ಮಂಡ್ಯ: ಶ್ರೀರಂಗಪಟ್ಟಣದ ದಸರಾ ಮಹೋತ್ಸವ ಆಚರಣೆಗೆ ಮುಹೂರ್ತ ಫಿಕ್ಸ್ ಆಗಿದೆ. ಸೆಪ್ಟೆಂಬರ್.25ರಿಂದ ನಾಲ್ಕು ದಿನಗಳ ಕಾಲ ಆಚರಣೆ ನಡೆಸಲಾಗುತ್ತದೆ ಎಂಬುದಾಗಿ ಕೃಷಿ ಸಚಿವ ಚಲುವರಾಯಸ್ವಾಮಿ ತಿಳಿಸಿದ್ದಾರೆ.
ಇಂದು ಈ ಸಂಬಂಧ ಮಂಡ್ಯದ ಜಿ.ಪಂ ಕಾವೇರಿ ಸಭಾಂಗಣದಲ್ಲಿ ಸಚಿವ ಎನ್ ಚಲುವರಾಯಸ್ವಾಮಿ ಅಧ್ಯಕ್ಷತೆಯಲ್ಲಿ ಮಹತ್ವದ ಸಭೆ ನಡೆಯಿತು. ಈ ಸಭೆಯಲ್ಲಿ ಸೆ.25 ರಿಂದ 28 ರ ವರಗೆ ನಾಲ್ಕು ದಿನ ಶ್ರೀರಂಗಪಟ್ಟಣ ದಸರಾ ನಡೆಸಲು ನಿರ್ಧರಿಸಲಾಗಿದೆ.
ಶ್ರೀರಂಗಪಟ್ಟಣ ದಸರಾವನ್ನು ಅದ್ದೂರಿಯಾಗಿ ಆಚರಣೆ ಮಾಡಲು ಸಿದ್ದತೆ ಮಾಡಿಕೊಳ್ಳಲು ಸೂಚನೆ ನೀಡಲಾಗಿದೆ. ಯಾವುದೇ ತೊಂದರೆ ಆಗದಂತೆ ಕ್ರಮ ವಹಿಸಲು ಸೂಚನೆ ನೀಡಲಾಗಿದೆ.
ಈ ಬಳಿಕ ಮಾತನಾಡಿದಂತ ಅವರು, ಈ ಬಾರಿಯ ಶ್ರೀರಂಗಪಟ್ಟಣ ದಸರಾ ವಿಶೇಷವಾಗಿ ಇರುತ್ತದೆ. ಸೆಪ್ಟೆಂಬರ್ 25 ರಿಂದ 28ರವರಗೆ ನಾಲ್ಕು ದಿನದ ದಸರಾ ಆಚರಣೆ ಮಾಡಲಾಗುತ್ತಿದೆ. ಉದ್ಘಾಟರ ಆಯ್ಕೆ ಎಲ್ಲರ ಜೊತೆ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗಿದೆ. ಸೂಕ್ತ ವ್ಯಕ್ತಿಯನ್ನ ಆಯ್ಕೆ ಮಾಡ್ತೇವೆ. ಆನೆಗಳನ್ನ ಜವಾಬ್ದಾರಿ DFO ಗೆ ಕೊಟ್ಟಿದ್ದೇವೆ. ಸ್ಥಳೀಯ ಕಲಾವಿದರಿಗೆ ಆದ್ಯತೆ ಕೋಡ್ತೇವೆ. ಸ್ಥಳೀಯರನ್ನ ಉದಾಸಿನಾ ಮಾಡುವ ಪ್ರಶ್ನೆ ಇಲ್ಲ ಎಂಬುದಾಗಿ ತಿಳಿಸಿದರು.
ಈ ಸಭೆಯಲ್ಲಿ ಶಾಸಕ ರಮೇಶ್ ಬಾಬು ಬಂಡಿಸಿದ್ದೇಗೌಡ, ಡಿಸಿ ಡಾ.ಕುಮಾರ, ಸಿಇಓ ನಂದಿನಿ, ಎಸ್ಪಿ ಮಲ್ಲಿಕಾರ್ಜುನ ಬಾಲದಂಡಿ, ನಗರಸಭೆ ಅಧ್ಯಕ್ಷ ನಾಗೇಶ್ ಸೇರಿ ಅಧಿಕಾರಿಗಳು ಭಾಗಿಯಾಗಿದ್ದರು.
ಧರ್ಮಸ್ಥಳ ವಿಷಯದಲ್ಲಿ ಷಡ್ಯಂತ್ರ್ಯ, ಪಿತೂರಿ ನಡೆಸಿದವರಿಗೆ ಆ ಮಂಜುನಾಥ ಸ್ವಾಮಿಯೇ ತಕ್ಕ ಶಾಸ್ತಿ: HDK
ಹುಬ್ಬಳ್ಳಿ ನೈರುತ್ಯ ರೈಲ್ವೆ ವಿಭಾಗದ ಈ ರೈಲುಗಳ ಸಂಚಾರ ರದ್ದು / ಭಾಗಶಃ ರದ್ದು / ನಿಯಂತ್ರಣ