ಬೆಂಗಳೂರು: ಮುಡಾ ಹಗರಣ ಸಂಬಂಧ ಮಹತ್ವದ ಬೆಳವಣಿಗೆಯೊಂದರಲ್ಲಿ ಇಡಿ ಅಧಿಕಾರಿಗಳು ಮುಡಾಗೆ ಸಂಬಂಧಿಸಿದಂತ ರೂ.300 ಕೋಟಿ ಮೌಲ್ಯ 142 ಸ್ಥಿರಾಸ್ತಿಗಳನ್ನು ಮುಟ್ಟುಗೋಲು ಹಾಕಿಕೊಂಡಿದೆ.
ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಜಾರಿ ನಿರ್ದೇಶನಾಲಯದಿಂದ ಮಾಹಿತಿ ಹಂಚಿಕೊಂಡಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಇತರರ ವಿರುದ್ಧದ ಪ್ರಕರಣಕ್ಕೆ ಸಂಬಂಧಿಸಿದಂತೆ ಪಿಎಂಎಲ್ಎ 2002 ರ ನಿಬಂಧನೆಗಳ ಅಡಿಯಲ್ಲಿ ರಿಯಲ್ ಎಸ್ಟೇಟ್ ಉದ್ಯಮಿಗಳು ಮತ್ತು ಏಜೆಂಟರಾಗಿ ಕೆಲಸ ಮಾಡುತ್ತಿರುವ ವಿವಿಧ ವ್ಯಕ್ತಿಗಳ ಹೆಸರಿನಲ್ಲಿ ನೋಂದಾಯಿಸಲಾದ 300 ಕೋಟಿ ರೂ.ಗಳ ಮಾರುಕಟ್ಟೆ ಮೌಲ್ಯದ 142 ಸ್ಥಿರಾಸ್ತಿಗಳನ್ನು ಜಾರಿ ನಿರ್ದೇಶನಾಲಯ ತಾತ್ಕಾಲಿಕವಾಗಿ ಮುಟ್ಟುಗೋಲು ಹಾಕಿಕೊಂಡಿದೆ ಎಂಬುದಾಗಿ ತಿಳಿಸಿದೆ.
ED, Bangalore has provisionally attached 142 immovable properties having market value of Rs. 300 Crore (approx.) registered in the name of various individuals who are working as real-estate businessmen and agents under the provisions of the PMLA, 2002, in connection with the case…
— ED (@dir_ed) January 17, 2025
BREAKING:ದೆಹಲಿಯಲ್ಲಿ ‘ಆಯುಷ್ಮಾನ್ ಭಾರತ್’ ಯೋಜನೆ ಜಾರಿಗೆ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆ | Ayushman Bharat