ಕಲಬುರಗಿ : ಮುಡಾ ಹಗರಣದ ಕುರಿತು ಬಿಜೆಪಿ ನಿಲುವು ಸ್ಪಷ್ಟವಿದೆ. ಈ ಹಗರಣ ಕೇವಲ 14 ನಿವೇಶನಗಳಿಗೆ ಸೀಮಿತವಲ್ಲ. ಒಂದೆಡೆ 14 ನಿವೇಶನಗಳಿದ್ದರೆ, ಇನ್ನೊಂದೆಡೆ 4 ರಿಂದ 5 ಸಾವಿರ ಕೋಟಿ ಬೆಲೆಬಾಳುವ ನಿವೇಶನಗಳು ರಿಯಲ್ ಎಸ್ಟೇಟ್, ದಲ್ಲಾಳಿಗಳ ಪಾಲಾಗಿದೆ. ಇದೆಲ್ಲವುಗಳ ಸಮಗ್ರ ತನಿಖೆ ಆಗಬೇಕೆಂದರೆ ಅದು ಸಿಬಿಐನಿಂದ ಮಾತ್ರ ಸಾಧ್ಯ ಎಂದು ಮಾಜಿ ಶಾಸಕ ರಾಜಕುಮಾರ ಪಾಟೀಲ್ ತೇಲ್ಕೂರ ಹೇಳಿದ್ದಾರೆ.
ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿರುವ ಅವರು ಇದೀಗ ವಿಶೇಷ ನ್ಯಾಯಾಲಯವು ಮುಡಾ ಹಗರಣದ ತನಿಖೆಗೆ ಸೂಚಿಸಿದೆ. ಸಿಎಂ ಸಿದ್ದರಾಮಯ್ಯ ಅವರು ಹಿಂದೆ ವಿರೋಧ ಪಕ್ಷದ ನಾಯಕರಾಗಿದ್ದಾಗ ಹೇಳಿದ ಮಾತನ್ನು ನೆನಪಿಸಿಕೊಳ್ಳಬೇಕು. ಮೈಸೂರಿನ ಲೋಕಾಯುಕ್ತ ಪೊಲೀಸರಿಂದ ತನಿಖೆ ಸಾಧ್ಯವೇ? ಮುಖ್ಯಮಂತ್ರಿಗಳ ತವರು ಜಿಲ್ಲೆಯಲ್ಲಿರುವ ಲೋಕಾಯುಕ್ತ ಪೊಲೀಸರು, ರಾಜ್ಯದಲ್ಲಿರುವ ಲೋಕಾಯುಕ್ತ ಪೊಲೀಸರಿಂದ ಯಾವುದೇ ರೀತಿ ನ್ಯಾಯಯುತ ತನಿಖೆ ನಡೆಸಲು ಅಸಾಧ್ಯ ಎಂದು ಹೇಳಿದ್ದರು.
ರಾಜ್ಯಪಾಲರು ಕೇಂದ್ರದ ಕೈಗೊಂಬೆಯಂತೆ ವರ್ತಿಸುತ್ತಾರೆ. ಬಿ ಜೆ ಪಿ ಸರ್ಕಾರ ಚುನಾಯಿತ ಸರ್ಕಾರವನ್ನು ಅಸ್ಥಿರಗೊಳಿಸುತ್ತಿದೆ ಅನ್ನೋ ಆರೋಪ ಮಾಡುವ , ಕಾಂಗ್ರೆಸ್ಸಿಗರು ಇತಿಹಾಸವನ್ನು ಒಮ್ಮೆ ನೆನಪಿಸಿಕೊಳ್ಳಲಿ ಅಂದಿನ ಕೇಂದ್ರದ ಕಾಂಗ್ರೆಸ್ ಸರ್ಕಾರಗಳು ಸಂವಿಧಾನದ 356 ನೇ ವಿಧಿಯನ್ನು “ದುರುಪಯೋಗ” ಮಾಡುವ ಮೂಲಕ 90 ರಾಜ್ಯ ಸರ್ಕಾರಗಳನ್ನು ವಜಾಗೊಳಿಸಿವೆ ಮತ್ತು ಮಾಜಿ ಪ್ರಧಾನಿ ಇಂದಿರಾ ಗಾಂಧಿಯವರು 50 ಬಾರಿ “ದುರುಪಯೋಗಪಡಿಸಿಕೊಂಡರು. ಈ ವಿಚಾರರ ಗೊತ್ತಿಲ್ಲವೇ ಕಾಂಗ್ರೆಸ್ಸಿಗರಿಗೆ ? ಎಂದು ಪ್ರಶ್ನಿಸಿದ್ದರು.
