ಮುಂಬೈ: ಮುಂಬೈನ ಖಾರ್ ರೋಡ್ ರೈಲ್ವೆ ನಿಲ್ದಾಣದ ಬಳಿಯ ರೈಲ್ವೆ ಕಾರ್ ಶೆಡ್ ನಲ್ಲಿ ಶನಿವಾರ ರಾತ್ರಿ ಭಾರಿ ಬೆಂಕಿ ಅವಘಡ ಸಂಭವಿಸಿದೆ. ಮಾಹಿತಿಯ ಪ್ರಕಾರ, ಶನಿವಾರ ರಾತ್ರಿ 10.30 ರ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿದೆ.
ಸ್ಥಳೀಯರು ಈ ಘಟನೆಯನ್ನು ಮುಂಬೈ ಅಗ್ನಿಶಾಮಕ ದಳಕ್ಕೆ (ಎಂಎಫ್ಬಿ) ವರದಿ ಮಾಡಿದ್ದಾರೆ ಮತ್ತು ಮಾಹಿತಿ ಪಡೆದ ನಂತರ ಅಗ್ನಿಶಾಮಕ ದಳದವರು ಸ್ಥಳಕ್ಕೆ ಧಾವಿಸಿದರು.ಬೆಂಕಿ ನಂದಿಸುವ ಕಾರ್ಯ ಮುಂದುವರೆಸಿದರು.
ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಬಾಂದ್ರಾ ಟರ್ಮಿನಸ್ ಕೋಚಿಂಗ್ ಡಿಪೋದ ಸ್ಟೋರ್ ರೂಮ್ ಒಂದರಲ್ಲಿ ಶನಿವಾರ ರಾತ್ರಿ ಸಣ್ಣ ಬೆಂಕಿ ಕಾಣಿಸಿಕೊಂಡಿದೆ ಎಂದು ಪಶ್ಚಿಮ ರೈಲ್ವೆ ವಕ್ತಾರರು ಮಾಹಿತಿ ನೀಡಿದ್ದಾರೆ. ರಾತ್ರಿ 10.40 ರ ಸುಮಾರಿಗೆ ಮೂರು ಅಗ್ನಿಶಾಮಕ ದಳಗಳು ಬೆಂಕಿಯನ್ನು ನಿಯಂತ್ರಣಕ್ಕೆ ತಂದವು ಎಂದು ಅವರು ಹೇಳಿದರು