Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BIG NEWS : ಯುದ್ಧದ ಎಫೆಕ್ಟ್ : ಗಲ್ಫ್ ರಾಷ್ಟ್ರಗಳಿಗೆ ರಫ್ತಾಗುತ್ತಿದ್ದ ಈರುಳ್ಳಿಗೆ ಬಿತ್ತು ಬ್ರೇಕ್, ರೈತರು ಕಂಗಾಲು!

30/03/2026 4:26 PM

ಹೋಮ್ ಲೋನ್ EMI ಮಿಸ್ ಆಗಿದೆಯೇ? ದಂಡ, ಸಿಬಿಲ್ ಸ್ಕೋರ್ ಮೇಲಾಗುವ ಪರಿಣಾಮಗಳೇನು? ಇಲ್ಲಿದೆ ಓದಿ

30/03/2026 4:23 PM

BREAKING : ಷೇರುಪೇಟೆಯಲ್ಲಿ ರಕ್ತಪಾತ ; ಸೆನ್ಸೆಕ್ಸ್ 1,635 ಅಂಕಗಳಿಗೆ ಕುಸಿದು ಹೂಡಿಕೆದಾರರಿಗೆ 10 ಲಕ್ಷ ಕೋಟಿ ರೂ. ನಷ್ಟ!

30/03/2026 4:16 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಮುಡಾ ಹಗರಣ: ಕೋರ್ಟ್ ತೀರ್ಮಾನದ ಮೇಲೆ ಸಿಎಂ ಭವಿಷ್ಯ ನಿರ್ಧಾರವಾಗಲಿದೆ: ಬಸವರಾಜ ಬೊಮ್ಮಾಯಿ
KARNATAKA

