ಬೆಂಗಳೂರು: ಮುರುಘಾಶ್ರೀಗಳ ವಿರುದ್ಧ ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ಶ್ರೀಗಳ ಜಾಮೀನು ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಡಿಸೆಂಬರ್ 16ಕ್ಕೆ ಮುಂದೂಡಿದೆ.
BIGG NEWS: ಬೆಂಗಳೂರಿನಲ್ಲಿ ಕಳ್ಳತನ ಮಾಡುತ್ತಿದ್ದ ಕಳ್ಳನಿಗೆ ಕಾಲಿಗೆ ಗುಂಡು ಹಾರಿಸಿದ ಮನೆ ಮಾಲೀಕ
ಜಾಮೀನು ಕೋರಿ ಶಿವಮೂರ್ತಿ ಶರಣರು ಸಲ್ಲಿಸಿರುವ ಅರ್ಜಿ ವಿಚಾರಣೆಯನ್ನು ಏಕಸದಸ್ಯ ಪೀಠ ನಡೆಸಿತು. ನ್ಯಾಯಮೂರ್ತಿ ಶ್ರೀನಿವಾಸ್ ಹರೀಶ್ ಕುಮಾರ್ ಅವರಿದ್ದ ಏಕಸದಸ್ಯ ನ್ಯಾಯಪೀಠ ವಿಚಾರಣೆಯನ್ನು ಮುಂದೂಡಿದೆ.ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲರು ಹಾಜರಾಗಿ, ಪ್ರಕರಣ ಸಂಬಂಧ ಈಗಾಗಲೇ ಆರೋಪ ಪಟ್ಟಿ ಸಲ್ಲಿಕೆಯಾಗಿದೆ.
BIGG NEWS: ಬೆಂಗಳೂರಿನಲ್ಲಿ ಕಳ್ಳತನ ಮಾಡುತ್ತಿದ್ದ ಕಳ್ಳನಿಗೆ ಕಾಲಿಗೆ ಗುಂಡು ಹಾರಿಸಿದ ಮನೆ ಮಾಲೀಕ
ಈ ನಿಟ್ಟಿನಲ್ಲಿ ಜಾಮೀನು ಕೋರಿ ವಿಚಾರಣಾ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸುವುದಕ್ಕೆ ಅವಕಾಶವಿದೆ. ಆದ್ದರಿಂದ ಅರ್ಜಿದಾರರೊಂದಿಗೆ ಚರ್ಚೆ ನಡೆಸುವುದಕ್ಕೆ ಅವಕಾಶ ಕೋರಿದರು. ಇದಕ್ಕೆ ಸಮ್ಮತಿಸಿದ ನ್ಯಾಯಪೀಠ ವಿಚಾರಣೆಯನ್ನು ಡಿ.16ಕ್ಕೆ ಮುಂದೂಡಿತು.