ಮೈಸೂರು: ಮುಡಾ ಹಗರಣದಲ್ಲಿ ಸಿಎಂ ಸಿದ್ಧರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ್ದರು. ಈ ಸಂಬಂಧ ಜನಪ್ರತಿನಿಧಿಗಳ ಕೋರ್ಟ್ ಕೂಡ ಸಿಎಂ ಸಿದ್ಧರಾಮಯ್ಯ ವಿರುದ್ಧ ಎಫ್ಐಆರ್ ದಾಖಲಿಸಿ ತನಿಖೆ ನಡೆಸುವಂತೆ ಆದೇಶಿಸಿತ್ತು. ಕೋರ್ಟ್ ಆದೇಶದಂತೆ ಸಿಎಎಂ ಸಿದ್ಧರಾಮಯ್ಯ ವಿರುದ್ಧ ಎ1 ಆರೋಪಿಯಾಗಿ ಮುಡಾ ಹಗರಣದಲ್ಲಿ ಎಫ್ಐಆರ್ ದಾಖಲಿಸಲಾಗಿದೆ. ಅವರ ಪತ್ನಿ ಪಾರ್ವತಿ ಎ.2 ಆರೋಪಿಯಾಗಿದ್ದಾರೆ.
ಸಿದ್ಧರಾಮಯ್ಯ ಭಾಮೈದ ಮಲ್ಲಿಕಾರ್ಜನ ಸ್ವಾಮಿ ಎ3 ಆರೋಪಿಯಾದರೇ, ಎ.4 ಆರೋಪಿಯನ್ನಾಗಿ ಭೂ ಮಾಲೀಕ ದೇವರಾಜು ಹಾಗೂ ಇತರರು ಎ5 ಆರೋಪಿಯನ್ನಾಗಿ ಮಾಡಿ ಮೈಸೂರಿನ ಲೋಕಾಯುಕ್ತ ಎಸ್ಪಿ ಕಚೇರಿಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ. ಹೀಗಾಗಿ ಸಿಎಂ ಸಿದ್ಧರಾಮಯ್ಯ ಅವರ ಕುಟುಂಬಕ್ಕೆ ಸಂಕಷ್ಟ ಎದುರಾದಂತೆ ಆಗಿದೆ.
ಅಂದಹಾಗೇ ಮುಡಾ ಪ್ರಕರಣ ಸಂಬಂಧ ಜನಪ್ರತಿನಿಧಿಗಳ ಕೋರ್ಟ್ ಎಫ್ಐಆರ್ ದಾಖಲಿಸಿ, ತನಿಖೆ ನಡೆಸಿ ವರದಿಯನ್ನು ನ್ಯಾಯಾಲಯಕ್ಕೆ ಸಲ್ಲಿಸುವಂತೆ ಮೈಸೂರಿನ ಲೋಕಾಯುಕ್ತ ಎಸ್ಪಿಗೆ ಆದೇಶ ಮಾಡಲಾಗಿತ್ತು. ಅದರಂತೆ ಇಂದು ಮೈಸೂರಿನ ಲೋಕಾಯುಕ್ತ ಎಸ್ಪಿ ಅವರು ಸಿಎಂ ಸಿದ್ಧರಾಮಯ್ಯ ಹಾಗೂ ಅವರ ಪತ್ನಿ ಸೇರಿದಂತೆ ಐವರ ವಿರುದ್ಧ ಎಫ್ಐಆರ್ ದಾಖಲಿಸಿದ್ದಾರೆ.
BREAKING : ಸಿಎಂ ಬಳಿಕ ಖರ್ಗೆ ಕುಟುಂಬಕ್ಕೆ ಸಂಕಷ್ಟ : ‘ಭೂ ಕಬಳಿಕೆ’ ಆರೋಪದಲ್ಲಿ ಲೋಕಾಯುಕ್ತಕ್ಕೆ ದೂರು ಸಲ್ಲಿಕೆ!