ಬೆಂಗಳೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ಅಕ್ರಮ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿ ದೂರುದಾರ ಸ್ನೇಹಮಯಿ ಕೃಷ್ಣ ಗಂಭೀರ ಆರೋಪ ಮಾಡಿದ್ದು, ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿ ಬರೆದ ಪತ್ರದಿಂದಲೇ ಸತ್ಯಾಂಶ ಗೊತ್ತಾಗುತ್ತಿದೆ. ಎಂದು ಗಂಭೀರ ಆರೋಪ ಮಾಡಿದರು.
ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸ್ವತಃ ಸಿದ್ದರಾಮಯ್ಯನವರು ಈ ಒಂದು ಸತ್ಯಾಂಶ ಮರೆಮಾಚಿ ಸುಳ್ಳನ್ನು ಹೇಳುತ್ತಿದ್ದಾರೆ. ಮುಡಾ ಅಕ್ರಮದಲ್ಲಿ ಸಿಎಂ ಮತ್ತು ಅವರ ಕುಟುಂಬ ಭಾಗಿಯಾಗಿದೆ. 2001ರಲ್ಲಿ ಮುಡಾ ಜಮೀನನ್ನು ಸ್ವಾಧೀನ ಪಡಿಸಿಕೊಂಡಿದ್ದಾರೆ. ಸಿಎಂ ಬಾಮೈದ 2004ರಲ್ಲಿ ಹೇಗೆ ಕೃಷಿಭೂಮಿ ಕರಿಸುತ್ತಾರೆ?
ಸಿಎಂ ಪತ್ನಿ ಪಾರ್ವತಿ ಮುಡಾಗೆ ಬರೆದಿರುವ ಪತ್ರ ಮಹತ್ವದ್ದಾಗಿದೆ. ಈ ಪತ್ರಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಸ್ಪಷ್ಟಣೆ ನೀಡಲಿ. ಮೇಲ್ನೋಟಕ್ಕೆ ದಾಖಲೆಗಳನ್ನು ಗಮನಿಸಿದರೆ ಆರೋಪ ಸಾಬೀತಾಗುತ್ತಿದೆ ಎಂದು ಬೆಂಗಳೂರಿನಲ್ಲಿ ದೂರುದಾರ ಸ್ನೇಹಮಯಿ ಕೃಷ್ಣ ಹೇಳಿಕೆ ನೀಡಿದರು.