ಮುಡಾ ಹಗರಣ: ಕೋರ್ಟ್ ತೀರ್ಮಾನದ ಮೇಲೆ ಸಿಎಂ ಭವಿಷ್ಯ ನಿರ್ಧಾರವಾಗಲಿದೆ: ಬಸವರಾಜ ಬೊಮ್ಮಾಯಿ

By kannadanewsnow0901/09/2024 3:39 PM

ಮಂಡ್ಯ: ಮುಡಾ ಹಗರಣದ ವಿಚಾರ ಕೋರ್ಟ್‌ನಲ್ಲಿ ವಿಚಾರಣೆ ನಡೆಯುತ್ತಿರುವುದರಿಂದ ಕೋರ್ಟ್ ಆದೇಶದ ಮೇಲೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮುಂದುವರೆಯುತ್ತಾರೆಯೋ ಇಲ್ಲವೋ ಎನ್ನುವುದು ತೀರ್ಮಾನ ಆಗಲಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಅವರು ಭಾನುವಾರ ಮಂಡ್ಯದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿ, ಒಂದು ಪ್ರಕರಣವನ್ನು ಪ್ರಾಷಿಕ್ಯೂಶನ್‌ಗೆ ಕೊಟ್ಟಿರುವುದು ಇದೇ ಮೊದಲ ಪ್ರಕರಣ ಅಲ್ಲ. ಹಲವಾರು ರಾಜ್ಯಗಳಲ್ಲಿ ಹಲವಾರು ಪ್ರಕರಣಗಳು ಆಗಿವೆ. ರಾಜ್ಯದಲ್ಲಿಯೂ ಆಗಿವೆ. ಇದೊಂದು ಸ್ಥಾಪಿತ ವ್ಯವಸ್ಥೆ ಆಗಿದೆ. ಹಲವಾರು ಸುಪ್ರೀಂ ಕೋರ್ಟ್ ತೀರ್ಪುಗಳು ಇವೆ. 2018 ರಲ್ಲಿ ಒಂದು ತಿದ್ದುಪಡಿ ಆಗಿದೆ. ಅದರ ಆಧಾರದಲ್ಲಿ ಈಗ ಚರ್ಚೆಗೆ ಗ್ರಾಸವಾಗಿದೆ. ಸಂವಿಧಾನದ ಕಲಂ 17/2 ತಿದ್ದುಪಡಿ ಆದ ನಂತರ ಏನು ಬದಲಾವಣೆ ಆಗಿದೆ ಎನ್ನುವುದನ್ನು ಇಲ್ಲಿ ಒಂದು ಗಮನಿಸಬೇಕು. ಕಾಂಗ್ರೆಸ್ ಮಿತ್ರರು ಯಾಕೆ ಅಷ್ಟೊಂದು ಆತಂಕಕ್ಕೆ ಒಳಗಾಗಿದ್ದಾರೊ ಗೊತ್ತಿಲ್ಲ. ರಾಜ್ಯಪಾಲರು ಒಂದು ತನಿಖೆ ನಡೆಸುವಂತೆ ಆದೇಶ ಮಾಡಿದ್ದಾರೆ. ಯಡಿಯೂರಪ್ಪ ಅವರ ಪ್ರಕರಣದಲ್ಲಿ ಹಾಗೆ ಆಗಿರಲಿಲ್ಲ. ತನಿಖೆ ಅಂತ ಇರಲಿಲ್ಲ. ಪ್ರಾಶಿಕ್ಯೂಷನ್ ಮಾಡಿ ಅಂಥ ಹೇಳಿದ್ದರು. ಎಫ್‌ಐಆರ್ ಆಗಿ ತನಿಖೆಯಾಗಿ, ಚಾರ್ಜ್‌ ಶೀಟ್ ಆದ ನಂತರ ಪ್ರಾಶಿಕ್ಯೂಷನ್ ಮಾಡಲಾಗುತ್ತದೆ. ಅದು ಯಾವುದನ್ನೂ ಮಾಡದೇ ನೇರವಾಗಿ ಸೆಸನ್ಸ್ ಕೋರ್ಟ್‌ಗೆ ಸಮನ್ಸ್ ಮಾಡುವ ಅಧಿಕಾರವನ್ನು ನೀಡಲಾಗಿತ್ತು. ಅವತ್ತಿನ ಗೌರ್ನರ್ ಆದೇಶದ ಬಗ್ಗೆ ಹಲವಾರು ಕೋರ್ಟ್‌ಗಳಲ್ಲಿ ಟೀಕೆ ಟಿಪ್ಪಣಿ ಆಗಿ, ಆದೇಶಗಳೂ ಆಗಿವೆ. ಇವತ್ತು ರಾಜ್ಯಪಾಲರು ಕೇವಲ ತನಿಖೆ ನಡೆಸಲು ಹೇಳಿದ್ದಾರೆ. ಕೋರ್ಟ್‌ನಲ್ಲಿ ನಡೆಯುತ್ತಿದೆ. ಅಂತಿಮ ಘಟಕ್ಕೆ ಬಂದಿದೆ. ಏನಾಗುತ್ತದೆಯೋ ಕಾದು ನೋಡೋನ ಎಂದರು.

ಕಾಂಗ್ರೆಸ್‌ನವರು ಬಿಜೆಪಿ ನಾಯಕರ ವಿರುದ್ಧ ಪ್ರಾಶಿಕ್ಯೂಷನ್‌ಗೆ ಅನುಮತಿ ಕೋರಿ ರಾಜ್ಯಪಾಲರನ್ನು ಭೇಟಿ ಮಾಡಿರುವ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಈಗಾಗಲೇ ರಾಜ್ಯಪಾಲರು ಉತ್ತರ ಕೊಟ್ಟಿದ್ದಾರೆ. ಕೆಲವು ಮಾಹಿತಿ ಕೇಳಿದ್ದೇನೆ ಎಂದು ಹೇಳಿದ್ದಾರೆ. ಅದು ಏನೇ ಇರಲಿ, ಆ ಪ್ರಕರಣಗಳಿಗೂ, ಸಿದ್ದರಾಮಯ್ಯ ಅವರ ಪ್ರಕರಣಕ್ಕೂ ತಳಕು ಹಾಕುವ ಕೆಲಸ ಮಾಡಬಾರದು. ಇದು ರಾಜ್ಯದ ಮುಖ್ಯಸ್ಥನ ಮೇಲೆ ಇರುವ ಪ್ರಕರಣ ಆಗಿರುವುದರಿಂದ ಹೆಚ್ಚಿನ ಆದ್ಯತೆ ದೊರೆಯುತ್ತದೆ ಎಂದು ಹೇಳಿದರು.

