ಧಾರವಾಡ : ಮುಖ್ಯಮಂತ್ರಿ ಸಿದ್ಧರಾಮಯ್ಯ ವಿರುದ್ಧದ ಮುಡಾ ಹಗರಣ ಸಂಬಂಧ ಲೋಕಾಯುಕ್ತ ತನಿಖೆ ಬೇಡ, ಸಿಬಿಐ ತನಿಖೆಗೆ ವಹಿಸುವಂತೆ ಕೋರಿದ್ದಂತ ಅರ್ಜಿಯ ವಿಚಾರಣೆ ನಡೆಸಿದಂತ ಹೈಕೋರ್ಟ್, ತನ್ನ ಆದೇಶವನ್ನು ಕಾಯ್ದಿರಿಸಿದೆ.
ಇಂದು ಧಾರವಾಡದ ಹೈಕೋರ್ಟ್ ಏಕಸದಸ್ಯ ನ್ಯಾಯಪೀಠವು ಮುಡಾ ನಿವೇಶನ ಹಂಚಿಕೆ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಬೇಕು ಎಂದು ಕೋರಿ ಸ್ನೇಹಮಯಿ ಕೃಷ್ಣ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ನಡೆಸಿತು.
ಸ್ನೇಹಮಯಿ ಕೃಷ್ಣ ಪರ ಹಿರಿಯ ವಕೀಲ ಮಣೀಂದರ್ ಸಿಂಗ್ ಪರವಾಗಿ ವಾದ ಮಂಡಿಸಿ, ಜನಸಾಮಾನ್ಯರ ಮನಸ್ಸಿನಲ್ಲಿ ಸ್ವತಂತ್ರ ತನಿಖೆ ನಡೆದಿದೆ ಎಂಬುವುದು ಲೋಕಾಯುಕ್ತ ತನಿಖೆಯಿಂದ ಸಾಧ್ಯವಿಲ್ಲ. ಹೀಗಾಗಿ, ಕೇಂದ್ರೀಯ ಸಂಸ್ಥೆಗಳ ತನಿಖೆ ನೀಡಬೇಕು ಎಂದು ರಾಜ್ಯ ಸರ್ಕಾರದ ಅಧೀನದಲ್ಲಿರುವ ಲೋಕಾಯುಕ್ತ ಮೇಲೆ ಜನರಿಗೆ ಅನುಮಾನ ಬರುವಂತಿದೆ ಎಂದರು.
ಈ ಪ್ರಕರಣ ಸಂಬಂಧ ಯಾವ ತನಿಖಾ ಸಂಸ್ಥೆಯು ಪ್ರಕರಣದ ತನಿಖೆ ನಡೆಸಬೇಕು ಎಂಬುದನ್ನು ಆರೋಪಿ ನಿರ್ಧರಿಸು ಅವಕಾಶವಿಲ್ಲ. ಪ್ರಕರಣದಲ್ಲಿ ಏನೆಲ್ಲಾ ಬೆಳವಣಿಗೆಗಳು ಹೊರಗೆ ಬಂದಿವೆ ಅವುಗಳನ್ನು ಮುಚ್ಚಿಡುವ ಕೆಲಸವಾಗುತ್ತಿದೆ. ಹೀಗಾಗಿ ಈ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಬೇಕು ವಾದಿಸಿದರು.
ಸಿಎಂ ಪರ ಅಭಿಷೇಕ್ ಮನು ಸಿಂಘ್ವಿ, ರಾಜ್ಯ ಸರ್ಕಾರದ ಪರ ಕಪಿಲ್ ಸಿಬಲ್ ವಾದಿಸಿ ದೂರುದಾರರಾದ ಸ್ನೇಹಮಯಿ ಕೃಷ್ಣ ಅವರ ಹಿನ್ನೆಲೆಯನ್ನು ನ್ಯಾಯಪೀಠ ಗಮನಿಸಬೇಕು. ಇದು 15 ವರ್ಷ ಹಿಂದಿನ ಪ್ರಕರಣ. ಈ ಹಿಂದೆ ದೂರುದಾರರೇ ಲೋಕಾಯುಕ್ತ ತನಿಖೆ ಕೋರಿ ಮನವಿ ಸಲ್ಲಿಸಿದ್ದರು. ಈಗ ಸಿಬಿಐ ತನಿಖೆಗೆ ಕೋರಿದ್ದಾರೆ ಎಂದು ಆಕ್ಷೇಪ ವ್ಯಕ್ತಪಿಸಿದರು.
ಇದೇ ವೇಳೆ ವಿಚಾರಣೆಯನ್ನು ಮುಂದೂಡುವಂತೆ ಎಜಿ ಸಲ್ಲಿಸಿದ ಕೋರಿಕೆಗೆ ಪ್ರತಿಕ್ರಿಯಿಸಿದ ನ್ಯಾಯಪೀಠ, ವಿಚಾರಣೆ ಮುಂದೂಡಲು ಸಾಧ್ಯವಿಲ್ಲ. ಇಂದಿನ ದಿನಾಂಕಕ್ಕೆ ವಿಚಾರಣೆ ನಿಗದಿಯಾಗಿದೆ ಎಂದಿತು. ವಾದ ಪ್ರತಿವಾದವನ್ನು ಆಲಿಸಿದಂತ ನ್ಯಾಯಪೀಠವು, ತನ್ನ ತೀರ್ಪು ಕಾಯ್ದಿರಿಸಿದೆ.
SHOCKING : ಹಾಸ್ಟೆಲ್ ನಲ್ಲಿ `ಲೋ ಬಿಪಿ’ಯಿಂದ ಕುಸಿದು ಬಿದ್ದು 8 ನೇ ತರಗತಿ ವಿದ್ಯಾರ್ಥಿ ಸಾವು.!