ಬೆಂಗಳೂರು: ಮುಡಾ ಹಗರಣದಲ್ಲಿ ರಾಜ್ಯಪಾಲರಿಗೆ ಸಿಎಂ ಸಿದ್ಧರಾಮಯ್ಯ ವಿರುದ್ಧ ಮತ್ತೊಂದು ದೂರು ನೀಡಲಾಗಿದೆ. ಈ ಹಿನ್ನಲೆಯಲ್ಲಿ ಮುಡಾ ಅಕ್ರಮದಲ್ಲಿ ಸಿಎಂ ಸಿದ್ಧರಾಮಯ್ಯ ಅವರಿಗೆ ಮತ್ತಷ್ಟು ಸಂಕಷ್ಟ ಎದುರಾದಂತೆ ಆಗಿದೆ.
ಇಂದು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಗೆ ಪತ್ರಕರ್ತ ಮತ್ತು ಸಾಮಾಜಿಕ ಹೋರಾಟಗಾರ ಸ್ನೇಹಮಯಿ ಕೃಷ್ಣ ಎಂಬುವರು ಸಿಎಂ ಸಿದ್ಧರಾಮಯ್ಯ ವಿರುದ್ಧದ ಮುಡಾ ಹಗರಣ ಸಂಬಂಧ ಮತ್ತೊಂದು ದೂರು ನೀಡಿದ್ದಾರೆ.
ಅವರು ನೀಡಿರುವಂತ ದೂರಿನಲ್ಲಿ ಸರ್ಕಾರದ ಆದೇಶಕ್ಕೆ ವಿರುದ್ಧವಾಗಿ ನಿಮ್ಮ ಹೆಸರಿನಲ್ಲಿ ಪರಿತ್ಯಾಜನ ಪತ್ರವನ್ನು ನೊಂದಾಯಿಸಿ ಕೊಂಡಿರುವುದನ್ನು ಗಂಭಿರವಾಗಿ ಪರಿಗಣಿಸಿ, ಕೂಡಲೇ “ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಪ್ರದ.ಸ.ರಾದ ಕೆ.ಸಿ.ಉಮೇಶ್ ಹಾಗೂ ಸಂಬಂಧಪಟ್ಟ ಇತರ ಅಧಿಕಾರಿಗಳನ್ನು ಕೆಲಸದಿಂದ ವಜಾಗೊಳಿಸಿ, ಸದರಿಯವರ ವಿರುದ್ಧ ಭಾರತೀಯ ನ್ಯಾಯ ಸಂಹಿತೆಯ ಕಲಂ 223 ಮತ್ತು ಇತರ ಸೂಕ್ತ ಕಲಂಗಳ ಪ್ರಕಾರ ಮೊಕದ್ದಮೆ ದಾಖಲಿಸಿ, ಸದರಿ ಪರಿತ್ಯಾಜನ ಪತ್ರವನ್ನು, ಇದೇ ರೀತಿಯಲ್ಲಿ “ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ”ದಿಂದ ನಿಮ್ಮ ಪರವಾಗಿ ನೊಂದಾಯಿಸಿಕೊಂಡಿರುವ ಎಲ್ಲಾ ಪರಿತ್ಯಾಜನ ಪತ್ರಗಳನ್ನು ಕೂಡಲೇ ರದ್ದು ಪಡಿಸುವಂತೆ ಕರ್ನಾಟಕ ಸರ್ಕಾರದ ಮುಖ್ಯ ಕಾರ್ಯದರ್ಶಿಗಳಿಗೆ ತುರ್ತು ಸೂಚನೆ ನೀಡಲು ಮನವಿ ಮಾಡಲಾಗಿದೆ.
