ಬೆಂಗಳೂರು : ಮುಡಾ ಹಗರಣದ ವಿಚಾರವಾಗಿ ಪ್ರತಿಪಕ್ಷ ಬಿಜೆಪಿ ಮಾಡುತ್ತಿರುವ ಆರೋಪಗಳನ್ನು ಸಿಎಂ ಸಿದ್ದರಾಮಯ್ಯ ನಿರಾಕರಿಸಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಅವರು, ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸುವುದಿಲ್ಲ ಎಂದು ತಿಳಿಸಿದರು.
ಈ ಒಂದು ವಿಷಯದ ಕುರಿತಾಗಿ ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಕರಣ ಸಿಬಿಐಗೆ ವಹಿಸುವ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ನಮ್ಮ ಪೊಲೀಸರನೇ ಸಮರ್ಥರಿಲ್ಲವಾ? ಎಲ್ಲದಕ್ಕೂ ಸಿಬಿಐ ಸಿಬಿಐ ಅನ್ನುವ ಬಿಜೆಪಿ ತಮ್ಮ ಅವಧಿಯಲ್ಲಿ ಎಷ್ಟು ಕೇಸ್ಗಳನ್ನು ಸಿಬಿಐಗೆ ಕೊಟ್ಟಿದ್ದಾರೆ ಹೇಳಿ? ಈಗೀನ ಸಿಬಿಐ ಮುಖ್ಯಸ್ಥ ಕೂಡ ಕರ್ನಾಟಕದಲ್ಲಿ ಕೆಲಸ ಮಾಡಿದವರು. ನಮ್ಮ ಪೊಲೀಸರು ತನಿಖೆ ವಿಚಾರದಲ್ಲಿ ಸಮರ್ಥರಿದ್ದಾರೆ. ಮುಡಾ ಹಗರವನ್ನ ಸಿಬಿಐಗೆ ವಹಿಸುವುದಿಲ್ಲ ಎಂದು ಸಿಎಂ ಸ್ಪಷ್ಟವಾಗಿ ನಿರಾಕರಿಸಿದರು.
ಎಷ್ಟು ಸಲ ಇದರ ಬಗ್ಗೆ ಹೇಳುವುದು? ಮುಡಾದಲ್ಲಿ 50:50 ರದ್ದಾಗಿದೆ. ನನ್ನ ಹೆಂಡತಿಯ ವಿಚಾರವನ್ನು ವಿವಾದ ಮಾಡುತ್ತಿದ್ದಾರೆ. ನಾನು ವಿಜಯನಗರದಲ್ಲಿ ಸೈಟ್ ಕೊಡಿ ಎಂದು ಕೇಳಿಲ್ಲ.ನಮ್ಮ ಜಮೀನಿನನ್ನು ನಿಯಮಬಾಹಿರವಾಗಿ ಭೂಸ್ವಾಧೀನ ಮಾಡಿಕೊಂಡಿದ್ದರು. ಅದಕ್ಕೆ ಅವರೇ ತಪ್ಪಾಯಿತು ಎಂದು ಹೇಳಿ ಸೈಟ್ ಕೊಟ್ಟಿದ್ದಾರೆ. ಇದರಲ್ಲಿ ಯಾವ ವಿವಾದ ಇದೆ ಹೇಳಿ ಎಂದರು.