ಕೆಎನ್ಎನ್ ಡಿಜಿಟಲ್ ಡೆಸ್ಕ್ : ಸಮಾಜವಾದಿ ಪಕ್ಷದ ಸಂಸ್ಥಾಪಕ ಮುಲಾಯಂ ಸಿಂಗ್ ಯಾದವ್ ಅವರ ಸ್ಥಿತಿ ಚಿಂತಾಜನಕವಾಗಿದೆ ಎಂದು ಆಸ್ಪತ್ರೆಯ ಮೂಲಗಳು ತಿಳಿಸಿದೆ.
ಮುಲಾಯಂ ಸಿಂಗ್ ಯಾದವ್ ಅವರನ್ನು ಗುರುಗ್ರಾಮ್ನ ಮೇದಾಂತ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ದಾಖಲಿಸಲಾಗಿದ್ದು, ಅವರನ್ನು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಭೇಟಿಯಾಗಿ ಆರೋಗ್ಯ ವಿಚಾರಿಸಿದ್ದಾರೆ.
ಸಮಾಜವಾದಿ ಪಕ್ಷದ ಸಂಸ್ಥಾಪಕ ಮುಲಾಯಂ ಸಿಂಗ್ ಅವರಿಗೆ ಯಾದವ್ ಗುರುಗ್ರಾಮದ ಮೇದಾಂತ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ (ಐಸಿಯು) ಮುಂದುವರಿದಿದ್ದು, ಅವರ ಸ್ಥಿತಿ ಗಂಭೀರವಾಗಿದೆ ಎಂದು ಆಸ್ಪತ್ರೆಮೂಲಗಳು ಶುಕ್ರವಾರ ತಿಳಿಸಿದೆ. ಅವರಿಗೆ ಜೀವ ರಕ್ಷಕ ಔಷಧಿಗಳನ್ನು ನೀಡಲಾಗುತ್ತಿದೆ ಎಂದು ಹೆಲ್ತ್ ಬುಲೆಟಿನ್ ನಲ್ಲಿ ತಿಳಿಸಲಾಗಿದೆ.
#WATCH | Haryana: Defence Minister Rajnath Singh reaches the Medanta hospital in Gurugram to visit the ailing former UP CM Mulayam Singh Yadav admitted there pic.twitter.com/gBHuZa3TcP
— ANI (@ANI) October 7, 2022