ಬೆಂಗಳೂರು: ಜನವರಿ.22ರ ಬೆಳಗ್ಗೆ 11 ಗಂಟೆಯಿಂದ ವಿಧಾನ ಮಂಡಲದ ಅಧಿವೇಶನ ನಡೆಸಲು ರಾಜ್ಯ ಸಂಪುಟ ಸಭೆಯಲ್ಲಿ ನಿರ್ಧರಿಸಿರುವುದಾಗಿ ಸಚಿವ ಹೆಚ್.ಕೆ ಪಾಟೀಲ್ ತಿಳಿಸಿದ್ದಾರೆ.
ಇಂದು ಸಂಪುಟ ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದಂತ ಅವರು, ಜನವರಿ.22ರಿಂದ ವಿಧಾನಮಂಡಲ ಅಧಿವೇಶನ ನಡೆಸಲು ಸಂಪುಟ ಸಭಎಯಲ್ಲಿ ನಿರ್ಧರಿಸಲಾಗಿದೆ. ವಿಧಾನಮಂಡಲದ ಜಂಟಿ ಅಧಿವೇಶನ ಉದ್ದೇಶಿಸಿ ರಾಜ್ಯಪಾಲರು ಭಾಷಣ ಮಾಡಲಿದ್ದಾರೆ. ರಾಜ್ಯಪಾಲರ ಭಾಷಣ ಅನುಮೋದಿಸಲು ಸಿಎಂಗೆ ಪರಮಾಧಿಕಾರ ನೀಡಲಾಗಿದೆ ಎಂದರು.
ವಿಬಿ ಜಿ ರಾಮ್ ಜಿ ಪರಿಣಾಮಗಳ ಬಗ್ಗೆ ಅಧಿವೇಶನದಲ್ಲಿ ಚರ್ಚಿಸಲಾಗುತ್ತದೆ. ವಿಧಾನ ಮಂಡಲ ಅಧಿವೇಶನದಲ್ಲಿ ಚರ್ಚಿಸಿ ನಿರ್ಣಯಿಸಲು ನಿರ್ಧರಿಸಲಾಗಿದೆ.ಜನವರಿ.22ರಿಂದ 31ರವರೆಗೆ ವಿಧಾನಮಂಡಲ ಅಧಿವೇಶನಕ್ಕೆ ನಿರ್ಧಾರ ಕೈಗೊಳ್ಳಲಾಗಿದೆ ಎಂಬುದಾಗಿ ತಿಳಿಸಿದರು.








