ನವದೆಹಲಿ: ಜೈಲಿನಲ್ಲಿದ್ದ ಭೂಗತ ಪಾತಕಿ ಮುಕ್ತಾರ್ ಅನ್ಸಾರಿ ನಿಧನರಾಗಿರೋದಾಗಿ ತಿಳಿದು ಬಂದಿದೆ.
ಉತ್ತರ ಪ್ರದೇಶದ ಸರ್ಕಾರಿ ಆಸ್ಪತ್ರೆಯಲ್ಲಿ ಹೃದಯಾಘಾತದಿಂದ ಮುಖ್ತಾರ್ ಅನ್ಸಾರಿ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ.
ದರೋಡೆಕೋರ- ರಾಜಕಾರಣಿ ಮುಖ್ತಾರ್ ಅನ್ಸಾರಿ ಗುರುವಾರ ರಾತ್ರಿ ಹೃದಯಾಘಾತದಿಂದ ಬಂದಾ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಆದರೆ ಆತನಿಗೆ ಚಿಕಿತ್ಸೆ ಸ್ಪಂದಿಸಿಲ್ಲ ಎನ್ನಲಾಗಿದೆ.
ಇತ್ತೀಚೆಗೆ ಜೈಲಿನಲ್ಲಿ ಹೊಟ್ಟೆ ನೋವಿನಿಂದ ಬಳಲುತ್ತಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಜೈಲಿನಲ್ಲಿ ಆಹಾರದಲ್ಲಿ ಬೆರೆಸಿದ ವಸ್ತುವಿನಿಂದ ಮುಕ್ತಾರ್ ಅನ್ಸಾರಿ ವಿಷ ಸೇವಿಸಿದ್ದಾರೆ ಎಂದು ಅವರ ಸಹೋದರ ಅಫ್ಜಲ್ ಅನ್ಸಾರಿ ಹೇಳಿದ್ದಾರೆ. ವರದಿಗಳ ಪ್ರಕಾರ, ಉತ್ತರ ಪ್ರದೇಶದ ಹಲವು ಜಿಲ್ಲೆಗಳಲ್ಲಿ ಅಧಿಕಾರಿಗಳು 144 ವಿಧಿಸಿದ್ದಾರೆ.