ಕೆಎನ್ಎನ್ ಡಿಜಿಟಲ್ ಡೆಸ್ಕ್ : ಸಮಾಜವಾದಿ ಪಕ್ಷದ ಸಂಸ್ಥಾಪಕ ಮುಲಾಯಂ ಸಿಂಗ್ ಯಾದವ್ ಅವರ ಸ್ಥಿತಿ ಚಿಂತಾಜನಕವಾಗಿದೆ. ಅವರಿಗೆ ಜೀವರಕ್ಷಕ ಔಷಧಗಳನ್ನು ನೀಡಲಾಗುತ್ತಿದೆ ಎಂದು ಮೇದಾಂತ ಆಸ್ಪತ್ರೆ ಬುಲೆಟಿನ್ ನಲ್ಲಿ ತಿಳಿಸಿದೆ. ಯಾದವ್ ಅವರನ್ನು ಗುರುಗ್ರಾಮ್ನ ಮೇದಾಂತ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ದಾಖಲಿಸಲಾಗಿದೆ.
BREAKING NEWS ; ‘ನೇಪಾಳದ ಬಾರಾ ನಗರ’ದಲ್ಲಿ ಭೀಕರ ರಸ್ತೆ ಅಪಘಾತ ; 16 ಜನ ಸಾವು, 24 ಮಂದಿ ಸ್ಥಿತಿ ಗಂಭೀರ
ಯಾದವ್ ಅವರ ಾರೋಗ್ಯ ಸ್ಥಿತಿಯ ಕುರಿತಂತೆ ಸಮಾಜವಾದಿ ಪಕ್ಷ ಕೂಡ ತನ್ನ ಅಧಿಕೃತ ಖಾತೆಯಿಂದ ಆರೋಗ್ಯ ಅಪ್ಡೇಟ್ ಅನ್ನು ಟ್ವೀಟ್ ಮಾಡಿದೆ.
ಮುಲಾಯಂ ಸಿಂಗ್ ಯಾದವ್ ಅವರ ಸ್ಥಿತಿ ಗಂಭೀರವಾಗಿದೆ. ಅವರಿಗೆ ಸಮಗ್ರ ತಜ್ಞರ ತಂಡದಿಂದ ಗುರುಗ್ರಾಮ್ನ ಮೇದಾಂತ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಆಸ್ಪತ್ರೆಯು ಆರೋಗ್ಯ ಬುಲೆಟಿನ್ನಲ್ಲಿ ತಿಳಿಸಿದೆ.
मेदांता अस्पताल ने जारी किया आदरणीय नेताजी का हेल्थ बुलेटिन: pic.twitter.com/jY5kLK8sW4
— Samajwadi Party (@samajwadiparty) October 6, 2022
82 ವರ್ಷದ ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಅವರು ಆಗಸ್ಟ್ 22 ರಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಅವರ ಆರೋಗ್ಯ ಹದಗೆಟ್ಟ ಪರಿಣಾಮ ಅಕ್ಟೋಬರ್ 2 ರಂದು ಐಸಿಯುಗೆ ಶಿಫ್ಟ್ ಮಾಡಿಲಾಗಿದ್ದು, ಚಿಕಿತ್ಸೆ ಮುಂದುವರೆದಿದೆ.
ಬುಧವಾರ ಹರಿಯಾಣ ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್ ಆಸ್ಪತ್ರೆಗೆ ಭೇಟಿ ನೀಡಿದ್ದರು.
ಮುಲಾಯಂ ಯಾದವ್ ಅವರನ್ನು ಐಸಿಯುಗೆ ಸ್ಥಳಾಂತರಿಸಿದ ನಂತರ ಪ್ರಧಾನಿ ನರೇಂದ್ರ ಮೋದಿ ಅವರು ಸಮಾಜವಾದಿ ಪಕ್ಷದ ಅಧ್ಯಕ್ಷ ಅಖಿಲೇಶ್ ಯಾದವ್ ಅವರೊಂದಿಗೆ ಮಾತನಾಡಿದ್ದಾರೆ ಮತ್ತು ಅವರಿಗೆ ಸಾಧ್ಯವಿರುವ ಎಲ್ಲಾ ಬೆಂಬಲದ ಭರವಸೆ ನೀಡಿದ್ದಾರೆ ಎನ್ನಲಾಗುತ್ತಿದೆ.
ಈ ವಾರದ ಆರಂಭದಲ್ಲಿ ತೆಲಂಗಾಣ ಮುಖ್ಯಮಂತ್ರಿ ಕೆ ಚಂದ್ರಶೇಖರ್ ರಾವ್ ಅವರು ಅಖಿಲೇಶ್ ಯಾದವ್ ಅವರನ್ನು ಭೇಟಿ ಮಾಡಿ ಅವರ ತಂದೆಯ ಆರೋಗ್ಯದ ಬಗ್ಗೆ ವಿಚಾರಿಸಿದರು. ಕಳೆದ ತಿಂಗಳು ಬಿಹಾರ ಸಿಎಂ ನಿತೀಶ್ ಕುಮಾರ್ ಅವರು ಮೇದಾಂತ ಆಸ್ಪತ್ರೆಯಲ್ಲಿ ಮುಲಾಯಂ ಸಿಂಗ್ ಯಾದವ್ ಅವರನ್ನು ಭೇಟಿ ಮಾಡಿದ್ದರು.
ಉತ್ತರ ಪ್ರದೇಶದ ಪ್ರಮುಖ ನಾಯಕರಲ್ಲಿ ಒಬ್ಬರಾದ ಯಾದವ್ ಅವರು ಮೂರು ಅವಧಿಗೆ ರಾಜ್ಯದ ಸಿಎಂ ಆಗಿದ್ದರು. 10 ಬಾರಿ ಶಾಸಕರಾಗಿ ಮತ್ತು ಏಳು ಬಾರಿ ಲೋಕಸಭೆ ಸಂಸದರಾಗಿರುವ ಯಾದವ್ ಅವರು ಕೇಂದ್ರ ಸರ್ಕಾರದಲ್ಲಿ ರಕ್ಷಣಾ ಸಚಿವ ಸ್ಥಾನವನ್ನೂ ಅಲಂಕರಿಸಿದ್ದರು.