ಕೋಲಾರ: ಶಾಸಕ ಕೊತ್ತನೂರು ಮಂಜುನಾಥ್ ಆಪ್ತ, ಮುಳುಬಾಗಿಲು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಂ.ಸಿ ನೀಲಕಂಠೇಗೌಡ ಹೃದಯಾಘಾತದಿಂದ ನಿಧನರಾಗಿದ್ದಾರೆ. ಈ ಮೂಲಕ ಮುಳಬಾಗಿಲು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಂ.ಸಿ ನೀಲಕಂಠೇಗೌಡ ಹೃದಯಾಘಾತದಿಂದ ನಿಧನರಾಗಿದ್ದಾರೆ.
ಕಳೆದ ರಾತ್ರಿ ತೀವ್ರ ಹೃದಯಾಘಾತಕ್ಕೆ ಒಳಗಾಗಿದಂತ ಶಾಸಕ ಕೊತ್ತನೂರು ಮಂಜುನಾಥ್ ಆಪ್ತ ಹಾಗೂ ಮುಳಬಾಗಿಲು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಂ.ಸಿ ನೀಲಕಂಠೇಗೌಡ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇದೀಗ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿರುವುದಾಗಿ ತಿಳಿದು ಬಂದಿದೆ.
ಈ ಹಿಂದೆ ಮುಳಬಾಗಿಲು ತಾಲ್ಲೂಕು ಪಂಚಾಯ್ತಿ ಅಧ್ಯಕ್ಷರಾಗಿಯೂ ಆಡಳಿತ ನಡೆಸಿದ್ದರು. ಪಿಎಲ್ ಡಿ ಬ್ಯಾಂಕ್ ಅಧ್ಯಕ್ಷರಾಗಿ, ಡಿಸಿಸಿ ಬ್ಯಾಂಕ್ ನಿರ್ದೇಶಕಾಗಿಯೂ ಕಾರ್ಯನಿರ್ವಹಿಸುತ್ತಿದ್ದರು. ಮುಳುಬಾಗಿಲು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿದ್ದಂತ ನೀಲಕಂಠೇಗೌಡ ಅವರು, ಇದೀಗ ಹೃದಯಾಘಾತದಿಂದ ನಿಧನರಾಗಿದ್ದಾರೆ.
ರಾಜ್ಯಸಭೆಯಲ್ಲಿ ರೇಲ್ವೆ ತಿದ್ದುಪಡಿ ಮಸೂದೆ ಮೇಲೆ ಹೆಚ್.ಡಿ.ದೇವೇಗೌಡರ ಚರ್ಚೆ
BREAKING NEWS: 2ನೇ ಬಾರಿಗೆ ಭಾರತ ಸೇರಿದಂತೆ ವಿಶ್ವದಾದ್ಯಂತ ‘X’ ಡೌನ್: ಬಳಕೆದಾರರು ಪರದಾಟ | X Down