ಮೈಸೂರು: ಮುಡಾ ಹಗರಣ ಸಂಬಂಧ ಜಾರಿ ನಿರ್ದೇಶನಾಲಯದ 20ಕ್ಕೂ ಹೆಚ್ಚು ಅಧಿಕಾರಿಗಳು ಮುಡಾ ಕಚೇರಿ, ಬೆಂಗಳೂರಿನ ಕೆಂಗೇರಿಯಲ್ಲಿರುವಂತ ಭೂ ಮಾಲೀಕ ದೇವರಾಜು ಮನೆಯ ಮೇಲೆ ದಾಳಿ ನಡೆಸಿದ್ದಾರೆ.
ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ(ಮುಡಾ) ಕಚೇರಿಯ ಮೇಲೆ ಮುಡಾ ಸೈಟು ಹಂಚಿಕೆಯಲ್ಲಿ ಅವ್ಯವಹಾರ ಪ್ರಕರಣ ಸಂಬಂಧ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಮೈಸೂರಿನ ಮುಡಾ ಕಚೇರಿ ಹಾಗೂ ಬೆಂಗಳೂರಿನ ಎ4 ಆರೋಪಿಯಾಗಿರುವಂತ ಭೂ ಮಾಲೀಕ ದೇವರಾಜು ನಿವಾಸದ ಮೇಲೆ 20ಕ್ಕೂ ಹೆಚ್ಚು ಅಧಿಕಾರಿಗಳು ದಾಳಿ ನಡೆಸಿ, ಕಡತಗಳನ್ನು ಪರಿಶೀಲಿಸುತ್ತಿದ್ದಾರೆ.
ಬೆಂಗಳೂರಿನ ಕೆಂಗೇರಿಯಲ್ಲಿರುವಂತ ದೇವರಾಜು ನಿವಾಸದಲ್ಲಿ ಇಡಿ ಅಧಿಕಾರಿಗಳು ಶೋಧ ಕಾರ್ಯಾಚರಣೆ ಮಾಡುತ್ತಿದ್ದರೇ, ಅತ್ತ ಮೈಸೂರಿನ ಮುಡಾ ಕಚೇರಿಯಲ್ಲೂ ಕೆಲ ಇಡಿ ಅಧಿಕಾರಿಗಳು ಮುಡಾ ಹಗರಣ ಸಂಬಂಧ ದಾಖಲೆಗಳ ಹುಡುಕಾಟದಲ್ಲಿ ತೊಡಗಿದ್ದಾರೆ. ಈ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.
BREAKING: ಬೆಂಗಳೂರಿನ ಕಾಲೇಜುಗಳಿಗೆ ‘ಬಾಂಬ್ ಬೆದರಿಕೆ ಇ-ಮೇಲ್’ ಕಳುಹಿಸಿದ ‘ಓರ್ವ ವ್ಯಕ್ತಿ’ ಅರೆಸ್ಟ್
BREAKING : ಕಲಬುರ್ಗಿ ಜೈಲಲ್ಲಿ ಕೈದಿಗಳಿಗೆ ‘ರಾಜಾತಿಥ್ಯ’ ಆರೋಪ ಪ್ರಕರಣ : ‘CCB’ ತನಿಖೆಗೆ ವಹಿಸಿ ಕಮಿಷನರ್ ಆದೇಶ
ಆನ್ ಲೈನ್ ಸ್ಕ್ಯಾಮ್ ವಿರುದ್ಧ ಜಾಗೃತಿ: ಕೇಂದ್ರ ಸರ್ಕಾರದೊಂದಿಗೆ ಜಂಟಿ ಉಪಕ್ರಮವನ್ನು ಪ್ರಾರಂಭಿಸಿದ ‘ಮೆಟಾ’