ಮುಖ್ಯಮಂತ್ರಿ ಸಿದ್ದರಾಮ್ಯಯ ರಾಜೀನಾಮೆ ಕೊಡುತ್ತಾರಾ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಕೋರ್ಟ್‌ನ ತೀರ್ಮಾನದ ಮೇಲೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮುಂದುವರೆಯುವ ಬಗ್ಗೆ ತೀರ್ಮಾನ ಆಗಲಿದೆ. ರಾಜಕೀಯವಾಗಿ ಏನೇ ವಿಶ್ಲೇಷಣೆ ಮಾಡಿದರೂ, ಪ್ರಕರಣ ಕೋರ್ಟ್‌ಗೆ ಹೋಗಿರುವುದರಿಂದ ಕೋರ್ಟ್ ಆದೇಶದ ಮೇಲೆ ಅವರ ಭವಿಷ್ಯ ನಿರ್ಧಾರವಾಗಲಿದೆ. ರಾಜ್ಯ ಸರ್ಕಾರವನ್ನು ಅಸ್ಥಿರಗೊಳಿಸಲಾಗುತ್ತಿದೆ ಎಂಬ ಆರೋಪ ಸತ್ಯಕ್ಕೆ ದೂರವಾದದ್ದು. ಯಾವುದೇ ರೀತಿಯ ಆಧಾರ ಇಲ್ಲದೇ,
ತಮ್ಮನ್ನು ತಾವು ಉಳಿಸಿಕೊಳ್ಳುವ ಪ್ರಯತ್ನದಲ್ಲಿ ರಾಜಕೀಯ ಆರೋಪ ಬಂದಾಗ ಈ ರೀತಿ ಮಾಡುವುದು ಸಹಜ. ಇದೇನು ಹೊಸದಲ್ಲ. ಹಳೆಯ ತಂತ್ರಗಳು ಎಂದು ಹೇಳಿದರು.

ಬಿಜೆಪಿ ಸರ್ಕಾರದ ಅವಧಿಯಲ್ಲಿ ನಡೆದಿದೆ ಎನ್ನಲಾದ ಕೊವಿಡ್ ಹಗರಣದ ಕುರಿತು ಪ್ರತಿಕ್ರಿಯಿಸಿದ ಅವರು. ಈ ಸರ್ಕಾರ ಕೊವಿಡ್ ವಿಚಾರದಲ್ಲಿ ತನಿಖೆ ನಡೆಸಲು ಆಯೋಗ ರಚನೆ ಮಾಡಿದ್ದರು. ಆ ಆಯೋಗ ಸಿಎಂಗೆ ವರದಿ ಸಲ್ಲಿಸಿದೆ. ಅದರಲ್ಲಿ ಏನಿದೆಯೋ ಗೊತ್ತಿಲ್ಲ. ಎಲ್ಲವೂ ಹೊರಗೆ ಬರಲಿ ಅದಕ್ಕೆ ಉತ್ತರ ಕೊಡುತ್ತೇವೆ. ನಮ್ಮ ಕಾಲದ ಹಗರಣದ ಕುರಿತು ತನಿಖೆ ನಡೆಸಲು ಯಾವುದೇ ಅಡ್ಡಿಯಿಲ್ಲ. ಯಾರು ರಾಜಕೀಯವಾಗಿ ಆರೋಪ ಮಾಡಿ ಮಸಿ ಬಳಿಯುವ ಕೆಲಸ ಮಾಡಿದ್ದಾರೆ ಅವರಿಗೂ ಶಿಕ್ಷೆಯಾಗಲಿ ಎಂದರು.

