ಬೆಂಗಳೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ದಲ್ಲಿ ನಡೆದ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಹಾಗೂ ಜೆಡಿಎಸ್ ಬೆಂಗಳೂರಿನಿಂದ ಮೈಸೂರಿಗೆ ಪಾದಯಾತ್ರೆಗೆ ನಿರ್ಧರಿಸಿವೆ. ಎಚ್.ಡಿ ಕುಮಾರಸ್ವಾಮಿ ಪ್ರೀತಂಗೌಡ ಇದ್ದರೆ ನಾನು ಪಾದಯಾತ್ರೆಯಲ್ಲಿ ಭಾಗವಹಿಸುವುದಿಲ್ಲ ಎಂದು ಖಡಕ್ಕಾಗಿ ತಿಳಿಸಿದ್ದಾರೆ.
ಈ ವಿಷಯವಾಗಿ ಇಂದು ಬೆಂಗಳೂರಿನಲ್ಲಿ ವಿಪಕ್ಷ ನಾಯಕ ಆರ್ ಅಶೋಕ್ ಸುದ್ದಿಗಾರರೊಂದಿಗೆ ಮಾತನಾಡಿ, ಹೈಕಮಾಂಡ್ ನಾಯಕರು ನಿನ್ನೆ ಕರೆ ಮಾಡಿ ಮಾತನಾಡಿದ್ದಾರೆ. ಪಾದಯಾತ್ರೆ ಅವಶ್ಯಕತೆ ಇದೆ ಅಂತ ಹೇಳಿದ್ದಾರೆ. ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ 187 ಕೋಟಿ ಹಗರಣ ನಡೆದಿದೆ. ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ 3000 ಕೋಟಿ ಹಗರಣ ನಡೆದಿದೆ.
ದರೋಡೆ ಮಾಡಿರುವ ಸರ್ಕಾರದ ವಿರುದ್ಧ ಪಾದಯಾತ್ರೆ ಒಳ್ಳೆಯದು ಸಂಸತ್ ನಲ್ಲೂ ಈ ಬಗ್ಗೆ ಚರ್ಚೆಯಾಗಿ ದೇಶಾದ್ಯಂತ ಸುದ್ದಿಯಾಗಿದೆ.ಜೆಡಿಎಸ್ ನಾಯಕರಿಗೆ ಮನವಿ ಮಾಡುತ್ತೇನೆ ಇದಕ್ಕೆ ಲಾಜಿಕಲ್ ಎಂಡ್ ಕೊಡಬೇಕಿದೆ ಪಾದಯಾತ್ರೆಗೆ ಬನ್ನಿ ಅವರ ಜೊತೆ ಮಾತಾಡಿ ಪಾದಯಾತ್ರೆಗೆ ಬರುವಂತೆ ಮನವಿ ಮಾಡುತ್ತೇನೆ ಎಂದು ಅವರು ತಿಳಿಸಿದರು.
ಪ್ರೀತಂಗೌಡ ಬಗ್ಗೆ ಕುಮಾರಸ್ವಾಮಿ ಮಾತನಾಡಿದ್ದು ನೋಡಿದ್ದೇನೆ. ಸಣ್ಣಪುಟ್ಟ ವಿಚಾರ ಇಟ್ಟುಕೊಂಡು ದೂರ ಉಳಿಯುವುದು ಸರಿಯಲ್ಲ. ಪಾದಯಾತ್ರೆಯಿಂದ ದೂರ ಇರುವುದು ಬೇಡ. ಕೇಂದ್ರ ಸಚಿವ ಕುಮಾರಸ್ವಾಮಿ ಹಾಗೂ ನಿಖಿಲ್ ಜೊತೆ ಮಾತನಾಡುತ್ತೇನೆ.ಒಟ್ಟಿಗೆ ಪಾದಯಾತ್ರೆ ಮಾಡಿ ಕಾಂಗ್ರೆಸ್ ನವರಿಗೆ ಪಾಠ ಕಲಿಸೋಣ. ಎನ್ ಡಿಎ ಮೈತ್ರಿಕೂಟದ ಒಗ್ಗಟ್ಟನ್ನು ಪ್ರದರ್ಶಿಸೋಣ ಎಂದು ವಿಪಕ್ಷ ನಾಯಕ ಆರ್ ಅಶೋಕ್ ತಿಳಿಸಿದರು.