ಬೆಂಗಳೂರು: ಮುಖ್ಯಮಂತ್ರಿ ಸಿದ್ಧರಾಮಯ್ಯ ವಿರುದ್ಧದ ಮುಡಾ ಹಗರಣದ ಸಂಬಂಧ ಮಾಹಿತಿ ನೀಡುವಂತೆ ರಾಜ್ಯಪಾಲರಿಗೆ ರಾಷ್ಟ್ರಪತಿಗಳು ಸೂಚಿಸಿದ್ದರು. ಈ ಹಿನ್ನಲೆಯಲ್ಲಿ ರಾಜ್ಯಪಾಲರಿಂದ ರಾಷ್ಟ್ರಪತಿಗಳಿಗೆ ರಾಜ್ಯದ ವಿದ್ಯಾಮಾನಗಳ ಇಂಚಿಂಚೂ ಮಾಹಿತಿಯನ್ನು ರವಾನಿಸಲಾಗಿದೆ.
ಮುಡಾ ಹಗರಣದ ವಿಚಾರ ರಾಷ್ಟ್ರದ ರಾಜಧಾನಿ ನವದೆಹಲಿಯನ್ನು ತಲುಪಿದೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ರಾಜ್ಯಪಾಲರಿಗೆ ಪತ್ರ ಬರೆದು ಮಾಹಿತಿ ನೀಡುವಂತೆ ಕೋರಿದ್ದರ ಹಿನ್ನಲೆಯಲ್ಲಿ, ಕರ್ನಾಟಕದ ವಿದ್ಯಮಾನಗಳ ಸಂಪೂರ್ಣ ಮಾಹಿತಿಯನ್ನು ರಾಜ್ಯಪಾಲರು ನೀಡಿದ್ದಾರೆ ಎಂಬುದಾಗಿ ತಿಳಿದು ಬಂದಿದೆ.
ಮುಡಾ ಹಗರಣದ ವಿಚಾರವಾಗಿ ನಡೆದ ಪ್ರತಿಭಟನೆ, ರಾಜಭವನದ ಮೇಲೆ ರಾಜ್ಯದಲ್ಲಿ ಹೆಚ್ಚಾಗುತ್ತಿರುವ ಒತ್ತಡ, ಕಾಂಗ್ರೆಸ್ ನಾಯಕರಿಂದ ರಾಜಭವನಕ್ಕೆ ನುಗ್ಗುವುದಾಗಿ ಬೆದರಿಕೆ ಹಾಕಿದ ಮಾಹಿತಿಯನ್ನು ರಾಷ್ಟ್ರಪತಿಗಳಿಗೆ ವರದಿ ರೂಪದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ನೀಡಿದ್ದಾರೆ.
ಇದಷ್ಟೇ ಅಲ್ಲದೇ ರಾಜ್ಯಾಧ್ಯಂತ ಮುಡಾ ಹಗರಣದ ಸಂಬಂಧ ಸಿಎಂ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ನೀಡಿದಂತ ಅನುಮತಿ ವಿಚಾರವನ್ನೂ ನೀಡಿರುವುದಾಗಿ ಹೇಳಲಾಗುತ್ತಿದೆ. ಈ ಮೂಲಕ ಮುಡಾ ಹಗರಣ ಸಂಬಂಧ ರಾಜ್ಯದಲ್ಲಿನ ಹಲವು ಅಂಶಗಳನ್ನು ರಾಜ್ಯಪಾಲರು ರಾಷ್ಟ್ರಪತಿಗಳ ಸೂಚನೆ ಮೇರೆಗೆ ವರದಿಯನ್ನು ರವಾನಿಸಲಾಗಿದೆ.
ಬೆಂಗಳೂರು ಜನತೆ ಗಮನಕ್ಕೆ: ಸೆ.7ರಂದು ಗಣೇಶ ಹಬ್ಬದ ಪ್ರಯುಕ್ತ ಈ ಸಂಚಾರ ಮಾರ್ಗ ಬದಲಾವಣೆ | Bengaluru Traffic Update
ಗಣೇಶ ಚತುರ್ಥಿ, ದಸರಾ, ದೀಪಾವಳಿ ಹಬ್ಬದ ಪ್ರಯುಕ್ತ 22 ವಿಶೇಷ ರೈಲು ಸಂಚಾರ | Special Train
ಕೇರಳದ ‘ಹೇಮಾ’ ಸಮಿತಿ ಮಾದರಿ ಸಮಿತಿ ರಚಿಸಿ : ಸಿಎಂ ಸಿದ್ದರಾಮಯ್ಯ ಭೇಟಿ ಮಾಡಿ ಮನವಿ ಮಾಡಿದ ‘ಫೈರ್’