿದೆ.
ತಮಗೆ ಟಿಕೆಟ್ ಖಚಿತ ಎಂದು ಸುಧಾಕರ್ ಕ್ಷೇತ್ರದ ಬಿಜೆಪಿ ಕಾರ್ಯಕ್ರಮಗಳಲ್ಲಿ ಪರೋಕ್ಷವಾಗಿ ಹೇಳಿಕೊಳ್ಳುತ್ತಿದ್ದಾರೆ. ಹೀಗಾಗಿ ಇದು ಎಸ್ಆರ್ ವಿಶ್ವನಾಥ್ ಕೆಂಗಣ್ಣಿಗೆ ಗುರಿಯಾಗಿದೆ. ಯಾಕಂದರೆ ವಿಶ್ವನಾಥ್ ಅವರು ತಮ್ಮ ಪುತ್ರನಿಗೆ ಟಿಕೆಟ್ ಕೊಡಿಸಲು ಇನ್ನಿಲ್ಲದ ಕಸರತ್ತು ನಡೆಸಿದ್ದಾರೆ.
ಮಾಜಿ ಪ್ರಧಾನಿ ಹೆಚ್ಡಿ ದೇವೇಗೌಡರು ಹಾಗೂ ಕುಮಾರಸ್ವಾಮಿ ಅವರು ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಿಂದ ಸ್ಪರ್ಧೆ ಮಾಡಲು ನನಗೆ ಹಸಿರು ನಿಶಾನೆ ತೋರಿದ್ದಾರೆ ಎಂದು ಮಾಜಿ ಸಚಿವ ಡಾ.ಕೆ.ಸುಧಾಕರ್ ಹೇಳಿದ್ದಾರೆ. ನನಗೆ ಬಿಜೆಪಿ ನಾಯಕರು ಟಿಕೆಟ್ ನೀಡುವ ವಿಶ್ವಾಸವಿದೆ. ಹಾಗೆಯೇ ಕುಮಾರಸ್ವಾಮಿ ಹಾಗೂ ಹೆಚ್ ಡಿ ದೇವೇಗೌಡರು ಸಹ ಹಸಿರು ನಿಶಾನೆ ತೋರಿದ್ದು ಕೆಲಸ ಪ್ರಾರಂಭ ಮಾಡಲು ತಿಳಿಸಿದ್ದಾರೆ ಎಂದಿದ್ದಾರೆ.
ನಾನು ಸಂಸದನಾದರೆ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಅಭಿವೃದ್ಧಿ ಮಾಡಲಿದ್ದೇನೆ. ಕೃಷಿ, ನೀರಾವರಿ, ಕೈಗಾರಿಕೆಗಳ ಸ್ಥಾಪನೆ, ಯುವಕರಿಗೆ ಉದ್ಯೋಗ ಕೊಡಿಸವ ಮೂಲಕ ಅಭಿವೃದ್ಧಿ ಏನು ಅಂತ ತೋರಿಸಲಿದ್ದೇನೆ. ಹಾಗಾಗಿ ನಾನು ದೇವ ಮೂಲೆ ಚಾಕ್ ವೇಲ್ ಮೂಲಕ ಚುನಾವಣಾ ಪ್ರಚಾರ ಆರಂಭಿಸಿದ್ದೇನೆ ಎಂದು ನುಡಿದ್ದಾರೆ.
ಕಳೆದ ವಿಧಾನಸಭೆ ಚುನಾವಣೆ ಯಲ್ಲಿ ಸೋತು ನಂತರ ಈಗ ಲೋಕ ಸಮರದತ್ತ ಸುಧಾಕರ್ ಚಿತ್ತ ಹರಿಸಿದ್ದು ದೆಹಲಿಗೆ ಭೇಟಿ ಮಾಡಿ ಇತ್ತೀಚೆಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಡ್ಡಾರನ್ನು ಭೇಟಿಯಾಗಿದ್ದರು.ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ ಎಲ್ ಸಂತೋಷ್, ಪ್ರಹ್ಲಾದ್ ಜೋಷಿ ನಂತರ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ಹಾಗೂ ಕುಮಾರಸ್ವಾಮಿ ಅವರನ್ನು ಹಲವು ಬಾರಿ ಭೇಟಿ ಮಾಡಿ ಸ್ಪರ್ಧೆಗೆ ಅವಕಾಶ ಕೊಡುವಂತೆ ಸುಧಾಕರ್ ಮನವಿ ಮಾಡಿಕೊಂಡಿದ್ದರು.