ಬೆಂಗಳೂರು : ಸದ್ಯ ಮುಡಾ ಅಕರಣಕ್ಕೆ ಸಂಬಂಧಪಟ್ಟಂತೆ ಇಡಿ ಅಧಿಕಾರಿಗಳು ಮೈಸೂರಿನ ಮುಡಾ ಕಚೇರಿಯಲ್ಲಿ ಠಿಕಾಣಿ ಹೂಡಿದ್ದು, ಎಲ್ಲಾ ದಾಖಲೆಗಳನ್ನು ಪರಿಶೀಲನೆ ಮಾಡುತ್ತಿದ್ದಾರೆ ಇದರ ಮಧ್ಯ ಈಡೇ ಅಧಿಕಾರಿಗಳು ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿ ಅವರನ್ನು ಕೂಡ ವಿಚಾರಣೆಗೆ ಒಳಪಡಿಸುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ.
ನಿನ್ನೆ ಮುಡಾ ಕಚೇರಿಯ ಮೇಲೆ ದಾಳಿ ಮಾಡಿದ ಇಡಿ ಅಧಿಕಾರಿಗಳು 14 ಸೈಟ್ ಗಳ ಸಂಬಂಧ ಇಂಚಿಂಚು ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ. ಅಲ್ಲದೆ ಹಲವು ಕಡತಗಳನ್ನು ಕೂಡ ಈಡೇ ಅಧಿಕಾರಿಗಳು ಇದೆ ವೇಳೆ ತೆಗೆದುಕೊಂಡು ಹೋಗಿದ್ದಾರೆ ಎನ್ನಲಾಗಿದೆ. ಇಡಿ ಅಧಿಕಾರಿಗಳಿಗೆ ಮುಡಾ ಕಾರ್ಯದರ್ಶಿ ಪ್ರಸನ್ನ ಕುಮಾರ್ ಸಹಕಾರ ನೀಡಿದ್ದಾರೆ.