ಈ ಮೂಲಕ ಮನವಿ ಮಾಡಿಕೊಳ್ಳುವುದೇನೆಂದರೆ, ಕರ್ನಾಟಕದ ಹಾಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ತಮ್ಮ ಅಧಿಕಾರವನ್ನು ದುರ್ಬಳಕೆ ಮಾಡಿಕೊಂಡು, ತಮ್ಮ ಕುಟುಂಬದವರ ಹೆಸರಿನಲ್ಲಿ ಸುಳ್ಳು ದಾಖಲೆಗಳನ್ನು ಸೃಷ್ಟಿ ಮಾಡಿಸಿಕೊಂಡು, “ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ”ದಿಂದ ಕೋಟ್ಯಾಂತರ ರೂಪಾಯಿ ಬೆಲೆ ಬಾಳುವ 14 ನಿವೇಶನ ಗಳನ್ನು ಅಕ್ರಮವಾಗಿ ಪಡೆದಿರುವ ಬಗ್ಗೆ ಈಗಾಗಲೇ ನಿಮ್ಮನ್ನೂ ಸೇರಿದಂತೆ ಹಲವು ತನಿಖಾ ಸಂಸ್ಥೆಗಳಿಗೆ ದೂರರ್ಜಿಗಳನ್ನು ನೀಡಿದ್ದು, ಆನಂತರ ಮಾನ್ಯ ನ್ಯಾಯಾಲಯದಲ್ಲಿ ಖಾಸಾಗಿ ದೂರರ್ಜಿಯನ್ನು ಸಲ್ಲಿಸಿರು ತೇನೆ. ಆ ಸಂದರ್ಭದಲ್ಲಿ ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಸಿದ್ದರಾಮಯ್ಯನವರ ಹೆಂಡತಿ ಬಿ.ಎಂ. `ಪಾರ್ವತಿರವರು ದಿನಾಂಕ :-25.11.2021 ರಂದು ನಿಮ್ಮ ಪರವಾಗಿ “ಪ್ರಾಧಿಕಾರ”ದ ಪ್ರಥಮ ದರ್ಜೆ ಸಹಾಯಕರಾದ ಕೆ.ಸಿ.ಉಮೇಶ್‌ರವರ ಹೆಸರಿಗೆ, ಮೈಸೂರು ಜಿಲ್ಲೆ ಮತ್ತು ತಾಲ್ಲೂಕು, ಕಸಬಾ ಹೋಬಳಿ, ಕೆಸರೆ ಗ್ರಾಮದ ಸರ್ವೆ ನಂ.464 ರ 3.16 ಎಕರೆ ಜಮೀನಿಗೆ ಸಂಬಂಧಿಸಿದಂತೆ ಪರಿತ್ಯಾಜನ ಪತ್ರವನ್ನು ನೊಂದಣಿ ಮಾಡಿಕೊಟ್ಟಿರುವ ದಾಖಲೆಯು ಲಭ್ಯವಾಗಿತ್ತು ಎಂದಿದ್ದಾರೆ.
ಇತ್ತೀಚೆಗೆ ನನಗೆ ಲಭ್ಯವಾಗಿರುವ ದಾಖಲೆಯ ಪ್ರಕಾರ ದಿನಾಂಕ :-30,09,2020 ರಂದು ಕರ್ನಾಟಕ ಸರ್ಕಾರದ ನಗರಾಭಿವೃದ್ಧಿ ಇಲಾಖೆಯಿಂದ ನಅಇ 578 ಮೈಅಪ್ರಾ 2016 ಸಂಖ್ಯೆಯ ಸುತ್ತೋಲೆಯನ್ನು ಹೊರಡಿಸಿ (ಸದರಿ ಸುತ್ತೋಲೆಯ ನಕಲು ಪ್ರತಿಯನ್ನು ಲಗತ್ತಿಸಿರುತ್ತೇನೆ), ರಾಜ್ಯದಲ್ಲಿನ ಎಲ್ಲಾ ಸ್ಥಳೀಯ ಸಂಸ್ಥೆಗಳು/ ನಗರಾಭಿವೃದ್ಧಿ ಪ್ರಾಧಿಕಾರಗಳು/ಯೋಜನಾ ಪ್ರಾಧಿಕಾರಗಳು/ ಯೋಜನಾ ಪ್ರಾಧಿಕಾರಗಳು ತಮ್ಮ ವ್ಯಾಪ್ತಿಯಲ್ಲಿ ಬರುವ ಯಾವುದೇ ವಿಧವಾದ ಕೃಷಿ ಜಮೀನನ್ನು ಭೂ ಮಾಲೀಕರಿಂದ ನೇರವಾಗಿ ಹಸ್ತಾಂತರಿಸಿಕೊಳ್ಳಬೇಕಾದ ಸಂದರ್ಭ ಬಂದಲ್ಲಿ ತಪ್ಪದೇ ಪಾಲಿಸಬೇಕಾದ ಸೂಚನೆಗಳನ್ನು ನೀಡಿ, “ಜಿಲ್ಲಾಧಿಕಾರಿಗಳು ಕಂದಾಯ ಕಾಯ್ದೆಯಡಿ ಅಧಿಸೂಚನೆ ಹೊರಡಿಸಿದ ನಂತರ ಸ್ಥಳೀಯ ಸಂಸ್ಥೆಗಳು ಹಸ್ತಾಂತರಿಸಿಕೊಳ್ಳಲು ಕ್ರಮ ಕೈಗೊಳ್ಳುವುದು” ಎಂದು ಮುಂದುವರೆದು, “ಸ್ಥಳೀಯ ಸಂಸ್ಥೆಗಳು, ವ್ಯವಸಾಯ ಜಮೀನುಗಳಲ್ಲಿನ ಜಾಗವನ್ನು ರಸ್ತೆಯೆಂದು ಭೂ ಮಾಲೀಕರು ಪರಿತ್ಯಾಜನ ಪತ್ರದ ಮೂಲಕ ನೀಡಿದಲ್ಲಿ ಅಂತಹ ಜಾಗಗಳನ್ನು ಹಸ್ತಾಂತರಿಸಿಕೊಳ್ಳಬಾರದು” ಎಂದು ಸ್ಪಷ್ಟವಾಗಿ ತಿಳಿಸಲಾಗಿದೆ ಎಂದಿದ್ದಾರೆ.
