ಚಿತ್ರದುರ್ಗ: ನಿನ್ನೆ ರಾತ್ರಿ ಪೊಲೀಸರು ಮುರುಘಾ ಮಠದ ಡಾ.ಶಿವಮೂರ್ತಿ ಶಿವಶರಣರನ್ನು ಬಂಧಿಸಿದ್ದರು. ಈ ಬಳಿಕ ನ್ಯಾಯಾಧೀಶರ ಮುಂದೆ ಹಾಜರುಪಡಿಸಿದ್ದರು. ಅವರಿಗೆ 14 ದಿನಗಳ ನ್ಯಾಯಾಂಗ ಬಂಧನ ಕೂಡ ವಿಧಿಸಲಾಗಿತ್ತು. ಈ ಬೆನ್ನಲ್ಲೇ ಹೃದ್ರೋಗದಿಂದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇದೀಗ ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ಜಯದೇವ ಹೃದ್ರೋಗ ಆಸ್ಪತ್ರೆಗೆ ಅವರನ್ನು ಶಿಫ್ಟ್ ಮಾಡಲಾಗುತ್ತಿದೆ.
ಕರಾವಳಿ ಅಭಿವೃದ್ಧಿಗೆ ಪ್ರಧಾನಿ ಮೋದಿ ಶಕ್ತಿ ತುಂಬಲಿದ್ದಾರೆ – ಸಿಎಂ ಬಸವರಾಜ ಬೊಮ್ಮಾಯಿ
ಈ ಬಗ್ಗೆ ಮಾಹಿತಿ ನೀಡಿರುವಂತ ಚಿತ್ರದುರ್ಗದ ಜಿಲ್ಲಾ ಆಸ್ಪತ್ರೆಯ ಸರ್ಜನ್ ಬಸವರಾಜನ್ ಅವರು, ಮುರುಘಾ ಶರಣರ ಆರೋಗ್ಯದಲ್ಲಿ ಏರುಪೇರಾಗಿದೆ. ಈ ಹಿನ್ನಲೆಯಲ್ಲಿ ಹೆಚ್ಚಿನ ಚಿಕಿತ್ಸೆಗಾಗಿ ಚಿತ್ರದುರ್ಗದಿಂದ ಬೆಂಗಳೂರಿನ ಜಯದೇವ ಆಸ್ಪತ್ರೆಗೆ ಕಳುಹಿಸಿಕೊಡಲಾಗುತ್ತಿದೆ ಎಂದು ಹೇಳಿದ್ದಾರೆ.
Viral video : ಪದ್ಮಶ್ರೀ ಪುರಸ್ಕೃತರನ್ನು ಐಸಿಯುನಲ್ಲಿ ನೃತ್ಯ ಮಾಡಿಸಿದ ಸಾಮಾಜಿಕ ಕಾರ್ಯಕರ್ತೆ : ವಿಡಿಯೋ ವೈರಲ್
ಶ್ರೀಗಳು ಹೃದಯ ರೋಗದಿಂದ ಬಳಲುತ್ತಿದ್ದಾರೆ. ಎದೆ ನೋವಿನ ಬಳಲುತ್ತಿದ್ದಂತ ಅವರನ್ನು, ಜಿಲ್ಲಾಸ್ಪತ್ರೆಯಲ್ಲಿ ಬೆಳಿಗ್ಗೆ ಚಿಕಿತ್ಸೆ ನೀಡಲಾಯಿತು. ರಕ್ತದೊತ್ತಡ, ಹೃದ್ರೋಗದಿಂದ ಬಳಲುತ್ತಿರುವಂತ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ದಾವಣಗೆರೆಯ ನಾರಾಯಣ ಹೃದಯಾಲಯದ ವೈದ್ಯರ ಸೂಚನೆಯ ಮೇರೆಗೆ ಬೆಂಗಳೂರಿನ ಜಯದೇವ ಹೃದ್ರೋಗ ಆಸ್ಪತ್ರೆಗೆ ಸ್ಥಳಾಂತರಿಸಲಾಗುತ್ತಿದೆ ಎಂದರು.