ಮೈಸೂರು : ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದು, ಈ ಒಂದು ಪ್ರಕರಣ ಹೈಕೋರ್ಟ್ ನಲ್ಲಿ ವಿಚಾರಣೆ ನಡೆಯುತ್ತಿದ್ದು, ಇದರ ಮಧ್ಯ ಮುಡಾದ ಮಾಜಿ ಆಯುಕ್ತರು ಹಾಗೂ ಅಧಿಕಾರಗಳನ್ನ ತನಿಖೆಗೆ ಒಳಪಡಿಸಬೇಕೆಂದು ಮೈಸೂರು ಕೆ.ಆರ್.ಕ್ಷೇತ್ರದ ಬಿಜೆಪಿ ಶಾಸಕ ಶ್ರೀವತ್ಸ ಅವರು ಕರ್ನಾಟಕ ಲೋಕಾಯುಕ್ತಕ್ಕೆ ದೂರು ಸಲ್ಲಿಸಿದ್ದಾರೆ.
ಹೌದು ಮುಡಾ ಆಯುಕ್ತರಾಗಿ ಈ ಹಿಂದೆ ಕೆಲಸ ಮಾಡಿದ ದಿನೇಶ್ ಕುಮಾರ್, ನಟೇಶ್ ಹಾಗೂ ಭೂಸ್ವಾಧೀನಾಧಿಕಾರಿ, ನಗರ ಯೋಜನಾ ಅಧಿಕಾರಿ ಮತ್ತು ನಗರಾಭಿವೃದ್ಧಿ ಕಾರ್ಯದರ್ಶಿಯ ವಿರುದ್ಧ ತನಿಖೆ ನಡೆಸಬೇಕೆಂದು ಮೈಸೂರು ನಗರದ ಬಿಜೆಪಿ ಶಾಸಕ ಟಿ.ಎಸ್. ಶ್ರೀವತ್ಸ ಅವರು ಕರ್ನಾಟಕ ಲೋಕಾಯುಕ್ತಕ್ಕೆ ದೂರು ಸಲ್ಲಿಸಿದ್ದಾರೆ.
ಮುಡಾದಲ್ಲಿ ಸುಮಾರು 5000 ಕೋಟಿ ಅಕ್ರಮ ನಡೆದಿದ್ದು, ಸರ್ಕಾರಕ್ಕೆ ಅಪಾರ ಪ್ರಮಾಣದಲ್ಲಿ ನಷ್ಟವಾಗಿದೆ. ಹಾಗಾಗಿ ಈ ಕುರಿತು ಸಂಪೂರ್ಣವಾಗಿ ತನಿಖೆ ನಡೆಸಬೇಕು. ಈ ಅಕ್ರಮದಲ್ಲಿ ಭಾಗಿಯಾಗಿರುವ ಅಧಿಕಾರಿಗಳ ವಿರುದ್ಧ ಕೂಡಲೇ ಕ್ರಿಮಿನಲ್ ಮೊಕದ್ದಮೆ ದಾಖಲಿಸಿ, ಅವರನ್ನು ಬಂಧಿಸಿ ತನಿಖೆ ನಡೆಸಬೇಕು ಎಂದು ದೂರಿನಲ್ಲಿ ಶಾಸಕರು ಲೋಕಾಯುಕ್ತರಿಗೆ ಮನವಿ ಮಾಡಿದ್ದಾರೆ.