ಈ ಮೇಲ್ಕಂಡ ಅಂಶಗಳನ್ನು ಗಮನಿಸಿದಾಗ ಸರ್ಕಾರದ ಆದೇಶಕ್ಕೆ ವಿರುದ್ಧವಾಗಿ ನಡೆದುಕೊಂಡಿರುವ “ಪ್ರಾಧಿಕಾರ”ದ ಪ್ರಥಮ ದರ್ಜೆ ಸಹಾಯಕರಾದ ಕೆ.ಸಿ ಉಮೇಶ್‌ರವರು, ನಿಮ್ಮ ಪರವಾಗಿ ಬಿ.ಎಂ.ಪಾರ್ವತಿರವರಿಂದ ಪರಿತ್ಯಾಜನ ಪತ್ರವನ್ನು ನೊಂದಣಿ ಮಾಡಿಕೊಂಡಿರುತ್ತಾರೆ. ನಿಮ್ಮ ಹೆಸರಿನಲ್ಲಿ ಈ ಕಾನೂನು ಬಾಹಿರ ಕೃತ್ಯ ನಡೆದಿರುವುದರಿಂದ ಈ ವಿಚಾರವನ್ನು ತಾವು ಗಂಭೀರವಾಗಿ ಪರಿಗಣಿಸಿ, ಕೂಡಲೇ ಸದರಿ ಪರಿತ್ಯಾಜನ ಪತ್ರವನ್ನು ನಿಮ್ಮ ಪರವಾಗಿ ನೊಂದಣಿ ಮಾಡಿಸಿಕೊಂಡಿರುವ ಕೆ.ಸಿ.ಉಮೇಶ್ (ಇವರು ಸಿದ್ದರಾಮಯ್ಯನವರ ಆಪ್ತ ಸಹಾಯಕರಾಗಿ ಕೆಲಸ ಮಾಡಿದ್ದಾರೆಂಬ ಮಾಹಿತಿಯೂ ಇದೆ) ಮತ್ತು ಇತರೆ ಸಂಬಂಧಪಟ್ಟ ಅಧಿಕಾರಿಗಳನ್ನು ವಜಾಗೊಳಿಸಿ, ಸದರಿಯವರ ವಿರುದ್ಧ ಭಾರತೀಯ ನ್ಯಾಯ ಸಂಹಿತೆಯ ಕಲಂ 223 ಮತ್ತು ಇತರೆ ಸೂಕ್ತ ಕಲಂಗಳ ಪ್ರಕಾರ ಮೊಕದ್ದಮೆ ದಾಖಲಿಸುವಂತೆ, ಸದರಿ ಪರಿತ್ಯಾಜನ ಪತ್ರವನ್ನು ಹಾಗೂ ಇದೇ ರೀತಿಯಲ್ಲಿ “ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ”ದಿಂದ ನಿಮ್ಮ ಪರವಾಗಿ ನೊಂದಣಿ ಮಾಡಿಕೊಂಡಿರುವ ಎಲ್ಲಾ ಪರಿತ್ಯಾಜನ ಪತ್ರಗಳನ್ನು ರದ್ದು ಪಡಿಸುವಂತೆ ಕರ್ನಾಟಕ ಸರ್ಕಾರದ ಮುಖ್ಯ ಕಾರ್ಯದರ್ಶಿಗಳಿಗೆ ತುರ್ತು ಸೂಚನೆ ನೀಡುವ ಮೂಲಕ, ಮುಂದಿನ ದಿನಗಳಲ್ಲಿ ಯಾವುದೇ ಸರ್ಕಾರಿ ಅಧಿಕಾರಿ ಈ ರೀತಿ ನಿಮ್ಮ ಪರವಾಗಿ (ನಿಮ್ಮ ಹೆಸರಿನಲ್ಲಿ ಕಾನೂನು ಬಾಹಿರ ಚಟುವಟಿಕೆ ನಡೆಸದಂತೆ ಕಠಿಣ ಕ್ರಮಗಳನ್ನು ತೆಗೆದುಕೊಳ್ಳಲು ಸೂಕ್ತ ಸೂಚನೆ ನೀಡಲು ಕಳಕಳಿಯಿಂದ ಮನವಿ ಮಾಡಿದ್ದಾರೆ.
ಡೋಪಿಂಗ್ ನಿಯಮ ಉಲ್ಲಂಘನೆ: ಪ್ಯಾರಾಲಿಂಪಿಯನ್ ಪ್ರಮೋದ್ ಭಗತ್ ಗೆ 18 ತಿಂಗಳು ನಿಷೇಧ