ಚಿತ್ರದುರ್ಗ : ಮುರುಘಾ ಶ್ರೀಗಳ ವಿರುದ್ಧ ಪಿತೂರಿ ಮಾಡಿದ ಪ್ರಕರಣದ ಹಿನ್ನೆಲೆಯಲ್ಲಿ ಬಂಧಿತರಾಗಿರುವ ಎಸ್.ಕೆ ಬಸವರಾಜನ್ ಹಾಗೂ ಬಸವರಾಜೇಂದ್ರ ಜಾಮೀನು ಅರ್ಜಿ ವಜಾಗೊಂಡಿದೆ.

ಮುರುಘಾಮಠದ ಮಾಜಿ ಆಡಳಿತಾಧಿಕಾರಿ ಬಸವರಾಜನ್ ಹಾಗೂ ಶಿಕ್ಷಕ ಬಸವರಾಜೇಂದ್ರ ಜಾಮೀನು ಅರ್ಜಿಯನ್ನು ವಜಾಗೊಳಿಸಿ ಚಿತ್ರದುರ್ಗದ 2 ನೇ ಹೆಚ್ಚುವರಿ ಸೆಷನ್ಸ್ ನ್ಯಾಯಾಲಯ ಇಂದು ಆದೇಶ ಹೊರಡಿಸಿದೆ. ಈ ಮೂಲಕ ಇಬ್ಬರಿಗೂ ಜೈಲೇ ಗತಿ ಆಗಿದೆ.

ಈ ಇಬ್ಬರು ಆರೋಪಿಗಳು ಮುರುಘಶ್ರೀ ವಿರುದ್ಧ ಪಿತೂರಿ ನಡೆಸಿದ್ದಾರೆ ಎನ್ನುವ ಆರೋಪದ ಹಿನ್ನೆಲೆಯಲ್ಲಿ ಬಂಧಿಸಲಾಗಿದ್ದು, ಇಂದು ವಿಚಾರಣೆ ನಡೆಸಿದ ಚಿತ್ರದುರ್ಗದ 2 ನೇ ಹೆಚ್ಚುವರಿ ಸೆಷನ್ಸ್ ನ್ಯಾಯಾಲಯ ಜಾಮೀನು ಅರ್ಜಿ ವಜಾ ಮಾಡಿದೆ. ಇನ್ನೂ, ಬಸವರಾಜನ್ ಪತ್ನಿ ಸೌಭಾಗ್ಯ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿ ಕೂಡ ವಜಾ ಆಗಿದೆ.

ಮುರುಘಾಮಠದ ಮಾಜಿ ಆಡಳಿತಾಧಿಕಾರಿ ಬಸವರಾಜನ್ ಹಾಗೂ ಬಸವರಾಜೇಂದ್ರ ಅವರು ಮುರುಘಶ್ರೀ ವಿರುದ್ಧ ಪಿತೂರಿ ನಡೆಸಿದ್ದಾರೆ ಎನ್ನುವ ಆರೋಪದ ಹಿನ್ನೆಲೆಯಲ್ಲಿ ಬಂಧಿಸಲಾಗಿತ್ತು. ಸದ್ಯ, ಮುರುಘಾ ಮಠದ ಮುರುಘಾ ಶ್ರೀಗಳು ಕೂಡ ನ್ಯಾಯಾಂಗ ಬಂಧನದಲ್ಲಿದ್ದಾರೆ.

‘ಕಬ್ಬು’ ಬೆಳೆಗಾರರಿಗೆ ಭರ್ಜರಿ ಗುಡ್ ನ್ಯೂಸ್ : ಪ್ರತಿ ಮೆಟ್ರಿಕ್ ಟನ್ ಗೆ 50 ರೂ.ಹೆಚ್ಚುವರಿ ಪಾವತಿಗೆ ರಾಜ್ಯ ಸರ್ಕಾರ ಆದೇಶ

BIGG NEWS : ತುಮಕೂರು ಜಿಲ್ಲೆಯಲ್ಲಿ ‘ಅಂತರರಾಷ್ಟ್ರೀಯ ವಿಮಾನ ನಿಲ್ದಾಣ’ ನಿರ್ಮಾಣ : ಸಿಎಂ ಬೊಮ್ಮಾಯಿ ಘೋಷಣೆ

Share.
Exit mobile version