ಬೆಂಗಳೂರು: ಸಿಎಂ ಸಿದ್ಧರಾಮಯ್ಯ ಅವರ ವಿರುದ್ಧದ ಮುಡಾ ಹಗರಣ ಸಂಬಂಧ ಲೋಕಾಯುಕ್ತದಿಂದ ಬಿ-ರಿಪೋರ್ಟ್ ಸಲ್ಲಿಸಲಾಗಿತ್ತು. ಈ ಬಿ-ರಿಪೋರ್ಟ್ ಪ್ರಶ್ನಿಸಿ ದೂರುದಾರ ಸ್ನೇಹಮಯಿ ಕೃಷ್ಣ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯ ವಿಚಾರಣೆ ನಡೆಸಿದ್ದಂತ ಕೋರ್ಟ್ ನಾಳೆ ಬಿ-ರಿಪೋರ್ಟ್ ತಿರಸ್ಕಾರ, ಅಂಗೀಕಾರದ ಬಗ್ಗೆ ತೀರ್ಪು ಪ್ರಕಟಿಸಲಿದೆ.
ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ವಿರುದ್ಧದ 14 ಮುಡಾ ಸೈಟ್ ಹಗರಣ ಸಂಬಂಧ ನಾಳೆ ಮಹತ್ವದ ತೀರ್ಪನ್ನು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಪ್ರಕಟಿಸಲಿದೆ. ಹೀಗಾಗಿ ಎಲ್ಲರ ಚಿತ್ತ ಜನಪ್ರತಿನಿಧಿಗಳ ತೀರ್ಪಿನತ್ತ ನೆಟ್ಟಿದೆ.
ಮುಡಾ ಹಗರಣದಲ್ಲಿ ಬಿ-ರಿಪೋರ್ಟ್ ಸಲ್ಲಿಸಿದ್ದಂತ ಲೋಕಾಯುಕ್ತದ ನಿರ್ಧಾರವನ್ನು ದೂರುದಾರ ಸ್ನೇಹಮಯಿ ಕೃಷ್ಣ ಪ್ರಶ್ನಿಸಿದ್ದರು. ಈ ಅರ್ಜಿಯ ವಿಚಾರಣೆಯನ್ನು ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯ ನಡೆಸಿತ್ತು. ವಾದ-ಪ್ರತಿವಾದ ಆಲಿಸಿದ್ದಂತ ಕೋರ್ಟ್, ನಾಳೆಗೆ ತನ್ನ ತೀರ್ಪು ಕಾಯ್ದಿರಿಸಿತ್ತು.
ನಾಳೆ ಮುಡಾ ಹಗರಣದಲ್ಲಿ ಲೋಕಾಯುಕ್ತದಿಂದ ಸಲ್ಲಿಸಿರುವಂತ ಬಿ-ರಿಪೋರ್ಟ್ ಅನ್ನು ಅಂಗೀಕರಿಸುವ, ತಿರಸ್ಕರಿಸುವಂತ ನಿರ್ಧಾರವನ್ನು ಆದೇಶದ ಮೂಲಕ ಪ್ರಕಟಿಸಲಿದೆ. ಹೀಗಾಗಿ ಸಿಎಂ ಸಿದ್ಧರಾಮಯ್ಯ ಸೇರಿದಂತೆ ಮುಡಾ ಹಗರಣದ ಆರೋಪಿಗಳಿಗೆ ಕೋರ್ಟ್ ತೀರ್ಪಿನತ್ತ ಚಿತ್ತ ನೆಟ್ಟಿದೆ.
ಅಂಬೇಡ್ಕರ್ ಬಯಸಿದ್ದ ಸಮಾಜ ನಿರ್ಮಿಸಲು ಸರ್ಕಾರದಿಂದ ಪ್ರಾಮಾಣಿಕ ಪ್ರಯತ್ನ: ಸಿಎಂ ಸಿದ್ದರಾಮಯ್ಯ
ನಮ್ಮ ಮೆಟ್ರೋ ಪ್ರಯಾಣಿಕರೇ ಗಮನಿಸಿ : ಇಂದು ಬೆಂಗಳೂರಿನ ಈ ಪ್ರದೇಶಗಳಲ್ಲಿ4 ಹೆಚ್ಚುವರಿ ರೈಲು ಸಂಚಾರ.!