ಹುಬ್ಬಳ್ಳಿ: ಕೊಲೆ ಆರೋಪಿಯೊಬ್ಬ ಪೊಲೀಸ್ ಠಾಣೆಯಿಂದಲೇ, ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿ ಎಸ್ಕೇಪ್ ಆಗಿರುವಂತ ಘಟನೆ ಹುಬ್ಬಳ್ಳಿಯ ಬೆಂಡಿಗೇರಿ ಠಾಣೆಯಲ್ಲಿ ನಡೆದಿದೆ.
ಕೊಲೆ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಆರೋಪಿಯಾಗಿದ್ದಂತ ಪ್ರಜ್ವಲ್ ಎಂಬಾತನನ್ನು ವಶಕ್ಕೆ ಪಡೆದು, ಹುಬ್ಬಳ್ಳಿಯ ಬೆಂಡಿಗೇರಿ ಠಾಣೆಗೆ ಪೊಲೀಸರು ಕರೆತಂದಿದ್ದರು. ಆದರೇ ಕೊಲೆ ಆರೋಪಿ ಪ್ರಜ್ವಲ್ ಪೊಲೀಸರ ಕಣ್ತಪ್ಪಿಸಿ ಠಾಣೆಯಿಂದಲೇ ಎಸ್ಕೇಪ್ ಆಗಿದ್ದಾನೆ.
ಈ ಬಗ್ಗೆ ಹುಬ್ಬಳ್ಳಿ ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ಮಾತನಾಡಿ, ಆದಷ್ಟು ಬೇಗ ಠಾಣೆಯಿಂದ ಪರಾರಿಯಾಗಿರುವಂತ ಕೊಲೆ ಆರೋಪಿಯನ್ನು ಹಿಡಿಯುತ್ತೇವೆ. ಪೊಲೀಸರ ನಿರ್ಲಕ್ಷ್ಯದಿಂದ ಈ ಘಟನೆ ನಡೆದಿರೋದು ಮೇಲ್ನೋಟಕ್ಕೆ ಕಂಡು ಬಂದಿದೆ. ಈ ಬಗ್ಗೆ ಇನ್ಸ್ ಪೆಕ್ಟರ್ ಗೆ ವರದಿ ನೀಡುವಂತೆ ಸೂಚಿಸಿದ್ದೇನೆ ಎಂದರು.
ಹುಬ್ಬಳ್ಳಿಯ ಬೆಂಡಿಗೇರಿ ಠಾಣೆಯಿಂದ ಕೊಲೆ ಆರೋಪಿ ಪ್ರಜ್ವಲ್ ಎಸ್ಕೇಪ್ ಆಗಿದ್ದರ ಬಗ್ಗೆ ವರದಿಯನ್ನು ಆಧರಿಸಿ ಮುಂದಿನ ಕ್ರಮ ಕೈಗೊಳ್ಳಲಾಗುತ್ತದೆ. ಒಂದು ವೇಳೆ ಪೊಲೀಸರು ಕರ್ತವ್ಯ ಲೋಪ ಎಸಗಿದ್ದರೇ, ಅಂತಹ ಸಿಬ್ಬಂದಿ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಕಮೀಷನರ್ ಎನ್.ಶಶಿಕುಮಾರ್ ಹೇಳಿದ್ದಾರೆ.
BIG NEWS: ರಾಜ್ಯ ಸರ್ಕಾರದಿಂದ ಮತ್ತೊಂದು ಮಹಾ ಎಡವಟ್ಟು: ಸರ್ಕಾರಿ ಗೌರವದ ಖರ್ಚು-ವೆಚ್ಚ ಪಾವತಿಸುವಂತೆ ಬಿಲ್!








