ಚಿತ್ರದುರ್ಗ: ಮುರುಘಾ ಮಠದ ಡಾ.ಶಿವಮೂರ್ತಿ ಶಿವಶರಣರ ವಿರುದ್ಧ ದಾಖಲಾಗಿದ್ದಂತ ಪೋಕ್ಸೋ ಕೇಸ್ ( POSCO Case ) ಸಂಬಂಧ 4 ನೇ ಆರೋಪಿ ಮಠದ ಕಾರ್ಯದರ್ಶಿ ಪರಮಶಿವಯ್ಯಅವರನ್ನು ಪೊಲೀಸ್ ವಶಕ್ಕೆ ಪಡೆದಿದೆ.
ಡಿವೈಎಸ್ಪಿ ಕಚೇರಿಯಲ್ಲಿ ಪರಮಶಿವಯ್ಯಅವರನ್ನು ವಿಚಾರಣೆ ನಡೆಸ ನಂತರ ಜಡ್ಜ್ ಮುಂದೆ ಹಾಜರುಪಡಿಸಲಾಗುತ್ತದೆ. ಹೆಚ್ಚಿನ ವಿಚಾರಣೆಗಾಗಿ ಪೊಲೀಸರು ಕಸ್ಟಡಿಗೆ ಕೇಳುವ ಸಾಧ್ಯತೆ ಇದೆ ಎನ್ನಲಾಗಿದೆ.
ಇನ್ನೂ, ಪ್ರಕರಣದ ವಿಚಾರಣೆ ಮುಂದುವರೆದಿದ್ದು, ನಿನ್ನೆ ಸಂತ್ರಸ್ತ ಇಬ್ಬರು ಬಾಲಕೀಯರನ್ನು ವೈದ್ಯಕೀಯ ಪರೀಕ್ಷೆಗೆ ( Medical Test ) ಒಳಪಡಿಸಲಾಯಿತು. ಮುರುಘಾ ಶ್ರೀಗಳು ( Murugha Sri ) ಈಗಾಗಲೇ ಅಪ್ರಾಪ್ತ ಬಾಲಕಿಯರಿಗೆ ಲೈಂಗಿಕ ಕಿರುಕುಳ ಆರೋಪದಲ್ಲಿ ಜೈಲು ಪಾಲಾಗಿದ್ದಾರೆ. ಇಂತಹ ಶ್ರೀಗಳ ವಿರುದ್ಧ ಮತ್ತಿಬ್ಬರು ಬಾಲಕಿಯರು ಲೈಂಗಿಕ ದೌರ್ಜನ್ಯವನ್ನು ಎಸಗಿದ್ದಾರೆ ಎಂಬುದಾಗಿ ಆರೋಪಿಸಿ, ಮೈಸೂರಿನ ಒಡನಾಡಿ ಸಂಸ್ಥೆಯ ಮೂಲಕ ಪೊಲೀಸರಿಗೆ ದೂರು ನೀಡಿದ್ದರು.
ಬಾಲಕಿಯರ ದೂರಿನ ಆಧಾರದ ಮೇಲೆ ಮುರುಘಾ ಶ್ರೀಗಳ ವಿರುದ್ಧ 2ನೇ ಪೋಕ್ಸೋ ಪ್ರಕರಣ ದಾಖಲಾಗಿತ್ತು. ಈ ಪ್ರಕರಣ ಸಂಬಂಧ ಇಂದು ಸಂತ್ರಸ್ತ ಇಬ್ಬರು ಬಾಲಕಿಯರನ್ನು ಚಿತ್ರದುರ್ಗದ ಜಿಲ್ಲಾ ಆಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿದೆ.. ಹೀಗಾಗಿ ಮತ್ತೆ ಮುರುಘಾ ಶ್ರೀಗಳಿಗೆ 2ನೇ ಪೋಕ್ಸೋ ಕೇಸ್ ಪ್ರಕರಣದಲ್ಲಿ ಸಂಕಷ್ಟ ಎದುರಾದಂತೆ ಆಗಿದೆ.