ಬೆಂಗಳೂರು : ಹಗರಣಕ್ಕೆ ಸಂಬಂಧಿಸಿದಂತೆ ಒಂದಿಲ್ಲೊಂದು ಹೊಸ ಟ್ವಿಸ್ಟ್ಗಳು ಹೊರಬರುತ್ತಿವೆ. ಇದೀಗ ಅಕ್ರಮ ಆರೋಪ ಕೇಸ್ಗೆ ಸಂಬಂಧಿಸಿದಂತೆ ಸಿಎಂ ಸ್ಪಷ್ಟೀಕರಣ ನೀಡಿ ಬಿಡುಗಡೆಗೊಳಿಸಿದ ದಾಖಲೆ ತಿದ್ದಲಾಗಿದೆ ಎಂದು ದೂರುದಾರ ಸ್ನೇಹಮಯಿ ಕೃಷ್ಣ ಗಂಭೀರ ಆರೋಪ ಮಾಡಿದ್ದಾರೆ. ಇದಕ್ಕೆ ನಗರಾಭಿವೃದ್ಧಿ ಇಲಾಖೆ ಸಚಿವ ಭೈರತಿ ಸುರೇಶ್, ದಾಖಲೆ ತಿದ್ದುವಂತಹ ನೀಚ ಕೆಲಸಕ್ಕೆ ನಾವು ಯಾರೂ ಇಳಿದಿಲ್ಲ ಎಂದರು.
ಸುದ್ಧಿಗಾರರೊಂದಿಗೆ ಮಾತನಾಡಿದ ಅವರು, ದಾಖಲೆ ತಿದ್ದುವಂತಹ ಪರಿಸ್ಥಿತಿ ಬಂದಿಲ್ಲ. ದಾಖಲೆ ತಿದ್ದುವಂತಹ ನೀಚ ಕೆಲಸಕ್ಕೆ ನಾವು ಯಾರೂ ಇಳಿದಿಲ್ಲ. ಮುಡಾ ಪ್ರಕರಣ ಸಂಬಂಧ ಹೈಕೋರ್ಟ್ನಲ್ಲಿ ವಿಚಾರಣೆ ನಡೆಯುತ್ತಿದೆ. ಅಲ್ಲಿ ಬೇರೆ ಏನೋ ಆಗಿದೆ ಅನ್ನೋದು ಅಲ್ಲ, ಏನೂ ಮಿಸ್ಟೇಕ್ ಆಗಲ್ಲವಾ ಎಂದು ಪ್ರಶ್ನಿಸಿದ್ದಾರೆ.
ಜಮೀನಿಗೆ ಪರಿಹಾರ ನೀಡಿಲ್ಲ, ಅಷ್ಟೇ ವಿಸ್ತೀರ್ಣದ ಜಮೀನು ಅಂತಾ ಹೇಳಿದ್ದಾರೆ. ಅಲ್ಲಿ ವರ್ಷ ಮಿಸ್ಟೇಕ್ ಆಗಿರಬಹುದು. ಇಲ್ಲವೇ ಸಮಾನಂತರ ಬಡಾವಣೆಯಲ್ಲಿ ನೀಡುವಂತೆ ಕೋರುತ್ತೇನೆ. ಬಹಳ ಸ್ಪಷ್ಟವಾಗಿ ಹೇಳಿದ್ದಾರೆ, ವಿಜಯನಗರ ಲೇಔಟ್ ಅಂತಾ ಎಲ್ಲಿ ಬರೆದಿದ್ದಾರೆ. ಸಮಾನಂತರ ಜಾಗ ಅಂತಾ ಬರೆದಿದ್ದಾರೆ, ಎಲ್ಲವನ್ನೂ ನೋಡಿ ಹೇಳಿಕೆ ನೀಡಬೇಕು. ತಿದ್ದುವಂತಹ ನೀಚ ಕೃತ್ಯ ನಾನು ಮಾಡಿಲ್ಲ ಎಂದು ಸ್ಪಷ್ಟನೆ ನೀಡಿದರು.