ವರಿಷ್ಠರ ತೀರ್ಮಾನ

ಚನ್ನಪಟ್ಟಣ ಉಪಚುನಾವಣೆ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಚನ್ನಪಟ್ಟಣ ಉಪ ಚುನಾವಣೆ ಕುರಿತು ಮಾಜಿ ಮುಖ್ಯಮಂತಿ ಹಾಗೂ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರೊಂದಿಗೆ ಚರ್ಚೆ ನಡೆಸಿದ್ದೇವೆ. ಅವರು ತಮ್ಮ ಪಕ್ಷದ ಪಮುಖರ ಜೊತೆಗೆ ಚರ್ಚೆ ಮಾಡುತ್ತಾರೆ. ಹಾಗೂ ಎನ್‌ಡಿಎ ಪಕ್ಷದ ವರಿಷ್ಠರ ಜೊತೆ ಚರ್ಚಿಸಿ ಬಿಜೆಪಿ ವರಿಷ್ಠರು ಹಾಗೂ ಕುಮಾರಸ್ವಾಮಿ ತೀರ್ಮಾನ ಮಾಡಲಿದ್ದಾರೆ ಎಂದು ಹೇಳಿದರು.

BREAKING: ನಾಳೆಯಿಂದ ಬೆಂಗಳೂರಲ್ಲಿ ಗುತ್ತಿಗೆದಾರರಿಂದ ಎಲ್ಲಾ ಕಾಮಗಾರಿ ಸ್ಥಗಿತ | BBMP News

ಪಡಿತರ ಚೀಟಿಯಲ್ಲಿ ಹೆಸರು ಸೇರ್ಪಡೆ ಮಾಡಿದವರ ಗಮನಕ್ಕೆ : ರೇಷನ್ ಕಾರ್ಡ್ ನಲ್ಲಿ ನಿಮ್ಮ ಹೆಸರು ಈ ರೀತಿ ಚೆಕ್ ಮಾಡಿಕೊಳ್ಳಿ!

ಅ‌. 1ರಂದು ಮೋದಿ ಅಂಡ್ ಕಂಪನಿಗೆ ಜಮ್ಮು-ಕಾಶ್ಮೀರದ ಯುವಕರು ನಿರ್ಗಮನ ದ್ವಾರ ತೋರಿಸಲಿದ್ದಾರೆ: ಖರ್ಗೆ

Share. Facebook Twitter LinkedIn WhatsApp Email

Related Posts

BIG NEWS : ಯುದ್ಧದ ಎಫೆಕ್ಟ್ : ಗಲ್ಫ್ ರಾಷ್ಟ್ರಗಳಿಗೆ ರಫ್ತಾಗುತ್ತಿದ್ದ ಈರುಳ್ಳಿಗೆ ಬಿತ್ತು ಬ್ರೇಕ್, ರೈತರು ಕಂಗಾಲು!

30/03/2026 4:26 PM1 Min Read

BIG NEWS: ರಾಜ್ಯದಲ್ಲೊಂದು ಧಾರುಣ ಘಟನೆ: ಹಾಲುಣಿಸಿದ ಕೆಲವೇ ಕ್ಷಣದಲ್ಲೇ ಹಸುಗೂಸಿನ ತಾಯಿ ಸಾವು

30/03/2026 4:05 PM2 Mins Read

BIG NEWS : ಕರ್ತವ್ಯ ವೇಳೆ ಲಂಚ ಪಡೆದ ಆರೋಪ ಹಿನ್ನೆಲೆ : ಬೆಂಗಳೂರಲ್ಲಿ ಮೂವರು ಪೊಲೀಸ್ ಸಿಬ್ಬಂದಿ ಸಸ್ಪೆಂಡ್

30/03/2026 3:55 PM1 Min Read
Recent News

BIG NEWS : ಯುದ್ಧದ ಎಫೆಕ್ಟ್ : ಗಲ್ಫ್ ರಾಷ್ಟ್ರಗಳಿಗೆ ರಫ್ತಾಗುತ್ತಿದ್ದ ಈರುಳ್ಳಿಗೆ ಬಿತ್ತು ಬ್ರೇಕ್, ರೈತರು ಕಂಗಾಲು!

