ಕೊಲ್ಕತ್ತಾ : ಪಶ್ಚಿಮ ಬಂಗಾಳದ ಮುರ್ಶಿದಾಬಾದ್‌ನಲ್ಲಿ ವಕ್ಫ್ ಕಾಯ್ದೆಯ ವಿರುದ್ಧದ ಪ್ರತಿಭಟನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿಯು ಎನ್ಐಎ ತನಿಖೆಗೆ ಕೋರಿ ಅರ್ಜಿ ಸಲ್ಲಿಸಿತ್ತು. ಆದರೆ ಬಿಜೆಪಿ ಸಲ್ಲಿಸಿದ ಅರ್ಜಿಯನ್ನು ಇದೀಗ ಕೊಲ್ಕತ್ತಾ ಹೈಕೋರ್ಟ್ ತಿರಸ್ಕರಿಸಿದೆ.
ಹೌದು ವಕ್ಫ್ ತಿದ್ದುಪಡಿ ಕಾಯ್ದೆಯ ವಿರುದ್ಧವಾಗಿ ಕಳೆದ ಏಪ್ರಿಲ್ 11ರಂದು ಪಶ್ಚಿಮ ಬಂಗಾಳದ ಮುಶಿದಾಬಾದ್ ನಲ್ಲಿ ಗಲಭೆ ನಡೆದಿತ್ತು. ಈ ಒಂದು ಗಲಭೆಗೆ ಪ್ರಕರಣಕ್ಕೆ ಸಂಬಂಧಪಟ್ಟಂತೆ NIA ತನಿಖೆ ನಡೆಸುವಂತೆ ಬಿಜೆಪಿ ಅರ್ಜಿ ಸಲ್ಲಿಸಿತ್ತು. ಆದರೆ ಕೊಲ್ಕತ್ತಾ ಹೈಕೋರ್ಟ್ ಅರ್ಜಿ ತಿರಸ್ಕೃರಿಸಿದೆ. ಬಿಜೆಪಿ ಸಲ್ಲಿಸಿದ ಅರ್ಜಿಯನ್ನು ಕೋಲ್ಕತ್ತಾ ಹೈಕೋರ್ಟ್ ಇದೀಗ ತಿರಸ್ಕರಿಸಿದೆ.
ಘಟನೆ ಹಿನ್ನೆಲೆ?
ಏಪ್ರಿಲ್ 11 ಮತ್ತು 12 ರಂದು ಮುರ್ಶಿದಾಬಾದ್‌ನ ಸುತಿ, ಧುಲಿಯನ್ ಮತ್ತು ಜಂಗೀಪುರ ಸೇರಿದಂತೆ ಕೆಲವು ಪ್ರದೇಶಗಳಲ್ಲಿ ತಿದ್ದುಪಡಿ ಮಾಡಿದ ವಕ್ಫ್ ಕಾಯ್ದೆಯ ವಿರುದ್ಧದ ಪ್ರತಿಭಟನೆಗಳ ಸಂದರ್ಭದಲ್ಲಿ ಹಿಂಸಾಚಾರ ಭುಗಿಲೆದ್ದಿತ್ತು. ಹಿಂಸಾಚಾರದಲ್ಲಿ ಕನಿಷ್ಠ ಮೂವರು ಸಾವನ್ನಪ್ಪಿದ್ದು, ಹಲವು ಮಂದಿ ಗಾಯಗೊಂಡಿದ್ದಾರೆ.
ನೂರಾರು ಜನರು ನಿರಾಶ್ರಿತರಾಗಿದ್ದು, ಭಯಭೀತ ಗ್ರಾಮಸ್ಥರು ಊರು ತೊರೆದಿದ್ದರು. ಪರಿಸ್ಥಿತಿ ನಿಯಂತ್ರಣಕ್ಕೆ ಸ್ಥಳದಲ್ಲಿ ಕೇಂದ್ರ ಭದ್ರತಾ ಪಡೆಗಳನ್ನು ನಿಯೋಜಿಸಲಾಗಿದೆ. ಇಂಟರ್‌ನೆಟ್ ಸ್ಥಗಿತಗೊಳಿಸಲಾಗಿತ್ತು. ಘಟನೆ ಸಂಬಂಧ ಈವರೆಗೂ 200ಕ್ಕೂ ಅಧಿಕ ಮಂದಿಯನ್ನು ಬಂಧಿಸಲಾಗಿದೆ.