ಬೆಂಗಳೂರು: ಮುಡಾ ಹಗರಣ ಸಂಬಂಧ ಸಿದ್ಧರಾಮಯ್ಯ ಅವರು 1984ರಲ್ಲಿ ಶಾಸಕರಾಗಿದ್ದಂತ ಸಂದರ್ಭದಲ್ಲಿ ಬದಲಿ ನಿವೇಶನ ಕೋರಿ, ಮುಡಾ ಅಧ್ಯಕ್ಷರಿಗೆ ಬರೆದಿದ್ದಂತ ಪತ್ರವನ್ನು ಜೆಡಿಎಸ್ ಬಿಡುಗಡೆ ಮಾಡಿದೆ.
ಇಂದು ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವಂತ ಜೆಡಿಎಸ್ ಪಕ್ಷವು, “ಗುಳಿಗೆ ಸಿದ್ದ ಒಳಗೆ ಮೇಯಿದ” ಈ ಮಾತು ನಿಮ್ಮಂಥವರನ್ನು ನೋಡಿಯೇ ಹೇಳಿರಬೇಕು ಸಿದ್ದರಾಮಯ್ಯನವರೇ… “ನನಗೆ ಒಂದು ನಿವೇಶನವೂ ಇಲ್ಲ. ಯಾವುದೇ ಲೆಟರ್ ಬರೆದಿಲ್ಲ” ಎಂದು ಸುಳ್ಳು ಹೇಳುವ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರೇ, ಸಮಾಜವಾದಿ ಮುಖವಾಡ ತೊಟ್ಟು ನೀವು ಮಾಡಿರುವ ಅಕ್ರಮಗಳಿಗೆ ಈ ಲೆಟರ್ ಸಾಕ್ಷಿ ಎಂದಿದೆ.
ಬದಲಿ ನಿವೇಶನ ಕೋರಿ ನೀವೇ ಸ್ವತಃ ಬರೆದಿರುವ ಪತ್ರ, ನಿಮ್ಮದೇ ಸಹಿ…ಇಷ್ಟು ಸಾಕಲ್ಲವೇ ? ಇದು ನಿಮಗೆ ಕಪ್ಪು ಚುಕ್ಕೆ ಅಲ್ಲವೇ …? ದಿನ ಪತ್ರಿಕೆಗಳು, ಮಾಧ್ಯಮಗಳ ಸಂದರ್ಶನಗಳಲ್ಲಿ ನಾನು ಶುದ್ಧ ಹಸ್ತ, ಸಮಾಜವಾದಿ ಎಂದು ಸತ್ಯ ಹರಿಶ್ಚಂದ್ರನಂತೆ ಮಾತಾಡುವ ನಿಮ್ಮ ಅಸಲೀ ಬಂಡವಾಳ ಈಗ ಬಯಲಾಗಿದೆ ಎಂದು ಹೇಳಿದೆ.
ದಲಿತರ ಜಮೀನು ಕಬಳಿಸಿರುವ ನೀವು ಪರಿಶಿಷ್ಟ ಸಮುದಾಯಕ್ಕೆ ವಂಚಿಸಿದ್ದೀರಿ, ಸುಳ್ಳುಗಳ ಮೇಲೆ ಸುಳ್ಳಗಳನ್ನು ಹೇಳುತ್ತಾ ನಾಡಿನ ಜನರಿಗೂ ನಂಬಿಕೆ ದ್ರೋಹ ಎಸಗಿದ್ದೀರಿ. ಇದೇನಾ ನಿಮ್ಮ ಶುದ್ಧವಾದ ರಾಜಕೀಯ ಜೀವನ ..? ಎಂದು ಪ್ರಶ್ನೆ ಮಾಡಿದೆ.
ಸಿದ್ದರಾಮಯ್ಯ ಅವರೇ ನಿಮಗೆ ಮುಖ್ಯಮಂತ್ರಿ ಸ್ಥಾನದಲ್ಲಿ ಮುಂದುವರಿಯುವ ಯಾವ ನೈತಿಕತೆಯು ಉಳಿದಿಲ್ಲ. ಮೊದಲು ರಾಜೀನಾಮೆ ಕೊಟ್ಟು ನಿರ್ಗಮಿಸಿ ಅಂತ ಒತ್ತಾಯಿಸಿದೆ.
“ಗುಳಿಗೆ ಸಿದ್ದ ಒಳಗೆ ಮೇಯಿದ”
ಈ ಮಾತು ನಿಮ್ಮಂಥವರನ್ನು ನೋಡಿಯೇ ಹೇಳಿರಬೇಕು ಸಿದ್ದರಾಮಯ್ಯನವರೇ…“ನನಗೆ ಒಂದು ನಿವೇಶನವೂ ಇಲ್ಲ. ಯಾವುದೇ ಲೆಟರ್ ಬರೆದಿಲ್ಲ” ಎಂದು ಸುಳ್ಳು ಹೇಳುವ ಮುಖ್ಯಮಂತ್ರಿ @siddaramaiah ಅವರೇ, ಸಮಾಜವಾದಿ ಮುಖವಾಡ ತೊಟ್ಟು ನೀವು ಮಾಡಿರುವ ಅಕ್ರಮಗಳಿಗೆ ಈ ಲೆಟರ್ ಸಾಕ್ಷಿ…
ಬದಲಿ ನಿವೇಶನ ಕೋರಿ ನೀವೇ ಸ್ವತಃ… pic.twitter.com/hiq13WV19c
— Janata Dal Secular (@JanataDal_S) August 11, 2024
‘ಚಂದ್ರಗುತ್ತಿ ದೇವಸ್ಥಾನ’ದ ಸರ್ವಾಂಗೀಣ ವಿಕಾಸಕ್ಕೆ ಕ್ರಮ: ಸಚಿವ ಮಧು ಬಂಗಾರಪ್ಪ