ಬೆಂಗಳೂರು : ಪದೇ ಪದೇ ಶಿವಮೊಗ್ಗದಲ್ಲಿ ಅಹಿತಕರ ಘಟನೆ ನಡೆಯುತ್ತಿರುವುದಕ್ಕೆ ಮುಸ್ಲಿಂ ಗೂಂಡಾಗಳು ಕಾರಣ, ಇವರಿಗೆ ಕಾಂಗ್ರೆಸ್ ಪ್ರಚೋದನೆ ನೀಡುತ್ತಿದೆ ಎಂದು ಶಾಸಕ ಎಂ.ಪಿ. ರೇಣುಕಾಚಾರ್ಯ ಕಿಡಿಕಾರಿದರು.
ಸುದ್ದಿಗಾರರ ಜೊತೆ ಮಾತನಾಡಿದ ಸಚಿವರು ಕಾಂಗ್ರೆಸ್ ಪ್ರಚೋದನೆ ನೀಡುವುದರಿಂದ ಶಿವಮೊಗ್ಗದಲ್ಲಿ ಇಂತಹ ಘಟನೆಗಳಾಗುತ್ತಿವೆ ಎಂದು ಶಾಸಕ ಎಂ.ಪಿ. ರೇಣುಕಾಚಾರ್ಯ ವಾಗ್ಧಾಳಿ ನಡೆಸಿದರು.
ಶಿವಮೊಗ್ಗದಲ್ಲಿ ಹರ್ಷನ ಕುಟುಂಬಕ್ಕೆ ಕೊಲೆ ಬೆದರಿಕೆ ಹಾಗೂ ಯುವಕನ ಮೇಲೆ ನಡೆದ ಹಲ್ಲೆ ಪ್ರಕರಣ ಸಂಬಂಧ ಶಾಸಕ ಎಂ.ಪಿ. ರೇಣುಕಾಚಾರ್ಯ ಪ್ರತಿಕ್ರಿಯೆ ನೀಡಿದ್ದಾರೆ.ಎಲ್ಲಾ ಮುಸ್ಲಿಮರು ಕೆಟ್ಟವರಲ್ಲ. ಅದರಲ್ಲಿ ಕೆಲ ಕಿಡಿಗೇಡಿಗಳು ಈ ರೀತಿ ಮಾಡುತ್ತಾರೆ. ಶಿವಮೊಗ್ಗದಲ್ಲಿ ಮುಸ್ಲಿಂ ಗೂಂಡಗಳು ಬಹಿರಂಗವಾಗಿ ತಲವಾರುಗಳನ್ನು ಹಿಡಿದು ಬೈಕ್ ಮೇಲೆ ಓಡಾಡುತ್ತಿದ್ದಾರೆ. ಇವರಿಗೆ ಕಾಂಗ್ರೆಸ್ ಪ್ರಚೋದನೆ ನೀಡಿದೆ, ಹಾಗಾಗಿ ಈ ಗೂಂಡಾಗಳು ಇಂತಹ ಕೃತ್ಯ ಎಸಗುತ್ತಿದ್ದಾರೆ ಎಂದು ಹೇಳಿದರು.
ಮಲ್ಲಿಕಾರ್ಜುನ ಖರ್ಗೆ ಪದಗ್ರಹಣ : ನಾಳೆ ದೆಹಲಿಗೆ ತೆರಳಲಿರುವ ಡಿ.ಕೆ ಶಿವಕುಮಾರ್