ಬೆಂಗಳೂರು: ವಿವಿಧ ನಿಗಮ, ಮಂಡಳಿಗಳ 684 ಹುದ್ದೆಗಳ ನೇಮಕಾತಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ (ಕೆಇಎ) ವತಿಯಿಂದ 2023ರ ಅಕ್ಟೋಬರ್-ನವೆಂಬರ್ ಅವಧಿ ಯಲ್ಲಿ ನಡೆಸಲಾಗಿದ್ದ ಪರೀಕ್ಷೆಗಳ ಅಂತಿಮ ಅಂಕಪಟ್ಟಿಯನ್ನು ಪ್ರಾಧಿಕಾರದ ವೆಬ್‌ಸೈಟ್ ನಲ್ಲಿ ಪ್ರಕಟಿಸಲಾಗಿದೆ.

ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ನಿಗಮ (386 ಹುದ್ದೆ), ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ (186), ಎಂಎಸ್‌ಐಎಲ್ (72), ಕಿಯೋನಿಕ್ಸ್ (26), ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ (14) ವಿವಿಧ ವೃಂದದ ಒಟ್ಟು 684 ಹುದ್ದೆಗಳಿಗೆ ಪರೀಕ್ಷೆ ನಡೆಸಲಾಗಿತ್ತು.

ವಿವಿಧ ನಿಗಮ, ಮಂಡಳಿಗಳ 684 ಹುದ್ದೆಗಳ ನೇಮಕಾತಿಗೆ ಒಟ್ಟು 6,18,148 ಅಭ್ಯರ್ಥಿಗಳ ಅಂತಿಮ ಅಂಕ ಪಟ್ಟಿಯನ್ನು ಸಂಬಂಧಪಟ್ಟ ಇಲಾಖೆ/ಸಂಸ್ಥೆಗಳಿಗೆ ಪ್ರಾಧಿಕಾರದಿಂದ ಹಸ್ತಾಂತರಿಸಲಾಗಿದ್ದು, ತದನಂತರ ಸಂಬಂಧಪಟ್ಟ ಇಲಾಖೆ/ ಸಂಸ್ಥೆಗಳು ನಿಯಮಾನುಸಾರ ಆಯ್ಕೆ ಪಟ್ಟಿಗೆ ಸಂಬಂಧಿಸಿದಂತೆ ಮುಂದಿನ ಕ್ರಮ ವಹಿಸುತ್ತವೆ ಎಂದು ಕೆಇಎ ತಿಳಿಸಿದೆ.

Share.
Exit mobile version