ಇಟಾವಾ (ಯುಪಿ): ಉತ್ತರ ಪ್ರದೇಶದ ಮಾಜಿ ಸಿಎಂ ಮುಲಾಯಂ ಸಿಂಗ್ ಯಾದವ್ ಪಂಚಭೂತಗಳಲ್ಲಿ ಲೀನರಾಗಿದ್ದಾರೆ.
ದೀರ್ಘಕಾಲದ ಅನಾರೋಗ್ಯದಿಂದ ಸೋಮವಾರ ನಿಧನರಾದ ಸಮಾಜವಾದಿ ಪಕ್ಷದ ನಾಯಕ ಮುಲಾಯಂ ಸಿಂಗ್ ಯಾದವ್(Mulayam Singh Yadav) ಅವರ ಅಂತ್ಯಕ್ರಿಯೆ ಇಂದು ಮಧ್ಯಾಹ್ನ ಉತ್ತರ ಪ್ರದೇಶದ ಅವರ ಸ್ವಗ್ರಾಮ ಸೈಫೈನಲ್ಲಿ ನಡೆದಿದೆ. ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ನೆರವೇರಿದೆ. ಸಮಾಜವಾದಿ ಪಕ್ಷದ ಮುಖಂಡರು ಸೇರಿದಂತೆ ಹಲವರು ಅಂತ್ಯಕ್ರಿಯೆಯಲ್ಲಿ ಭಾಗಿಯಾಗಿದ್ದರು.
ಗುರುಗ್ರಾಮದ ಮೇದಾಂತ ಆಸ್ಪತ್ರೆಯಲ್ಲಿ ನಿಧನರಾದ ಮುಲಾಯಂ ಸಿಂಗ್ ಯಾದವ್ ಅವರ ಪಾರ್ಥಿವ ಶರೀರವನ್ನು ಸೋಮವಾರ ಸಂಜೆ ಅವರ ಸ್ವಗ್ರಾಮ ಸೈಫೈಗೆ ತಲುಪಿತ್ತು. ಈ ವೇಳೆ ಅವರ ದರ್ಶನಕ್ಕಾಗಿ ಜನ ಸಾಗರವೇ ಹರಿದುಬಂದಿತ್ತು.
ಮುಲಾಯಂ ಸಿಂಗ್ ಯಾದವ್ ಸಮಾಜವಾದಿ ಪಕ್ಷದ ಸ್ಥಾಪಕ-ಪೋಷಕರಾಗಿದ್ದರು ಸತತ ಮೂರು ಬಾರಿ ಉತ್ತರ ಪ್ರದೇಶದ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದ್ದ ಅವರು ಭಾರತ ಸರ್ಕಾರದ ರಕ್ಷಣಾ ಸಚಿವರಾಗಿಯೂ ಸೇವೆ ಸಲ್ಲಿಸಿದ್ದರು.
ರಾಹುಲ್ ಗಾಂಧಿ ಅಸ್ತಿತ್ವಕ್ಕಾಗಿ ಕಾಂಗ್ರೆಸ್ ಪಾದಯಾತ್ರೆ – CM ಬಸವರಾಜ ಬೊಮ್ಮಾಯಿ
ಭೂತಾನ್ ದೇಶದಿಂದ ಅಡಕೆ ಆಮದು ವಿಚಾರಕ್ಕೆ ಗೃಹ ಸಚಿವ ಆರಗ ಜ್ಞಾನೇಂದ್ರ ಸ್ಪಷ್ಟನೆ |Araga Jnanendra