ದೇಶದಲ್ಲಿ ಸರ್ವಾಧಿಕಾರಿಯಾಗಿ ಮೆರೆದ ಕಾರಣಕ್ಕೆ ಜನ ಕೇಂದ್ರದಲ್ಲಿ ಕಾಂಗ್ರೆಸ್ಸಿಗೆ ಅಧಿಕಾರ ನೀಡಿಲ್ಲಾ , ಈ ನೆಲದ ಕಾನೂನಿನ ಬಗ್ಗೆ, ನ್ಯಾಯಾಲಯದ ಬಗ್ಗೆ , ಸಂವಿಧಾನದ ಬಗ್ಗೆ ಕಾಂಗ್ರೆಸ್ಸಿಗರಿಗೆ ಗೌರವವಿಲ್ಲಾ , ಸಚಿವ ಜಮೀರ್ ಅಹಮದ್ ಮೂಡ ಹಗರಣದ ಬಗೆಗಿನ ನ್ಯಾಯಾಲಯದ ಆದೇಶವನ್ನು ಪೊಲಿಟಿಕಲ್ ಜೆಡ್ಜ್ಮೆಂಟ್ ಎಂದು ಮಾಧ್ಯಮಗಳ ಮುಂದೆ ನೀಡಿರುವ ಹೇಳಿಕೆಯೇ ಇದಕ್ಕೆ ಸಾಕ್ಷಿ ಎಂದರು.
ಕೇಜ್ರಿವಾಲ್ ಮಾದರಿ ಆಡಳಿತ ಕರ್ನಾಟಕಕ್ಕೆ ಸಲ್ಲದು. ರಿಸೈನ್ ವಿಥ್ ಸ್ಮೈಲ್ ಆಗಿರಬೇಕೇ ಹೊರತು ವರ್ಕ್ ಫ್ರಮ್ ಜೈಲ್ ಆಗಿರಬಾರದು. ಸಿದ್ದರಾಮಯ್ಯ ಕಾನೂನು ಪದವೀಧರರು ತನ್ನ ಸಹುದ್ಯೋಗಿಗಳಿಗೆ ಕಾನೂನಿನ ಪಾಠಮಾಡೋ ಲಾ ಮಾಸ್ಟರ್, ಮೇಸ್ಟ್ರು ತಪ್ಪು ಮಾಡಬಾರದು ಹಾಗಾಗಿ ಈ ನೆಲದ ಕಾನೂನಿಗೆ ಗೌರವ ಕೊಟ್ಟು ಕೂಡಲೇ ಸಿದ್ದರಾಮಯ್ಯ ರಾಜನಾಮೆ ನೀಡಿ ಪಕ್ಷಪಾತ ರಹಿತ. ನ್ಯಾಯ ಸಮ್ಮತ ತನಿಖೆಗೆ ಅವಕಾಶ ಮಾಡಿಕೊಡಬೇಕು.ಮಹಾನ್ ಯಡವಟ್ಟು ರಾಮಯ್ಯ ಮುಖ್ಯ ಮಂತ್ರಿಯಾಗಿ ಮುಂದುವರೆಯುವುದರಲ್ಲಿ ಅರ್ಥವಿಲ್ಲ ಎಂದು ತೇಲ್ಕೂರ ಕಿಡಿಕಾರಿದ್ದಾರು.
SHOCKING: ವಿಧಾನಸೌಧ, ವಿಕಾಸಸೌಧದಲ್ಲೂ ಶಾಸಕ ಮುನಿರತ್ನ ರೇ**: ಸಂತ್ರಸ್ತೆ ಸ್ಪೋಟಕ ಹೇಳಿಕೆ