ಬೆಂಗಳೂರು: ರಾಜ್ಯಪಾಲರು ಮುಡಾ ಹಗರಣ ಸಂಬಂಧ ಸಿದ್ಧರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿಸಿದ್ದನ್ನು ಪ್ರಶ್ನಿಸಿ ಹೈಕೋರ್ಟ್ ಗೆ ರಿಟ್ ಸಲ್ಲಿಸಲಾಗಿತ್ತು. ಇಂದು ರಿಟ್ ಅರ್ಜಿಯ ವಿಚಾರಣೆಯನ್ನು ಆಗಸ್ಟ್.29ಕ್ಕೆ ಮುಂದೂಡಿದೆ. ಇಂತಹ ನ್ಯಾಯಾಲಯದ ಆದೇಶವನ್ನು ವಿನಮ್ರವಾಗಿ ಸ್ವೀಕರಿಸುತ್ತೇನೆ. ಅಂತಿಮ ಗೆಲುವು ಸತ್ಯದ್ದೇ ಆಗಿರಲಿದೆ ಎಂಬುದು ನನ್ನ ದೃಢ ನಂಬಿಕೆ. ಸತ್ಯಮೇವ ಜಯತೆ ಎಂಬುದಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ ತಿಳಿಸಿದ್ದಾರೆ.
ಈ ಕುರಿತಂತೆ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವಂತ ಅವರು, ಸಂವಿಧಾನ ಮತ್ತು ನ್ಯಾಯಾಂಗ ವ್ಯವಸ್ಥೆಯ ಮೇಲೆ ಅಪಾರ ನಂಬಿಕೆಯಿಟ್ಟಿರುವ, ಈ ನೆಲದ ಕಾನೂನನ್ನು ಗೌರವಿಸುವ ಓರ್ವ ಪ್ರಜೆಯಾಗಿ ಸುಳ್ಳು ಪ್ರಕರಣದಲ್ಲಿ ನನ್ನ ಮೇಲೆ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವ ರಾಜ್ಯಪಾಲರ ರಾಜಕೀಯ ಪ್ರೇರಿತ ನಿರ್ಣಯದ ವಿರುದ್ಧ ಘನ ಉಚ್ಛ ನ್ಯಾಯಾಲಯದ ಮೊರೆ ಹೋಗಿದ್ದೇನೆ ಎಂದು ಹೇಳಿದ್ದಾರೆ.
ಉಚ್ಚ ನ್ಯಾಯಾಲಯವು ಈ ವಿಚಾರವನ್ನು ಆಲಿಸಿ, ಮುಂದಿನ ವಿಚಾರಣೆಯ ವರೆಗೆ ವಿಶೇಷ ನ್ಯಾಯಾಲಯಗಳು ವಿಚಾರಣೆ ಮುಂದೂಡಬೇಕು, ಯಾವುದೇ ಆತುರದ ನಿರ್ಧಾರಗಳನ್ನು ತೆಗೆದುಕೊಳ್ಳಬಾರದು ಎಂಬ ಮಧ್ಯಂತರ ಆದೇಶವನ್ನು ನೀಡಿದೆ ಎಂದಿದ್ದಾರೆ.
ನ್ಯಾಯಾಲಯದ ಈ ಆದೇಶವನ್ನು ವಿನಮ್ರವಾಗಿ ಸ್ವೀಕರಿಸುತ್ತ ನನ್ನ ಧನ್ಯವಾದ ಸಲ್ಲಿಸುತ್ತೇನೆ. ಅಂತಿಮ ಗೆಲುವು ಸತ್ಯದ್ದೇ ಆಗಿರಲಿದೆ ಎಂಬುದು ನನ್ನ ದೃಢ ನಂಬಿಕೆಯಾಗಿದೆ ಎಂದು ತಿಳಿಸಿದ್ದಾರೆ.
ಸಂವಿಧಾನ ಮತ್ತು ನ್ಯಾಯಾಂಗ ವ್ಯವಸ್ಥೆಯ ಮೇಲೆ ಅಪಾರ ನಂಬಿಕೆಯಿಟ್ಟಿರುವ, ಈ ನೆಲದ ಕಾನೂನನ್ನು ಗೌರವಿಸುವ ಓರ್ವ ಪ್ರಜೆಯಾಗಿ ಸುಳ್ಳು ಪ್ರಕರಣದಲ್ಲಿ ನನ್ನ ಮೇಲೆ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವ ರಾಜ್ಯಪಾಲರ ರಾಜಕೀಯ ಪ್ರೇರಿತ ನಿರ್ಣಯದ ವಿರುದ್ಧ ಘನ ಉಚ್ಛ ನ್ಯಾಯಾಲಯದ ಮೊರೆ ಹೋಗಿದ್ದೇನೆ.
ಉಚ್ಚ ನ್ಯಾಯಾಲಯವು ಈ ವಿಚಾರವನ್ನು ಆಲಿಸಿ,…
— Siddaramaiah (@siddaramaiah) August 19, 2024
BREAKING: ಶಿವಮೊಗ್ಗದ ಮೂವರಿಗೆ ‘ಝೀಕಾ ವೈರಸ್’ ದೃಢ | Zika Virus Case
BREAKING : ಹಾವೇರಿಯಲ್ಲಿ ಭೀಕರ ಅಪಘಾತ : ‘NWKRTC’ ಬಸ್ ಪಲ್ಟಿಯಾಗಿ 13 ಪ್ರಯಾಣಿಕರಿಗೆ ಗಂಭೀರ ಗಾಯ!