ತುಮಕೂರು : ತುಮಕೂರಿನಲ್ಲಿ ಭೀಕರವಾದ ಕೊಲೆಯಾಗಿದ್ದು ಮೂರು ಕೋಟಿ ಮೌಲ್ಯದ ಜಾಗಕ್ಕಾಗಿ ರಿಯಲ್ ಎಸ್ಟೇಟ್ ಉದ್ಯಮಿಯೊಬ್ಬ 25 ವರ್ಷದ ಯುವಕನನ್ನು ತೋಟದಲ್ಲಿ ಮಚ್ಚಿನಿಂದ ಕೊಚ್ಚಿ ಭೀಕರವಾಗಿ ಕೊಲೆ ಮಾಡಿರುವ ಘಟನೆ ತುಮಕೂರು ಜಿಲ್ಲೆಯ ಶಿರಾ ತಾಲೂಕಿನಲ್ಲಿ ನಡೆದಿದೆ.
ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ಕಳ್ಳಂಬೆಳ್ಳದ ಮಧುವನ್ (25) ಕೊಲೆಯಾದ ಯುವಕ. ನಿನ್ನ ತೋಟದಲ್ಲಿ ನಡೆದ ಗಲಾಟೆ ವೇಳೆ ಉದ್ಯಮಿ ಮಹೇಶ್ ಹಾಗೂ ಶಫಿವುಲ್ಲಾ ಮಚ್ಚಿನಿಂದ ಹಲ್ಲೆ ನಡೆಸಿ ಹತ್ಯೆ ಮಾಡಿದ್ದಾರೆ. ಪ್ರಕರಣ ಸಂಬಂಧ ರಿಯಲ್ ಎಸ್ಟೇಟ್ ಉದ್ಯಮಿ ಮಹೇಶ್ ಮತ್ತು ಶಫಿವುಲ್ಲಾನನ್ನ ವಶಕ್ಕೆ ಪಡೆದು ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.








