ಮೈಸೂರು : ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ವಿಪಕ್ಷಗಳು ಮೈಸೂರು ಚಲೋ ಪಾದಯಾತ್ರೆ ಆರಂಭಸಿ 6 ದಿನ ಕಳೆದಿವೆ. ಇದರ ಮಧ್ಯ ಸಿಎಂ ಸಿದ್ದರಾಮಯ್ಯ ಪುತ್ರ ಯತೀಂದ್ರ ಅವರು ಈ ಒಂದು ಹಗರಣದಲ್ಲಿ ನಮ್ಮ ತಂದೆಗೆ ಕ್ಲೀನ್ ಚಿಟ್ ಸಿಕ್ಕಿದೆ ಎಂದು ಸ್ಪೋಟಕ ಹೇಳಿಕೆ ನೀಡಿದ್ದಾರೆ.
ಹೌದು ಇಂದು ಮೈಸೂರಿನಲ್ಲಿ ಮಾತನಾಡಿದ ಅವರು, ಜನರಿಂದ ಆಯ್ಕೆಯಾದ ಸರ್ಕಾರವನ್ನು ಸುಳ್ಳು ಆರೋಪ ಮಾಡಿ ಬಿಳಿಸುವ ಕುತಂತ್ರಕ್ಕೆ ನಾವು ಬಿಡೊಲ್ಲ. ಅದರ ವಿರುದ್ಧ ಏನು ಮಾಡಬೇಕೋ ಆ ಹೋರಾಟವನ್ನು ನಮ್ಮ ಪಕ್ಷದವರು ಮಾಡುತ್ತಾರೆ. ದೆಹಲಿ ಹೈಕಮಾಂಡ್ ಕೂಡ ನಮ್ಮ ತಂದೆಯವರದು ಏನೂ ತಪ್ಪಿಲ್ಲ, ಮುಖ್ಯಮಂತ್ರಿಗಳಿಗೆ ಬೆಂಬಲ ಕೊಡ್ತೇವೆ ಎಂದು ಹೇಳಿದ್ದಾರೆ.
ಹಾಗಾಗಿ ನಮಗೆ ಪಕ್ಷದ ಬೆಂಬಲ, ನಾಯಕರ ಬೆಂಬಲ ಹಾಗೂ ಕಾರ್ಯಕರ್ತರ ಬೆಂಬಲವಿದೆ.ಏನೂ ತಪ್ಪು ಮಾಡದಿದ್ರೂ ಸಿಎಂ ಸಿದ್ದರಾಮಯ್ಯ ಅವರು ಇವತ್ತು ಆರೋಪ ಎದುರಿಸಬೇಕಾಗಿ ಬಂದಿದೆ. ಈಗ ತಂದೆಯವರ ಪ್ರಾಮಾಣಿಕ ರಾಜಕೀಯ ಜೀವನ ಜನರು, ಬೆಂಬಲಿಗರು ಅರ್ಥಮಾಡಿಕೊಳ್ಳುವಂತಾಗುತ್ತೆ ಎಂದು ತಿಳಿಸಿದರು.