ಮೈಸೂರು : ಮುಡಾ ಹಗರಣ ಖಂಡಿಸಿ ಸಿಎಂ ಸಿದ್ದರಾಮಯ್ಯ ರಾಜೀನಾಮೆ ಆಗ್ರಹಿಸಿ ಬಿಜೆಪಿ ಜೆಡಿಎಸ್ ಮೈಸೂರು ಚಲೋ ಪಾದಯಾತ್ರೆಯೂ ಇಂದು ಮೈಸೂರು ತಲುಪಿತು. ಪಾದಯಾತ್ರೆ ಸಂದರ್ಭದಲ್ಲಿ ವಿಪಕ್ಷ ನಾಯಕ ಆರ್ ಅಶೋಕ್ ಮಾತನಾಡಿ, ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿದ್ದರಾಮಯ್ಯ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡುವವರೆಗೂ ನಮ್ಮ ಹೋರಾಟ ನಿಲ್ಲುವುದಿಲ್ಲ ಎಂದು ತಿಳಿಸಿದರು.
ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮುಡಾ ಹಗರಣ ವಿರುದ್ಧ ನಮ್ಮ ಪಾದಯಾತ್ರೆ ನಡೆಯುತ್ತಿದೆ. ಸಿದ್ದರಾಮಯ್ಯ ಮುಡಾ ಹಗರಣದಲ್ಲಿ ರಾಜೀನಾಮೆ ಕೊಡುತ್ತಾರೆ ಅಂದುಕೊಂಡಿದ್ವಿ, ನಮ್ಮ ಹೋರಾಟ ಇಷ್ಟಕ್ಕೆ ನಿಲ್ಲುವುದಿಲ್ಲ. ಮುಡಾ ಹಾದರಣದಲ್ಲಿ ಸಿಎಂ ಸಿದ್ದರಾಮಯ್ಯ ರಾಜೀನಾಮೆಯನ್ನು ನೀಡಬೇಕು ರಾಜೀನಾಮೆ ನೀಡುವವರೆಗೂ ನಮ್ಮ ಹೋರಾಟ ನಿಲ್ಲುವುದಿಲ್ಲ.
ಮಂಡ್ಯದಲ್ಲಿ ಪ್ರೀತಂ ಗೌಡ ಜೆಡಿಎಸ್ ಕಾರ್ಯಕರ್ತರ ಗಲಾಟೆಗೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿದ ಅವರು, ಪ್ರೀತಮ್ ಗೌಡ ಕೂಡ ನಮ್ಮ ಪಕ್ಷದ ಕಾರ್ಯಕರ್ತ ಅದರಲ್ಲಿ ಯಾವುದೇ ಅನುಮಾನ ಇಲ್ಲ. ಬಿಜೆಪಿ ಜೆಡಿಎಸ್ ಒಂದಾಗಿ ಹೋಗುತ್ತಿದ್ದೇವೆ ಕೆಲವು ಸಣ್ಣಪುಟ್ಟ ಲೋಪದೋಷ ಆಗುವುದು ಸಹಜ. ಮುಂದೆ ಇದೇ ರೀತಿ ಆದರು ಸಹ ಅದನ್ನ ಸರಿ ಪಡಿಸಿಕೊಳ್ಳುತ್ತೇವೆ. ಇದನ್ನೆಲ್ಲಾ ಸರಿಪಡಿಸಿಕೊಂಡು ಮುಂದೆ ಹೋಗುತ್ತೇವೆ ಎಂದು ಮೈಸೂರಿನಲ್ಲಿ ವಿಪಕ್ಷ ನಾಯಕ ಆರ್ ಅಶೋಕ್ ಹೇಳಿದರು.