ಮೈಸೂರು : ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಮೈಸೂರು ಲೋಕಾಯುಕ್ತ ಕಚೇರಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಎಫ್ಐಆರ್ ದಾಖಲಾಗಿದೆ. ಈ ಹಿನ್ನೆಲೆಯಲ್ಲಿ ಲೋಕಾಯುಕ್ತ ಎಸ್ ಪಿ ಉದೇಶ ನೇತೃತ್ವದಲ್ಲಿ ನಾಲ್ಕು ತಂಡಗಳು ರಚನೆಯಾಗಿದ್ದು, ಈ ಕುರಿತಾಗಿ ಲೋಕಾಯುಕ್ತ ತನಿಖೆಯಲ್ಲಿ ನಾನು ಯಾವುದೇ ಹಸ್ತಕ್ಷೇಪ ಮಾಡುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು.
ಮೈಸೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮುಡಾ ಪ್ರಕರಣದ ತನಿಖೆ ಪ್ರಸ್ತುತ ಲೋಕಾಯುಕ್ತದಲ್ಲಿದ್ದು, ನಾನು ಅದರಲ್ಲಿ ಯಾವುದೇ ರೀತಿಯ ಹಸ್ತಕ್ಷೇಪ ಮಾಡುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಮುಡಾ ಪ್ರಕರಣ ಸಂಬಂಧ ಸಿಎಂ ವಿರುದ್ಧ ಇಡಿಯಲ್ಲಿ ದೂರು ದಾಖಲಾಗಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಇಡಿಯಲ್ಲಿ ದೂರು ದಾಖಲಾಗಿದ್ದರೆ, ಕಾನೂನು ರೀತಿ ಕ್ರಮ ಜರುಗಿಸಲಾಗುತ್ತದೆ ಎಂದರು.
ಲೋಕಾಯುಕ್ತ ಎಡಿಜಿಪಿ ಹಾಗೂ ಕೇಂದ್ರ ಸಚಿವ ಎಚ್ಡಿ ಕುಮಾರಸ್ವಾಮಿ ನಡುವಿನ ಗುದ್ದಾಟದ ಕುರಿತು ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯಿಸಿ, ಎಚ್ಡಿ ಕುಮಾರಸ್ವಾಮಿಯವರು ತಪ್ಪೆಸೆಗಿಸಿದ್ದು, ಅಧಿಕಾರಗಳ ವಿರುದ್ಧ ಟೀಕೆ ಮಾಡುವುದು ಸರಿಯಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.