ಬೆಂಗಳೂರು : ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರು ಸಿಎಂ ಸಿದ್ದರಾಮಯ್ಯ ಅವರಿಗೆ ಪ್ರಾಸಿಕ್ಯೂಷನ್ ನೋಟಿಸ್ ಜಾರಿ ಮಾಡಿದ್ದರು.ಇದಾದ ಬಳಿಕ ರಾಜ್ಯದಲ್ಲಿ ಹಲವಾರು ರೀತಿ ಬೆಳವಣಿಗೆ ನಡೆದವು. ಇದೀಗ ನೋಟಿಸ್ ನೀಡಿದ ಬಳಿಕ ಸಿಎಂ ಸಿದ್ದರಾಮಯ್ಯ ಇಂದು ಮೊದಲ ಬಾರಿಗೆ ರಾಜಭವನಕ್ಕೆ ಭೇಟಿ ನೀಡಲಿದ್ದಾರೆ.
ಹೌದು ಸಿಎಂ ಸಿದ್ದರಾಮಯ್ಯ ಕೆಲವೇ ಕ್ಷಣಗಳಲ್ಲಿ ರಾಜಭವನಕ್ಕೆ ಭೇಟಿ ನೀಡಲಿದ್ದಾರೆ. ಲಘು ಉಪಹಾರ ಕೂಟ ಆಯೋಜನೆ ಮಾಡಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜಭವನಕ್ಕೆ ಭೇಟಿ ನೀಡಲಿದ್ದಾರೆ. ಈ ವೇಳೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೊಟ್ ಅವರನ್ನು ಭೇಟಿ ಮಾಡುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.
ಇದೆ ವೇಳೆ ಮುಡಾ ಪ್ರಕರಣದ ಬಗ್ಗೆ ರಾಜ್ಯಪಾಲರ ಜೊತೆಗೆ ಚರ್ಚಿಸುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಕೆಲವೇ ಕ್ಷಣಗಳಲ್ಲಿ ರಾಜಭವನಕ್ಕೆ ಸಿಎಂ ಸಿದ್ದರಾಮಯ್ಯ ಅವರು ಭೇಟಿ ನೀಡಲಿದ್ದಾರೆ. ಲಘು ಉಪಹಾರ ಕೂಟ ಆಯೋಜನೆಯಲ್ಲಿ ಸಿದ್ದರಾಮಯ್ಯ ಭೇಟಿ ನೀಡಲಿದ್ದಾರೆ. ಹಾಗಾಗಿ ಸಿಎಂ ಸಿದ್ದರಾಮಯ್ಯ ಅವರ ಭೇಟಿ ಇದೀಗ ತೀವ್ರ ಕುತೂಹಲ ಮೂಡಿಸಿದೆ.