30/03/2026 4:26 PM

ಹೋಮ್ ಲೋನ್ EMI ಮಿಸ್ ಆಗಿದೆಯೇ? ದಂಡ, ಸಿಬಿಲ್ ಸ್ಕೋರ್ ಮೇಲಾಗುವ ಪರಿಣಾಮಗಳೇನು? ಇಲ್ಲಿದೆ ಓದಿ

30/03/2026 4:23 PM

BREAKING : ಷೇರುಪೇಟೆಯಲ್ಲಿ ರಕ್ತಪಾತ ; ಸೆನ್ಸೆಕ್ಸ್ 1,635 ಅಂಕಗಳಿಗೆ ಕುಸಿದು ಹೂಡಿಕೆದಾರರಿಗೆ 10 ಲಕ್ಷ ಕೋಟಿ ರೂ. ನಷ್ಟ!

30/03/2026 4:16 PM

BIG NEWS: ರಾಜ್ಯದಲ್ಲೊಂದು ಧಾರುಣ ಘಟನೆ: ಹಾಲುಣಿಸಿದ ಕೆಲವೇ ಕ್ಷಣದಲ್ಲೇ ಹಸುಗೂಸಿನ ತಾಯಿ ಸಾವು

30/03/2026 4:05 PM
State News
KARNATAKA

BIG NEWS : ಯುದ್ಧದ ಎಫೆಕ್ಟ್ : ಗಲ್ಫ್ ರಾಷ್ಟ್ರಗಳಿಗೆ ರಫ್ತಾಗುತ್ತಿದ್ದ ಈರುಳ್ಳಿಗೆ ಬಿತ್ತು ಬ್ರೇಕ್, ರೈತರು ಕಂಗಾಲು!

By kannadanewsnow0530/03/2026 4:26 PM KARNATAKA 1 Min Read

ಯಾದಗಿರಿ : ದೇಶದ ವಿವಿಧ ಭಾಗಗಳಲ್ಲಿ ಈರುಳ್ಳಿ ಬೆಲೆ ಏರಿಕೆಯಾಗುತ್ತಿದೆ ಎಂದು ಗ್ರಾಹಕರು ಚಿಂತಿಸುತ್ತಿದ್ದರೆ, ಇತ್ತ ಬೆಳೆ ಬೆಳೆದ ರೈತರಿಗೆ…

BIG NEWS: ರಾಜ್ಯದಲ್ಲೊಂದು ಧಾರುಣ ಘಟನೆ: ಹಾಲುಣಿಸಿದ ಕೆಲವೇ ಕ್ಷಣದಲ್ಲೇ ಹಸುಗೂಸಿನ ತಾಯಿ ಸಾವು

30/03/2026 4:05 PM

BIG NEWS : ಕರ್ತವ್ಯ ವೇಳೆ ಲಂಚ ಪಡೆದ ಆರೋಪ ಹಿನ್ನೆಲೆ : ಬೆಂಗಳೂರಲ್ಲಿ ಮೂವರು ಪೊಲೀಸ್ ಸಿಬ್ಬಂದಿ ಸಸ್ಪೆಂಡ್

30/03/2026 3:55 PM

BREAKING: ಶಿವಮೊಗ್ಗದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಹಳ್ಳಕ್ಕೆ ಬಿದ್ದ ಬಸ್, 35 ಪ್ರಯಾಣಿಕರಿಗೆ ಗಾಯ

30/03/2026 3:48 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.