ಚಿತ್ರದುರ್ಗ: ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ಆರೋಪದಲ್ಲಿ ಬಂಧನಕ್ಕೆ ಒಳಗಾಗಿ, ನ್ಯಾಯಾಂಗ ಬಂಧನದಲ್ಲಿರುವಂತ ಮುರುಘಾ ಶ್ರೀಗಳು, ಜಾಮೀನಿಗಾಗಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು.ಈ ಅರ್ಜಿಯನ್ನು ಕೋರ್ಟ್ ತಿರಸ್ಕರಿಸಿದ್ದು, ಮುರುಘಾ ಸ್ವಾಮೀಜಿಗಳಿಗೆ ಮತ್ತೆ ಶಾಕ್ ಎದುರಾಗಿದೆ.
BIG NEWS: ಚೆಕ್ ಬೌನ್ಸ್ ಪ್ರಕರಣ; ಮೂಡಿಗೆರೆ ಶಾಸಕನಿಗೆ ಜಾಮೀನು ರಹಿತ ವಾರಂಟ್ ಜಾರಿ | Non bailable warrant
ಚಿತ್ರದುರ್ಗ 2ನೇ ಅಪರ ಜಿಲ್ಲಾ ಹಾಗೂ ಸತ್ರ ನ್ಯಾಯಾಲಯ ಮುರುಘಾ ಶ್ರೀಗಳ ಜಾಮೀನು ಅರ್ಜಿಯನ್ನು ತಿರಸ್ಕರಿಸಿದೆ. ಸೆಪ್ಟೆಂಬರ್ 27ರವರೆಗೆ ನ್ಯಾಯಾಂಗ ಬಂಧನದಲ್ಲಿರುವ ಮುರುಘಾ ಶ್ರೀಗಳಿಗೆ ಹೃದಯಾ ಸಮಸ್ಯೆಯಿಂದ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಾಗಿದ್ದರು. ಸೆಪ್ಟೆಂಬರ್ 19ಕ್ಕೆ ಮುರುಘಾ ಶ್ರೀಗಳ ಜಾಮೀನು ಅರ್ಜಿ ವಿಚಾರಣೆ ನಡೆಸಿದ ಚಿತ್ರದುರ್ಗ ಕೋರ್ಟ್, ತೀರ್ಪನ್ನು ಸೆಪ್ಟೆಂಬರ್ 23ಕ್ಕೆ ಕಾಯ್ದಿರಿಸಿತ್ತು. ಇದೀಗ ತೀರ್ಪು ಪ್ರಕಟಿಸಿದ ಕೋರ್ಟ್, ಜಾಮೀನು ನೀಡಲು ನಿರಾಕರಿಸಿದೆ.
BIG NEWS: ಚೆಕ್ ಬೌನ್ಸ್ ಪ್ರಕರಣ; ಮೂಡಿಗೆರೆ ಶಾಸಕನಿಗೆ ಜಾಮೀನು ರಹಿತ ವಾರಂಟ್ ಜಾರಿ | Non bailable warrant
ಇನ್ನು ಜೈಲಿನಲ್ಲಿದ್ದ ಮುರುಘಾ ಶ್ರೀಗಳ ಆರೋಗ್ಯದಲ್ಲಿ ಏರುಪೇರಾಗಿತ್ತು. ಹೀಗಾಗಿ ಚಿಕಿತ್ಸೆಗಾಗಿ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ಕರೆದೊಯ್ಯಲು ಕೋರ್ಟ್ ಸೂಚನೆ ನೀಡಿತ್ತು. ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮುರುಘಾ ಶ್ರೀಗಳ ಆರೋಗ್ಯ ಚೇತರಿಕೆ ಕಂಡಿದೆ. ಹೃದಯ ಸಮಸ್ಯೆ ಹಿನ್ನೆಲೆಯಲ್ಲಿ ದಾಖಲಾದ ಚಿತ್ರದುರ್ಗ ಮುರುಘಾ ಮಠದ ಶಿವಮೂರ್ತಿ ಮುರುಘಾ ಸ್ವಾಮೀಜಿ ಅವರಿಗೆ ಯಶಸ್ವಿಯಾಗಿ ಆ್ಯಂಜಿಯೋಗ್ರಾಂ ಮಾಡಲಾಗಿದ್ದು, ಶ್ರೀಗಳ ಆರೋಗ್ಯ ಸ್ಥಿರವಾಗಿದೆ. ಹೀಗಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಿದ್ದಾರೆ.