ಗದಗ : ಮುಂದಿನ ಸಿಎಂ ಮುರುಗೇಶ್ ನಿರಾಣಿ ಎಂದು ಪಂಚಮಸಾಲಿ ಸಮಾವೇಶದಲ್ಲಿ ಶಾಸಕ ರಾಮಣ್ಣ ಲಮಾಣಿ ಹೇಳಿಕೆ ನೀಡಿದ್ದು, ರಾಜ್ಯ ರಾಜಕಾರಣದಲ್ಲಿ ಸಂಚಲನ ಸೃಷ್ಟಿಸಿದೆ.

ಇಂದು ಭಾನುವಾರ ಲಕ್ಷ್ಮೇಶ್ವರ ಪಟ್ಟಣದಲ್ಲಿ ರಾಜ್ಯ ವೀರಶೈವ ಲಿಂಗಾಯತ ಪಂಚಮಸಾಲಿ ಸಂಘದಿಂದ ಭಾನುವಾರ ಆಯೋಜಿಸಲಾಗಿದ್ದ ಬೃಹತ್ ಸಮಾವೇಶದಲ್ಲಿ ಮಾತನಾಡಿದ ಅವರು ಸ್ವಲ್ಪ ದಿನದಲ್ಲೇ ಮುರುಗೇಶ್ ನಿರಾಣಿ ಸಿಎಂ ಆಗಲಿದ್ದಾರೆ, ಇಂತವರು ಸಿಎಂ ಆದ್ರೆ ನಮ್ಮಂತಹ ಶಾಸಕರು ಬದುಕುತ್ತೇವೆ ಎಂದು ಹೇಳಿದ್ದಾರೆ.

ಮುಂದಿನ ಸಿಎಂ ಮುರುಗೇಶ್ ನಿರಾಣಿ ಎಂಬ ಹೇಳಿಕೆ ರಾಜ್ಯ ರಾಜಕಾರಣದಲ್ಲಿ ಹಲವು ಚರ್ಚೆ, ಟೀಕೆಗಳಿಗೆ ಕಾರಣವಾಗಿದೆ. ಬಿಜೆಪಿಯಲ್ಲೂ ಸಿಎಂ ಹುದ್ದೆಗೆ ಭಾರಿ ಪೈಪೋಟಿ ನಡೆಯುತ್ತಿದೆ ಎಂಬ ಮಾತುಗಳು ಕೇಳಿಬರುತ್ತಿದೆ. ಮುಂದಿನ ಚುನಾವಣೆ ಬಳಿಕ ರಾಜ್ಯದಲ್ಲಿ ಯಾವ ರೀತಿ ಬದಲಾವಣೆ ಗಾಳಿ ಬೀಸುತ್ತದೆ ಎಂಬುದನ್ನು ಕಾದು ನೋಡಬೇಕಾಗಿದೆ.

BIGG NEWS : ಹನುಮ ಜಯಂತಿಗೆ ಸಜ್ಜಾದ ‘ಅಂಜನಾದ್ರಿ ಬೆಟ್ಟ’ : ಹೈ ಪೊಲೀಸ್ ಅಲರ್ಟ್

BREAKING NEWS: ಮಧ್ಯಪ್ರದೇಶದಲ್ಲಿ ಭೀಕರ ರಸ್ತೆ ಅಪಘಾತ: ಟ್ರಕ್ ಹರಿದು 6 ಮಂದಿ ಸಾವು, 10ಕ್ಕೂ ಹೆಚ್ಚು ಜನರಿಗೆ ಗಾಯ | Madhya Pradesh Accident

Share.
Exit mobile version