ಉತ್ತರ ಕನ್ನಡ: ಜಿಲ್ಲೆಯ ಪ್ರಸಿದ್ಧ ಪ್ರವಾಸಿ ತಾಣವಾಗಿರುವಂತ ಮುರುಡೇಶ್ವರ ಬೀಚ್ ಗೆ ಹೊಸ ವರ್ಷದಿಂದ ತೆರೆಯಲಾಗುತ್ತಿದೆ. ಪ್ರವಾಸಿಗರಿಗೆ ವಿಧಿಸಿದ್ದಂತ ನಿರ್ಬಂಧವನ್ನು ತೆರವುಗೊಳಿಸುತ್ತಿರುವುದಾಗಿ ಡಿಸಿ ಲಕ್ಷ್ಮೀ ಪ್ರಿಯಾ ತಿಳಿಸಿದ್ದಾರೆ.
ಇಂದು ಕಾರವಾರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಹೊಸ ವರ್ಷಕ್ಕೆ ಮುರುಡೇಶ್ವರ ಕಡಲ ತೀರಕ್ಕೆ ಪ್ರವಾಸಿಗರ ಪ್ರವೇಶಕ್ಕೆ ಅವಕಾಶ ನೀಡಲಾಗುತ್ತಿದೆ. ಕಡಿಮೆ ಸ್ಥಳದಲ್ಲಿ ನಾವು ಸ್ವಿಮ್ಮಿಂಗ್ ಜೋನ್ ಮಾಡಿದ್ದೇವೆ. ನಾಳೆಯಿಂದ ಎಷ್ಟು ಜನ ಬರ್ತಾರೆಂದು ನೋಡಿ ವಿಸ್ತರಣೆ ಮಾಡುತ್ತೇವೆ. ಸ್ವಿಮ್ಮಿಂಗ್ ಜೋನ್ ಮತ್ತಷ್ಟು ವಿಸ್ತರಣೆ ಮಾಡಲಾಗುತ್ತದೆ ಎಂದರು.
ಜಿಲ್ಲೆಗೆ ಬರುವಂತೆ ಪ್ರವಾಸಿಗರ ರಕ್ಷಣೆಯೇ ನಮ್ಮ ಆದ್ಯತೆಯಾಗಿದೆ. ಸದ್ಯ ಕಡಲ ತೀರದಲ್ಲಿ ಸುರಕ್ಷತೆ ಕ್ರಮವನ್ನು ಕೈಗೊಂಡಿದ್ದೇವೆ. ಹೆಚ್ಚಿನ ಪೊಲೀಸ್ ಭದ್ರತೆ ಒದಗಿಸುವಂತೆಯೂ ತಿಳಿಸಲಾಗಿದೆ ಎಂದರು.
ಅಂದಹಾಗೇ ಕಳೆದ 20 ದಿನಗಳಿಂದ ಮುರ್ಡೇಶ್ವರ ಕಡಲ ತೀರಕ್ಕೆ ಪ್ರವಾಸಿಗರಿಗೆ ನಿರ್ಬಂಧ ವಿಧಿಸಲಾಗಿತ್ತು. ಕಾರಣ ನಾಲ್ವರು ವಿದ್ಯಾರ್ಥಿಗಳು ಸಮುದ್ರಪಾಲಾದ ಘಟನೆ ನಂತ್ರವಾಗಿತ್ತು. ಈಗ ನಾಳೆಯಿಂದ ಮುರ್ಡೇಶ್ವರ ಕಡಲ ತೀರಕ್ಕೆ ಪ್ರವಾಸಿಗರ ಭೇಟಿಗೆ ಅವಕಾಶ ನೀಡಲಾಗುತ್ತಿದೆ.
BIG NEWS: ಕರ್ನಾಟಕದಲ್ಲಿ ನಾಲ್ಕು ತಿಂಗಳಲ್ಲಿ 217 ತಾಯಂದಿರ ಸಾವು: ವರದಿ | Maternal Deaths In Karnataka
BIGG NEWS : 2025 ನೇ ಸಾಲಿನ ರಾಜ್ಯ `ಸಾರ್ವತ್ರಿಕ ರಜೆ’ ದಿನಗಳ ಸಂಪೂರ್ಣ ಪಟ್ಟಿ ಇಲ್ಲಿದೆ | Holiday List 2025