ನವದೆಹಲಿ: ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಮತ್ತು ಸಮಾಜವಾದಿ ಪಕ್ಷದ ಸ್ಥಾಪಕ ಮುಲಾಯಂ ಸಿಂಗ್ ಯಾದವ್ ( Former Uttar Pradesh chief minister and Samajwadi Party founder Mulayam Singh Yadav ) ಅವರ ಆರೋಗ್ಯ ಸ್ಥಿತಿ ಇಂದು ಗಂಭೀರಗೊಂಡಿರೋದಾಗಿ ತಿಳಿದು ಬಂದಿದೆ.
ಈ ಬಗ್ಗೆ ಗುರುಗ್ರಾಮದ ಮೇದಾಂತ ಆಸ್ಪತ್ರೆಯಿಂದ ಮಾಹಿತಿ ನೀಡಲಾಗಿದ್ದು, ಮುಲಾಯಂ ಸಿಂಗ್ ಯಾದವ್ ( Mulayam Singh Yadav ) ಅವರ ಆರೋಗ್ಯ ಸ್ಥಿತಿ ಗಂಭೀರಗೊಂಡಿದೆ. ಈಗ ತೀವ್ರ ನಿಗಾ ಘಟಕದಲ್ಲಿ (ಐಸಿಯು) ಚಿಕಿತ್ಸೆ ಮುಂದುವರಿದಿದೆ. ಜೀವ ಉಳಿಸುವ ಔಷಧಿಗಳ ಮೂಲಕ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿಸಿದೆ.
2024 ರ ಚುನಾವಣೆಗೆ ಬಿಜೆಪಿ ಸಜ್ಜು: 144 ಲೋಕಸಭಾ ಕ್ಷೇತ್ರಗಳಲ್ಲಿ ರ್ಯಾಲಿ ನಡೆಸಲಿರುವ ಪ್ರಧಾನಿ ಮೋದಿ
ಮುಲಾಯಂ ಸಿಂಗ್ ಯಾದವ್ ಅವರಿಗೆ ತಜ್ಞರ ಸಮಗ್ರ ತಂಡವು ಚಿಕಿತ್ಸೆ ನೀಡುತ್ತಿದೆ ಎಂದು ಮೇದಾಂತ ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕ ಡಾ.ಸಂಜೀವ್ ಗುಪ್ತಾ ತಿಳಿಸಿದ್ದಾರೆ.
“ಶ್ರೀ ಮುಲಾಯಂ ಸಿಂಗ್ ಯಾದವ್ ಅವರು ಇಂದು ಸಾಕಷ್ಟು ಗಂಭೀರವಾಗಿದ್ದಾರೆ ಮತ್ತು ಜೀವ ಉಳಿಸುವ ಔಷಧಿಗಳ ಬಗ್ಗೆ, ಅವರನ್ನು ಗುರ್ಗಾಂವ್ನ ಮೇದಾಂತ ಆಸ್ಪತ್ರೆಯ ಐಸಿಯುನಲ್ಲಿ ತಜ್ಞರ ಸಮಗ್ರ ತಂಡದಿಂದ ಚಿಕಿತ್ಸೆ ನೀಡಲಾಗುತ್ತಿದೆ” ಎಂದು ಸಮಾಜವಾದಿ ಪಕ್ಷ ಟ್ವೀಟ್ ಮಾಡಿ ತಿಳಿಸಿದೆ.
मेदांता अस्पताल ने जारी किया आदरणीय नेताजी का हेल्थ बुलेटिन:
Shri Mulayam Singh Yadav ji is quite critical today and on life saving drugs, he is being treated in the ICU of Medanta Hospital, Gurgaon by a comprehensive team of specialists.
— Samajwadi Party (@samajwadiparty) October 9, 2022