ಮೈಸೂರು: ಮುಡಾ ಹಗರಣ ಸಂಬಂಧ ಇಡಿ ವಿಚಾರಣೆಗೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ಬಾಮೈದ ಮಲ್ಲಿಕಾರ್ಜುನ ಸ್ವಾಮಿ ಅವರು ಹಾಜರಾದರು.
ಮುಡಾ ಕೇಸ್ ಸಂಬಂಧ ವಿಚಾರಣೆಗೆ ಹಾಜರಾಗುವಂತೆ ಜಾರಿ ನಿರ್ದೇಶನಾಲಯದಿಂದ ನೋಟಿಸ್ ನೀಡಲಾಗಿತ್ತು. ಈ ನೋಟಿಸ್ ಕಾರಣದಿಂದಾಗಿ ಇಂದು ಇಡಿ ಕಚೇರಿಗೆ ತೆರಳಿ ವಿಚಾರಣೆಗೆ ಹಾಜರಾಗದರು.
ಇಡಿ ಅಧಿಕಾರಿಗಳು ಕೇಳಿದಂತ ಪ್ರಶ್ನೆಗಳಿಗೆ ಸಿಎಂ ಬಾಮೈದ ಮಲ್ಲಿಕಾರ್ಜುನ ಉತ್ತರಿಸಿದ್ದಾರೆ ಎನ್ನಲಾಗುತ್ತಿದೆ.
ಅಂದಹಾಗೇ ದೇವರಾಜು ಎಂಬುವರ ಬಳಿಯಲ್ಲಿ ಭೂಮಿಯನ್ನು ಸಿಎಂ ಬಾಮೈದ ಮಲ್ಲಿಕಾರ್ಜುನ ಖರೀದಿಸಿದ್ದರು. ಇದರ ಬಳಿಕ ಮುಡಾದಿಂದ ಪ್ರತಿಯಾಗಿ ಸಿಎಂ ಪತ್ನಿಗೆ 14 ಸೈಟ್ ನೀಡಿದ್ದು ವಿವಾದಕ್ಕೆ ಕಾರಣವಾಗಿತ್ತು.