ಚಿತ್ರದುರ್ಗ: ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಆರೋಪದಲ್ಲಿ ಮುರುಘಾ ಶ್ರೀಗಳನ್ನು ( Murugha Sri ) ಬಂಧಿಸಲಾಗಿದೆ. ಈ ಪ್ರಕರಣದಲ್ಲಿ ಅವರಿಗೆ ಪೊಲೀಸ್ ಕಸ್ಟಡಿಗೂ ನೀಡಲಾಗಿದೆ. ಆದ್ರೇ ಪ್ರಕರಣದಲ್ಲಿ ಜಾಮೀನು ಇಂದು ಕೂಡ ಸಿಕ್ಕಿಲ್ಲ. ಈ ಅರ್ಜಿಯ ವಿಚಾರಣೆ ನಾಳೆಗೆ ಮುಂದೂಡಿಕೆ ಮಾಡಲಾಗಿದೆ.
BREAKING NEWS: ನಾಳೆ ದೊಡ್ಡಬಳ್ಳಾಪುರದಲ್ಲಿ ನಡೆಯಬೇಕಿದ್ದ ಜನೋತ್ಸವ ಕಾರ್ಯಕ್ರಮ ಮುಂದೂಡಿಕೆ – ಸಿಎಂ ಬೊಮ್ಮಾಯಿ
ಚಿತ್ರದುರ್ಗದ ಮುರುಘಾ ಮಠದ ಡಾ.ಶಿವಮೂರ್ತಿ ಶರಣರ ವಿರುದ್ಧ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಆರೋಪ ಮಾಡಲಾಗಿತ್ತು. ಅವರ ವಿರುದ್ಧ ಪೋಕ್ಸೋ ಕೇಸ್ ಕೂಡ ದಾಖಲಾಗಿದೆ. ಈ ಪ್ರಕರಣದಲ್ಲಿ ಈಗಾಗಲೇ ಸ್ವಾಮೀಜಿಯನ್ನು ಪೊಲೀಸರು ಬಂಧಿಸಲಾಗಿದ್ದು, ವಿಚಾರಣೆಯನ್ನು ನಡೆಸುತ್ತಿದ್ದಾರೆ.
ಇನ್ನೂ ಪೋಕ್ಸೋ ಕೇಸ್ ನಲ್ಲಿ ಜಾಮೀನು ಕೋರಿ ಮುರುಘಾ ಶ್ರೀ ಪರ ವಕೀಲರು ಸಲ್ಲಿಸಿದ್ದಂತ ಜಾಮೀನು ಅರ್ಜಿಯನ್ನು ಇಂದು, ಚಿತ್ರದುರ್ಗದ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಮುಂದೂಡಿಕೆ ಮಾಡಿದೆ. ಹೀಗಾಗಿ ಇಂದು ಕೂಡ ಸ್ವಾಮೀಜಿಗೆ ಜಾಮೀನು ದೊರೆತಿಲ್ಲ.
ಇದೇ ಪ್ರಕರಣದಲ್ಲಿ ಗಂಗಾಧರಯ್ಯ ಎಂಬುವರು ನಿನ್ನೆಯಷ್ಟೇ ಪೊಲೀಸರ ಮುಂದೆ ಶರಣಾಗಿದ್ದರು. ಅಲ್ಲದೇ ಮತ್ತೋರ್ವ ಆರೋಪಿ ಲೇಡಿ ವಾರ್ಡನ್ ಅವರನ್ನು ಪೊಲೀಸ್ ಕಸ್ಟಡಿಗೆ ನೀಡಿ ಆದೇಶಿಸಿತ್ತು.