ಬೆಂಗಳೂರು: ಮುಖ್ಯಮಂತ್ರಿ ಸಿದ್ಧರಾಮಯ್ಯ ವಿರುದ್ಧದ ಮುಡಾ ಹಗರಣ ಸಂಬಂಧ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ನೀಡಿದ್ದಂತ ಅನುಮತಿ ಪ್ರಶ್ನಿಸಿ ಸಲ್ಲಿಸಿದ್ದಂತ ಅರ್ಜಿಯ ವಿಚಾರಣೆಯ ನಂತ್ರ, ನಾಳೆ ಮಧ್ಯಾಹ್ನ 12 ಗಂಟೆಗೆ ಹೈಕೋರ್ಟ್ ತೀರ್ಪು ಪ್ರಕಟಿಸಲಿದೆ.
ಸಿಎಂ ಸಿದ್ಧರಾಮಯ್ಯ ವಿರುದ್ಧ ಮುಡಾ ಹಗರಣದ ಆರೋಪ ಕೇಳಿ ಬಂದಿತ್ತು. ಈ ಪ್ರಕರಣ ಸಂಬಂಧ ಪ್ರಾಸಿಕ್ಯೂಷನ್ ಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅನುಮತಿ ನೀಡಿದ್ದರು.
ರಾಜ್ಯಪಾಲರು ಮುಡಾ ಹಗರಣ ಸಂಬಂಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ್ದನ್ನು ಪ್ರಶ್ನಿಸಿ ಸಿಎಂ ಸಿದ್ಧರಾಮಯ್ಯ ಅವರು ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ವಾದ ಪ್ರತಿವಾದವನ್ನು ಆಲಿಸಿದ್ದಂತ ಹೈಕೋರ್ಟ್ ತೀರ್ಪು ಕಾಯ್ದಿರಿಸಿತ್ತು.
ಹೈಕೋರ್ಟ್ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರು ಸಿಎಂ ಸಿದ್ಧರಾಮಯ್ಯ ವಿರುದ್ಧದ ಮುಡಾ ಹಗರಣದ ಸಂಬಂಧ ತೀರ್ಪನ್ನು ನಾಳೆ ಮಧ್ಯಾಹ್ನ 12 ಗಂಟೆಗೆ ಪ್ರಕಟಿಸಲಿದ್ದಾರೆ. ಈ ಮೂಲಕ ಮುಡಾ ಹಗರಣದ ಸಿಎಂ ಭವಿಷ್ಯ ನಾಳೆ ನಿರ್ಧಾರವಾಗಲಿದೆ.
ಪುಣೆ ವಿಮಾನ ನಿಲ್ದಾಣಕ್ಕೆ ಜಗದ್ಗುರು ಸಂತ ತುಕಾರಾಮ್ ಮಹಾರಾಜ್ ಹೆಸರಿಡುವ ಪ್ರಸ್ತಾವಕ್ಕೆ ಮಹಾರಾಷ್ಟ್ರ ಸರ್ಕಾರ ಒಪ್ಪಿಗೆ
BREAKING : ಬೆಂಗಳೂರಲ್ಲಿ ‘CCB’ ಭರ್ಜರಿ ಬೇಟೆ : 1 ಕೋಟಿಗು ಅಧಿಕ ಮೌಲ್ಯದ ‘ಡ್ರಗ್ಸ್’ ಜೊತೆ ದಂಪತಿಗಳು ಅರೆಸ್ಟ್!
BREAKING : ಮಹಾಲಕ್ಷ್ಮಿ ಹಂತಕ ಬೆಂಗಳೂರಲ್ಲೇ ವಾಸವಿದ್ದ, ಶೀಘ್ರದಲ್ಲಿ ಬಂಧಿಸಲಾಗುತ್ತೆ : ಕಮಿಷನರ್ ಬಿ.ದಯಾನಂದ್